Heart Attack: ಶೌಚದಲ್ಲೇ ಹೃದಯಾಘಾತದಿಂದ ಐಟಿ ಕಂಪನಿಯೊಂದರ ಉದ್ಯೋಗಿ ಸಾವು
Heart Attack: ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನ ಯುವಕರು ಹೃದಯಾಘಾತಕ್ಕೆ ಒಳಗಾಗುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದೀಗ ಐಟಿ ಕಂಪನಿಯೊಂದಲ್ಲಿ ಉದ್ಯೋಗಿಯೊಬ್ಬರು ಶೌಚದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಗಾದರೆ ಈ ಘಟನೆ ನಡೆದಿದ್ದು ಎಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕಂಪನಿಗಳಲ್ಲಿ ಉದ್ಯೋಗಿಗಳು ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಉದಾಹರಣೆಗಳು ಇವೆ. ಇತ್ತೀಚೆಗಷ್ಟೇ ಕಂಪನಿಯೊಂದರಲ್ಲಿ ಉದ್ಯೋಗಿಯೊಬ್ಬರು ತಾವು ಕೆಲಸ ಮಾಡುವ ಕುರ್ಚಿಯ ಮೇಲೆಯೇ ಪ್ರಾಣ ಕಳೆದುಕೊಂಡ ಘಟನೆ ನಡೆದಿತ್ತು. ಇದೀಗ ಶೌಚದಲ್ಲಿ ಐಟಿ ಕಂಪನಿಯ ಉದ್ಯೋಗಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಐಟಿ ಕಂಪನಿಯೊಂದಲ್ಲಿ ಉದ್ಯೋಗಿಯೊಬ್ಬರು ಶೌಚದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಮೃತರನ್ನು ಎಚ್‌ಸಿಎಲ್ ಟೆಕ್ನಾಲಜೀಸ್‌ನ ಹಿರಿಯ ವಿಶ್ಲೇಷಕ ನಿತಿನ್ ಎಡ್ವಿನ್ ಮೈಕೆಲ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಮಿಹಾನ್ ಪ್ರದೇಶದಲ್ಲಿನ ಕಚೇರಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಮಿಹಾನ್ ಪ್ರದೇಶದಲ್ಲಿನ ಕಂಪನಿಯ ಕಚೇರಿಯಲ್ಲಿ ವಾಶ್‌ರೂಮ್‌ಗೆ ಪ್ರವೇಶಿಸಿದ ಎಡ್ವಿನ್ ಸ್ಪಂದಿಸದೆ ಇರುವುದು ಕಂಡುಬಂದಿದೆ. ತಕ್ಷಣ ಅವರನ್ನು ನಾಗ್ಪುರದ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸನ್‌ಗೆ ದಾಖಲಿಸಲಾಯಿತು. ವೈದ್ಯರು ಬರುವುದರೊಳಗೆ ಆತ ಸಾವನ್ನಪ್ಪಿದ್ದ ಎಂದು ಅಲ್ಲಿನ ಅಧಿಕಾರಿಗಳಿಂದ ತಿಳಿದುಬಂದಿದೆ.
ಸೋನೆಗಾಂವ್ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿ ಮಾಡಿಕೊಂಡಿದ್ದಾರೆ. ಪ್ರಾಥಮಿಕ ಶವ ಪರೀಕ್ಷೆಯ ಫಲಿತಾಂಶಗಳು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವರ ಸಾವಿನ ಸುತ್ತಲಿನ ಸಂದರ್ಭಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೋಲೀಸರ ವರದಿಯಂತೆ ಮೈಕೆಲ್ ಅವರು ಪತ್ನಿ ಮತ್ತು ಅವರ 6 ವರ್ಷದ ಮಗನನ್ನು ಅಗಲಿದ್ದಾರೆ ಎನ್ನಲಾಗುತ್ತಿದೆ.
ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತರನ್ನು ಯಲ್ಲವ್ವ ಕರಿಹೊಳ (30), ಮಕ್ಕಳಾದ ಸಾತ್ವಿಕ್ (5),ಮುತ್ತಪ್ಪ (1) ಎಂದು ಗುರುತಿಸಲಾಗಿದೆ. ಸದ್ಯ ಈ ಪ್ರಕರಣ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಬೆಳಗ್ಗೆಯಷ್ಟೇ ಯಲ್ಲವ್ವ ಹಾಗೂ ಆಕೆಯ ಗಂಡನ ನಡುವೆ ಜಗಳವಾಗಿತ್ತು. ಇದರಿಂದ ಮನನೊಂದು ಯಲ್ಲವ್ವ ಮಕ್ಕಳ ಜೊತೆಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಳಿಕ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.












Click it and Unblock the Notifications