IT Raid: ಕರ್ನಾಟಕ ಸೇರಿ ಅನೇಕ ಕಡೆಗಳಲ್ಲಿ ಐಟಿ ದಾಳಿ: 94 ಕೋಟಿ ರೂ.ಪತ್ತೆ
ನವದೆಹಲಿ, ಅಕ್ಟೋಬರ್ 16: ತೆರಿಗೆ ವಂಚನೆ ಮಾಡುತ್ತಿರುವವರ ವಿರುದ್ಧ ಆದಾಯ ತೆರಿಗೆ ಇಲಾಖೆ (Income Tax dept) ಅಧಿಕಾರಿಗಳು ನಿರಂತರ ಸಮರ ಸಮರ ಸಾರಿದ್ದಾರೆ. ಬೆಂಗಳೂರು, ಕರ್ನಾಟಕದ ಇತರ ಭಾಗಗಳು ಸೇರಿದಂತೆ ಹಲವು ರಾಜ್ಯಗಳಲ್ಲಿ ಐಟಿ ದಾಳಿಗಳು ನಡೆದಿವೆ. ಇದರಿಂದ ಕೋಟ್ಯಂತರ ರೂಪಾಯಿ ವಶಕ್ಕೆ ಪಡೆಯಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (ಸಿಬಿಡಿಟಿ) ತಿಳಿಸಿದೆ.
ಬೆಂಗಳೂರು ಒಳಗೊಂಡಂತೆ ಕರ್ನಾಟಕದಲ್ಲಿ ಮತ್ತು ಇನ್ನಿತರ ರಾಜ್ಯಗಳಲ್ಲಿ ಸರ್ಕಾರಿ ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಉದ್ಯಮಿಗಳು ಐಟಿ ದಾಳಿಗೆ ಒಳಗಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ಈ ಎಲ್ಲ ದಾಳಿಗಳಿಂದ ಒಟ್ಟು 94 ಕೋಟಿ ರೂಪಾಯಿ ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.

ಅಷ್ಟೇ ಅಲ್ಲದೇ 8 ಕೋಟಿ ರೂಪಾಯಿ ಮೌಲ್ಯದ ವಜ್ರಗಳು ಸೇರಿದಂತೆ ಚಿನ್ನಭರಣ, 30 ಐಷಾರಾಮಿ ವಿದೇಶಿ ವಾಚ್‌ಗಳನ್ನು ಜಪ್ತಿಮಾಡಿದ್ದಾರೆ. ಅಗತ್ಯ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಅಕ್ಟೋಬರ್ 12ರಂದು ಐಟಿ ಅಧಿಕಾರಿಗಳು ವಿವಿಧ ಗುತ್ತಿಗೆದಾರರ ಮನೆ ಮೇಲೆ ದಾಳಿ ನಡೆಸಿದ್ದರು. ಅಲ್ಲಿಂದ ಶೋಧ ಕಾರ್ಯ ಆರಂಭವಾಗಿತ್ತು.
ಕರ್ನಾಟಕದ ಬೆಂಗಳೂರು, ಆಂಧ್ರಪ್ರದೇಶ, ತೆಲಂಗಾಣ, ರಾಷ್ಟ್ರ ರಾಜಧಾನಿ ದೆಹಲಿಯ ಕೆಲವು ನಗರಗಳಲ್ಲಿ ಇಲಾಖೆಯು ಒಟ್ಟು 55 ಕಡೆಗಳಲ್ಲಿ ದಾಳಿ ನಡೆಸಿದೆ. ಇದರಲ್ಲಿ ರಾಜಕೀಯ ನಾಯಕರ ಒಂದಷ್ಟು ಮನೆಗಳು ಸೇರಿವೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಐಟಿ ದಾಳಿ ವೇಳೆ 42 ಕೋಟಿ ರೂಪಾಯಿ ಸಿಕ್ಕಿತ್ತು. ಇದು ಇತ್ತೀಚಿನ ಐಟಿ ದಾಳಿಗಳ ಪ್ರಕರಣದಲ್ಲಿ ಅತ್ಯಧಿಕ ನಗದು ಸಿಕ್ಕ ಪ್ರಕವರಣವಾಗಿದೆ ಎನ್ನಲಾಗಿದೆ.
ಇನ್ನೂ ಒಟ್ಟು ಐಟಿ ದಾಳಿಗಳಲ್ಲಿ ಅಂದಾಜು 94 ಕೋಟಿ ರೂಪಾಯಿ ನಗದು ಹಣ ಹಾಗೂ ಎಂಟು ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (ಸಿಬಿಡಿಟಿ) ಹೇಳಿಕೆಯಲ್ಲಿ ತಿಳಿಸಿದೆ ಎಂದು ವರದಿ ಆಗಿದೆ.












Click it and Unblock the Notifications