ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ದೈನಂದಿನ ಧಾರಾವಾಹಿ ಆಗಿದೆ'

|
Google Oneindia Kannada News

ರಾಯ್ ಪುರ, ಮೇ 15: ಮಾರಣಾಂತಿಕ ಕೊರೊನಾ ವೈರಸ್ ವಿರುದ್ಧ ಹೋರಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾರತೀಯರಿಗೆ 20 ಲಕ್ಷ ಕೋಟಿ ರೂಪಾಯಿಯ ವಿಶೇಷ ಆರ್ಥಿಕ ಪ್ಯಾಕೇಜ್ ಅನ್ನು ಘೋಷಿಸಿದರು. ಆರ್ಥಿಕ ಪ್ಯಾಕೇಜ್ ನ ವಿವರಗಳನ್ನು ಕಳೆದ ಮೂರು ದಿನಗಳಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿಯ ಮೂಲಕ ನೀಡುತ್ತಿದ್ದಾರೆ.

Recommended Video

ಸರ್ಕಾರಕ್ಕೆ ಉಪೇಂದ್ರ ಬರೆದ ಆ ವಿಶೇಷ ಪತ್ರದಲ್ಲಿ ಏನಿತ್ತು ? | Upendra Wrote a letter to GOVT

ಮೇ 13 ರಿಂದ ಪ್ರತಿದಿನ ನಿರ್ಮಲಾ ಸೀತಾರಾಮನ್ ನಡೆಸುತ್ತಿರುವ ಸುದ್ದಿಗೋಷ್ಠಿಗಳು ''ದೈನಂದಿನ ಧಾರಾವಾಹಿ ರೀತಿ ಆಗಿದೆ'' ಎಂದು ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಟೀಕೆ ಮಾಡಿದ್ದಾರೆ.

ಕೃಷಿ ಮೂಲಸೌಕರ್ಯಕ್ಕಾಗಿ 1 ಲಕ್ಷ ಕೋಟಿ ರೂ ಘೋಷಣೆ ಕೃಷಿ ಮೂಲಸೌಕರ್ಯಕ್ಕಾಗಿ 1 ಲಕ್ಷ ಕೋಟಿ ರೂ ಘೋಷಣೆ

''ಪ್ರಧಾನ ಮಂತ್ರಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂಪಾಯಿ ಆರ್ಥಿಕ ಪ್ಯಾಕೇಜ್ ಘೋಷಿಸಿದಾಗ ತುಂಬಾ ಸ್ಪಷ್ಟವಾಗಿ ಅದನ್ನ ತಿಳಿಸುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಕಳೆದ ಮೂರು ದಿನಗಳಿಂದ ನಿರ್ಮಲಾ ಸೀತಾರಾಮನ್ ಮತ್ತು ಅನುರಾಗ್ ಸಿಂಗ್ ಠಾಕೂರ್ ಅವರ ಸೀರಿಯಲ್ ನಡೆಯುತ್ತಿದೆ. ಪ್ರತಿ ಕ್ಷೇತ್ರದ ಬಗ್ಗೆ ಇಬ್ಬರೂ ಹಿಂದಿ ಮತ್ತು ಇಂಗ್ಲೀಷ್ ನಲ್ಲಿ ವಿವರಿಸುತ್ತಿದ್ದಾರೆ. ಆದರೆ, ಅದು ಯಾರಿಗೂ ಅರ್ಥವಾಗುತ್ತಿಲ್ಲ ಅನಿಸುತ್ತಿದೆ'' ಎಂದಿದ್ದಾರೆ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಾಗೇಲ್.

Its like A Daily Soap Says Chhattisgarh CM On Nirmala Sitharaman Press Meet

''ಸೀರಿಯಲ್ ಮುಗಿದ ಬಳಿಕವಷ್ಟೇ ಪ್ಯಾಕೇಜ್ ಬಗ್ಗೆ ಮಾತನಾಡಬಹುದು. ಪಿಕ್ಚರ್ ಇನ್ನೂ ಬಾಕಿ ಇದೆ'' ಅಂತ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಹೇಳಿದ್ದಾರೆ.

20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್: ದುಡಿಯುವ ಕೈಗಳಿಗೆ ಸಿಕ್ಕಿತೇ ಲಾಭ.?20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್: ದುಡಿಯುವ ಕೈಗಳಿಗೆ ಸಿಕ್ಕಿತೇ ಲಾಭ.?

ಅಂದ್ಹಾಗೆ, ಇಂದು ಸಂಜೆ 4 ಗಂಟೆಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.

English summary
Its like a daily soap says Chhattisgarh CM on Nirmala Sitharaman press meet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X