ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್: ಓರ್ವ ಉಗ್ರನನ್ನು ಸದೆಬಡಿದ ಸೇನೆ
ಕುಪ್ವಾರ, ಜೂನ್ 29: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭಾರತೀಯ ಸೇನಾ ಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಎನ್‌ಕೌಂಟರ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕುಪ್ವಾರದ ಟ್ರೇಗಾಮ್ ಪ್ರದೇಶದಲ್ಲಿ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ ಎಂಬ ವರದಿಗಳು ಲಭ್ಯವಾಗಿದೆ. ಉಗ್ರರ ದಾಳಿ ವೇಳೆ ಇಬ್ಬರು ಯೋಧರಿಗೆ ಗಾಯಗಳಾಗಿವೆ, ಜಮ್ಮು ಕಾಶ್ಮೀರದ ಶೋಪಿಯಾನ್‌ನಲ್ಲಿ ಗ್ರೇನೇಡ್ ದಾಳಿ ನಡೆಸಲಾಗಿದೆ.
ಈ ವೇಳೆ ಇಬ್ಬರು ಯೋಧರಿಗೆ ಗಾಯಗಳಾಗಿದೆ. ಜಮ್ಮು-ಕಾಶ್ಮೀರದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಸಂದರ್ಭದಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದರು. ಜತೆಗೆ ಸಲ್ಲಿನ ಸ್ಥಳೀಯರೊಬ್ಬರು ಕೂಡ ಪ್ರಾಣತೆತ್ತಿದ್ದರು.

ಈ ಕಾರಣದಿಂದಾಗಿ ಮತ್ತೆ ಭಾರತೀಯ ಸೇನೆ ಮೇಲೆ ದಾಳಿ ಮಾಡಲು ಯತ್ನಿಸಿದ ಉಗ್ರನನ್ನು ಸದೆಬಡಿಯಲಾಗಿದೆ. ಉಗ್ರರು ಭಾರತೀಯ ಸೇನೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಇದೇ ಸಂದರ್ಭದಲ್ಲಿ ಭಾರತೀಯ ಸೇನಾ ಯೋಧರು ಪ್ರತಿ ದಾಳಿ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಪುಲ್ವಾಮಾದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು.












Click it and Unblock the Notifications