ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಶ್ರೀನಗರ, ನವೆಂಬರ್ 30: ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.
#UPDATE: One more terrorist killed in Budgam encounter, total 4 terrorists have been killed till now, operation continues
— ANI (@ANI) November 30, 2017
ಬದ್ಗಾಮ್ ಜಿಲ್ಲೆಯಲ್ಲಿ ಅಡಗಿ ಕುಳಿತಿರವ ಮಾಹಿತಿ ಮೇರೆಗೆ ಭಾರತೀಯ ಸೇನೆ ಕಾರ್ಯಚರಣೆ ನಡೆಸಿದೆ. ಈ ವೇಳೆ ಉಗ್ರರು ಏಕಾಏಕಿ ಸೇನೆ ಮೇಲೆ ಪೈರಿಂಗ್ ಮಾಡಿದರು. ಇದಕ್ಕೆ ಪ್ರತಿಯಾಗಿ ಸೇನೆ ಕೂಡ ಪ್ರತಿ ದಾಳಿ ನಡೆಸಿ ನಾಲ್ವರನ್ನು ಹೊಡೆದುರುಳಿಸಿದೆ.

ದಾಳಿ-ಪ್ರತಿ ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದು, ನಾಲ್ವರು ಉಗ್ರರು ಹತರಾಗಿದ್ದಾರೆ. ಬದ್ಗಾಮ್ ಭಾಗದಲ್ಲಿ ಇನ್ನಷ್ಟು ಉಗ್ರರು ಅಡಗಿ ಕುಳಿತಿರಬಹುದು ಎಂದು ಸೇನೆ ಶಂಕಿಸಿ ಕಾರ್ಯಚರಣೆ ಮುಂದುರೆಸಿದೆ.












Click it and Unblock the Notifications