J&K and Haryana Election Result: ಮತ ಎಣಿಕೆಗೂ ಮುನ್ನ ಒಮರ್ ಅಬ್ದುಲ್ಲಾ ಪೋಸ್ಟ್, ಜೆ&ಕೆನಲ್ಲಿ ಕಿಂಗ್ ಮೇಕರ್ ಯಾರು?
ಜಮ್ಮು ಮತ್ತು ಕಾಶ್ಮೀರದಲ್ಲಿ ಮತ ಎಣಿಕೆ ಆರಂಭವಾಗಿದೆ. ಈ ಚುನಾವಣಾ ಫಲಿತಾಂಶ ಪ್ರಕಟವಾಗುವುದರೊಂದಿಗೆ ಪ್ರಜಾಪ್ರಭುತ್ವದ ಮನದಾಳದ ಮಾತು ಕೂಡ ಹೊರಬರಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 10 ವರ್ಷಗಳ ನಂತರ ನಡೆದ ಚುನಾವಣೆಯ ಫಲಿತಾಂಶ ರಾಜ್ಯದ ರಾಜಕೀಯ ಭವಿಷ್ಯ ಏನಾಗಲಿದೆ ಎಂಬುದನ್ನು ನಿರ್ಧರಿಸಲಿದೆ. ಈ ನಡುವೆ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಒಮರ್ ಅಬ್ದುಲ್ಲಾ ಅವರು ಸೆಲ್ಫಿ ಪೋಸ್ಟ್ ಮಾಡಿದ್ದಾರೆ.
ಹೌದು... ಎರಡು ಹೊಸ ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದಾದ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ನಾಯಕ ಒಮರ್ ಅಬ್ದುಲ್ಲಾ ಅವರು ಇಂದು ಕೆಲ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಒಮರ್ ಅಬ್ದುಲ್ಲಾ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಮತ ಎಣಿಕೆ ಪೂರ್ಣಗೊಳ್ಳುವ ಮುನ್ನವೇ ಸಹೋದ್ಯೋಗಿಗಳು ಶುಭ ಹಾರೈಸುತ್ತಿದ್ದಾರೆ.

ಗೆಲುವಿನ ಸಂತಸದಲ್ಲಿರುವ ಒಮರ್ ಅಬ್ದುಲ್ಲಾ ಅವರು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ನಲ್ಲಿ ಹೀಗೆ ಬರೆದಿದ್ದಾರೆ - ನಾವು ತುಂಬಾ ಶ್ರಮಪಟ್ಟಿದ್ದೇವೆ, ಈಗ ಇನ್ಶಾ ಅಲ್ಲಾಹ್, ಫಲಿತಾಂಶಗಳು ಸಹ ಅದೇ ರೀತಿ ಇರುತ್ತದೆ' ಎಂದಿದ್ದಾರೆ.
Counting day 7K done. Last time around it didn’t end well for me personally. InshaAllah this time around it will be better. pic.twitter.com/TUkjLtVKGn
— Omar Abdullah (@OmarAbdullah) October 8, 2024
ಅಂದಹಾಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು 90 ಸ್ಥಾನಗಳನ್ನು ಹೊಂದಿದೆ. ಸದ್ಯದ ಮಾಹಿತಿ ಪ್ರಕಾರ ಕಾಂಗ್ರೆಸ್ ಮತ್ತು ಎನ್‌ಸಿ ಮೈತ್ರಿಕೂಟ 51 ಸ್ಥಾನಗಳೊಂದಿಗೆ ಅರ್ಧದಾರಿಯ ಗಡಿಯನ್ನು ದಾಟಿದೆ. ಅಬ್ದುಲ್ಲಾ ಅವರು ಬುದ್ಗಾಮ್ ಮತ್ತು ಗಂದರ್‌ಬಲ್ (Budgam and Ganderbal constituencies) ಎರಡೂ ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ (ಪಿಡಿಪಿ) ಇಲ್ತಿಜಾ ಮುಫ್ತಿ ಅವರು ಶ್ರೀಗುಫ್ವಾರಾ-ಬಿಜ್‌ಬೆಹರಾ ಕ್ಷೇತ್ರದಲ್ಲಿ ಹಿಂದುಳಿದಿದ್ದಾರೆ.
ಒಮರ್ ಅಬ್ದುಲ್ಲಾ 2 ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧೆ
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಮೂರು ಹಂತಗಳಲ್ಲಿ ನಡೆದಿತ್ತು. ಮೊದಲ ಹಂತದ ಮತದಾನ ಸೆಪ್ಟೆಂಬರ್ 18 ರಂದು, ಎರಡನೇ ಹಂತ ಸೆಪ್ಟೆಂಬರ್ 25 ರಂದು ಮತ್ತು ಮೂರನೇ ಹಂತದ ಮತದಾನ ಅಕ್ಟೋಬರ್ 1 ರಂದು ನಡೆಯಿತು. ಒಮರ್ ಅಬ್ದುಲ್ಲಾ ಅವರು ಬುದ್ಗಾಮ್ ಮತ್ತು ಗಂದರ್‌ಬಲ್ ಎಂಬ ಎರಡು ವಿಧಾನಸಭಾ ಕ್ಷೇತ್ರಗಳಿಂದ ಏಕಕಾಲದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು.
ಬುದ್ಗಾಮ್‌ನಲ್ಲಿ ಪಕ್ಷದ ಪ್ರಾಬಲ್ಯವನ್ನು ಉಳಿಸಿಕೊಳ್ಳಲು ಒಮರ್ ತಮ್ಮ ಶಕ್ತಿಮೀರಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಈ ಭಾಗದ ಅಭಿವೃದ್ಧಿ ಕಾರ್ಯಗಳ ಕೊರತೆಯಿಂದ ಜನರು ಕೋಪಗೊಂಡಿದ್ದಾರೆ ಎಂಬ ವರದಿಗಳು ಬಂದಿರುವುದರಿಂದ ಅವರ ಗೆಲುವು ಸ್ವಲ್ಪ ಕಷ್ಟ ಎನ್ನಲಾಗಿತ್ತು. ಆದರೆ ಬುದ್ಗಾಮ್‌ನ ಶಿಯಾ ಪ್ರದೇಶಗಳ ಮೇಲೆ ಅವರು ಉತ್ತಮ ಹಿಡಿತವನ್ನು ಹೊಂದಿದ್ದಾರೆ. ಹೀಗಾಗಿ ಗೆಲ್ಲುವ ಲಕ್ಷಣಗಳು ಸ್ಪಷ್ಟವಾಗಿವೆ.
ಅಲ್ಲದೆ ಇವರೇ ಜಮ್ಮು ಮತ್ತು ಕಾಶ್ಮೀರದ ನೂತನ ಸಿಎಂ ಆಗಿ ಆಯ್ಕೆ ಆಗಿದ್ದಾರೆ. ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಅವರು ಈ ಘೋಷಣೆಯನ್ನು ಮಾಡಿದ್ದಾರೆ. ಅಬ್ದುಲ್ಲಾ ಕುಟುಂಬಕ್ಕೆ ಮೂರು ತಲೆಮಾರುಗಳಿಂದ ಗಂದೇರ್ಬಾಲ್ ಕ್ಷೇತ್ರ ಭದ್ರಕೋಟೆಯಾಗಿದೆ. ಎನ್‌ಸಿ ಸಂಸ್ಥಾಪಕ ಶೇಖ್ ಮೊಹಮ್ಮದ್ ಅಬ್ದುಲ್ಲಾ ಅವರು 1977 ರಲ್ಲಿ ಈ ಕ್ಷೇತ್ರದಲ್ಲಿ ಗೆದ್ದಿದ್ದರು. ನಂತರ ಅವರ ಮಗ ಫಾರೂಕ್ ಅಬ್ದುಲ್ಲಾ ಅವರು 1983, 1987 ಮತ್ತು 1996 ರಲ್ಲಿ ವಿಜಯಗಳಿಸಿದರು. ನಂತರ ಒಮರ್ ಅಬ್ದುಲ್ಲಾ ಅವರು 2008 ರಲ್ಲಿ ಕ್ಷೇತ್ರದಿಂದ ಆಯ್ಕೆಯಾದರು.












Click it and Unblock the Notifications