Jammu And Kashmir Elections: ಬಿಜೆಪಿಗೆ ಬಹಿರಂಗವಾಗಿ ಸವಾಲು ಹಾಕಿದ ರಾಹುಲ್ ಗಾಂಧಿ
ನವದೆಹಲಿ, ಸೆಪ್ಟೆಂಬರ್ 25: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತೀಯ ಜನತಾ ಪಕ್ಷಕ್ಕೆ ಬಹಿರಂಗ ಸವಾಲು ಹಾಕಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಜನತೆಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ಜಮ್ಮುವಿನಲ್ಲಿ ರ್ಯಾಲಿಯನ್ನುದ್ದೇಶಿಸಿ ಹೇಳಿದರು.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣಾ ಅಖಾಡಕ್ಕಿಳಿದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರ ಆಡಳಿತ ಪಕ್ಷ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ ಹಲವು ಆರೋಪಗಳನ್ನು ಮಾಡಿದ್ದರು. ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಮೂಲಕ ಬಿಜೆಪಿ ಜನತೆಗೆ ದೊಡ್ಡ ಅನ್ಯಾಯ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
ಜಮ್ಮುವಿನಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಾ, ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು 2019 ರಲ್ಲಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಮೂಲಕ ರಾಜ್ಯದ ಜನರಿಗೆ ದೊಡ್ಡ ಅನ್ಯಾಯವಾಯಿತು. ವಿಧಾನಸಭಾ ಚುನಾವಣೆಯ ನಂತರ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸದಿದ್ದರೆ, 'ಇಂಡಿಯಾ' ಮೈತ್ರಿಕೂಟವು ಸಂಸತ್ತಿನ ಒಳಗೆ ತನ್ನ ಸಂಪೂರ್ಣ ಶಕ್ತಿಯನ್ನು ಬಳಸಿ ಬೀದಿಗಿಳಿಯಲಿದೆ ಎಂದು ಎಚ್ಚರಿಕೆ ನೀಡಿದರು.

ಜಮ್ಮು ಮತ್ತು ಕಾಶ್ಮೀರದ ರಾಜ್ಯತ್ವವನ್ನು ಮರುಸ್ಥಾಪಿಸಲು ಕೆಲಸ ಮಾಡಲು ಸಂಕಲ್ಪವನ್ನು ಪುನರುಚ್ಚರಿಸಿದರು. ಬಿಜೆಪಿ ರಾಜ್ಯತ್ವವನ್ನು (ಚುನಾವಣೆಗಳ ನಂತರ) ಮರುಸ್ಥಾಪಿಸದಿದ್ದರೆ, ನಾವು - 'ಇಂಡಿಯಾ' ಮೈತ್ರಿ, ಜಮ್ಮುವಿನಲ್ಲಿ ನಾವು ನಮ್ಮ ಎಲ್ಲಾ ಶಕ್ತಿಯನ್ನು ಬಳಸುತ್ತೇವೆ. ಲೋಕಸಭೆ, ರಾಜ್ಯಸಭೆಗಳಲ್ಲಿ ಕಾಶ್ಮೀರದ ರಾಜ್ಯತ್ವವನ್ನು ಮರುಸ್ಥಾಪಿಸಲು ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
ಲೆಫ್ಟಿನೆಂಟ್ ಗವರ್ನರ್ (ಎಲ್‌ಜಿ) ಮೂಲಕ "ಹೊರಗಿನವರಿಗೆ" ಲಾಭ ಮಾಡಿಕೊಡಲು ಜಮ್ಮು ಮತ್ತು ಕಾಶ್ಮೀರದಿಂದ ರಾಜ್ಯತ್ವವನ್ನು ಕಸಿದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ಇರುವವರೆಗೂ ಹೊರಗಿನವರಿಗೆ ಲಾಭವಾಗುತ್ತದೆ ಮತ್ತು ಸ್ಥಳೀಯ ಜನರನ್ನು ಕಡೆಗಣಿಸುತ್ತಲೇ ಇರುತ್ತಾರೆ. ಇದೇ ಕಾರಣಕ್ಕಾಗಿಯೇ ಜಮ್ಮು ಮತ್ತು ಕಾಶ್ಮೀರದಿಂದ ರಾಜ್ಯತ್ವವನ್ನು ಕಿತ್ತುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.












Click it and Unblock the Notifications