ಕಾಶ್ಮೀರದಲ್ಲಿ ಮುರಿದು ಬಿದ್ದ ಪಿಡಿಪಿ-ಬಿಜೆಪಿ ಮೈತ್ರಿ?

By: ವಿಕಾಸ್ ನಂಜಪ್ಪ
Subscribe to Oneindia Kannada

ಶ್ರೀನಗರ, ಜನವರಿ 28 : ಮುಫ್ತಿ ಮೊಮಹದ್ ಸಯೀದ್ ಅವರ ನಿಧನದ ಬಳಿಕ ಕಣಿವೆ ರಾಜ್ಯ ಕಾಶ್ಮೀರದಲ್ಲಿನ ರಾಜಕೀಯ ಚಿತ್ರಣ ಬದಲಾಗಿದೆ. ಪಿಡಿಪಿ-ಬಿಜೆಪಿ ಮೈತ್ರಿಕೂಟದ ಸರ್ಕಾರ ಮುಂದುವರೆಯಲಿದೆಯೇ? ಎಂಬುದು ಜನವರಿ 31ರಂದು ಅಂತಿಮಗೊಳ್ಳುವ ಸಾಧ್ಯತೆ ಇದೆ.

ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮದ್ ಸಯೀದ್ (79) ಅವರು ಜನವರಿ 7ರಂದು ವಿಧಿವಶರಾಗಿದ್ದಾರೆ. ಕಾಶ್ಮೀರದಲ್ಲಿ ಪಿಡಿಪಿ-ಬಿಜೆಪಿ ಮೈತ್ರಿಕೂಟದ ಸರ್ಕಾರ ಅಸ್ತಿತ್ವದಲ್ಲಿದ್ದು, ಮುಫ್ತಿ ಮೊಮಹದ್ ಸಯೀದ್ ಅವರ ಪುತ್ರಿ ಮೆಹಬೂಬಾ ಮುಫ್ತಿ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿತ್ತು. [ಕಣಿವೆ ರಾಜ್ಯ ಕಾಶ್ಮೀರದಲ್ಲಿ ಬಿರುಸುಗೊಂಡ ರಾಜಕೀಯ ಚಟುವಟಿಕೆ]

mehbooba mufti

ಆದರೆ, ಮೆಹಬೂಬಾ ಮುಫ್ತಿ ಅವರು ಮುಖ್ಯಮಂತ್ರಿಗಳ ಅಧಿಕೃತ ನಿವಾಸವನ್ನು ತೆರವುಗೊಳಿಸಿದ್ದಾರೆ. ಮಾಡಿದ್ದು, ತಮಗೆ ನೀಡಿದ್ದ ಭದ್ರತೆಯನ್ನು ಬೇಡ ಎಂದಿದ್ದಾರೆ. ಸರ್ಕಾರಿ ಕಾರುಗಳನ್ನು ಬಳಕೆ ಮಾಡುವುದನ್ನು ಸ್ಥಗಿತಗೊಳಿಸಿದ್ದಾರೆ. ಇದರಿಂದಾಗಿ ಬಿಜೆಪಿ-ಪಿಡಿಪಿ (ಪೀಪಲ್ ಡೆಮಾಕ್ರಟಿಕ್ ಪಾರ್ಟಿ) ಪಕ್ಷಗಳ ನಡುವಿನ ಮೈತ್ರಿ ಮುರಿದುಬೀಳಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. [ಜಮ್ಮು-ಕಾಶ್ಮೀರ ಸಿಎಂ ಮುಫ್ತಿ ಮೊಹಮದ್ ಸಯೀದ್ ವಿಧಿವಶ]

ಜನವರಿ 31ರ ಗಡುವು : ಬಿಜೆಪಿ ಪಿಡಿಪಿ ಜೊತೆ ಮೈತ್ರಿಯನ್ನು ಮುಂದುವರೆಸುವ ಬಗ್ಗೆ ಜನವರಿ 31ರಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಪಿಡಿಪಿ ಜ.31ರಂದು ಪಕ್ಷದ ಮುಖಂಡರ ಸಭೆ ಕರೆದಿದೆ. ಅಂದು ಮೈತ್ರಿಯನ್ನು ಮುಂದುವರೆಸುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅಂದಾಜಿಸಲಾಗಿದೆ. [ಜಮ್ಮುವಿನಲ್ಲಿ ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ]

ಪಿಡಿಪಿ-ಬಿಜೆಪಿ ಮೈತ್ರಿ ಮುಂದುವರೆದರೆ ಮೆಹಬೂಬಾ ಮುಫ್ತಿ ಅವರು ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ. ಆದರೆ, ಮೆಹಬೂಬಾ ಮುಫ್ತಿ ಅವರು ಕಾಶ್ಮೀರದ ಪ್ರತ್ಯೇಕತಾವಾದಿಗಳ ಜೊತೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ. ಬಿಜೆಪಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಮಾತುಕತೆ ನಡೆಸಬಾರದು ಎಂದು ಸ್ಪಷ್ಟಪಡಿಸಿದೆ.

ಜನವರಿ 10ರಂದು ಮುಫ್ತಿ ಮೊಹಮ್ಮದ್ ಸಯೀದ್ ಅವರ ನಿವಾಸಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಭೇಟಿ ನೀಡಿದ್ದರು. ಇದು ಕಾಶ್ಮೀರದಲ್ಲಿ ಹೊಸ ಮೈತ್ರಿಕೂಟ ಅಸ್ತಿತ್ವಕ್ಕೆ ಬರುವ ಚರ್ಚೆಯನ್ನು ಹುಟ್ಟು ಹಾಕಿತ್ತು. ಆದರೆ, ಬಿಜೆಪಿ ಪಿಡಿಪಿ-ಬಿಜೆಪಿ ಮೈತ್ರಿಕೂಟದ ಸರ್ಕಾರಕ್ಕೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The Bharatiya Janata Party will wait until January 31 before taking a final call on the coalition with the PDP in Jammu and Kashmir. The PDP is scheduled to hold an important meeting on January 31 in which the future of the coalition in the state is expected to be discussed.
Please Wait while comments are loading...