J&K polls: ಜಮ್ಮು ಮತ್ತು ಕಾಶ್ಮೀರದಲ್ಲಿ ಗದ್ದುಗೆ ಯಾರಿಗೆ ಇಲ್ಲಿದೆ ಬಿಗ್‌ ಅಪ್ಡೇಟ್ಸ್‌!

ಜಮ್ಮು ಮತ್ತು ಕಾಶ್ಮೀರದಲ್ಲಿ ಯಾರು ಅಧಿಕಾರದ ಗದ್ದುಗೆ ಏರಲಿದ್ದಾರೆ ಎನ್ನುವ ಬಗ್ಗೆ ಬಿಗ್‌ ಅಪ್ಡೇಟ್ಸ್‌ ಸಿಕ್ಕಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 10 ದಿನಗಳಿಂದ ಇರುವ ಟ್ರೆಂಡ್‌ನ ಆಧಾರ ಮೇಲೆ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಸಿಗಬಹುದು ಎನ್ನುವ ಬಗ್ಗೆ ಲೋಕ ಪೋಲ್ ಬಿಗ್‌ ಅಪ್ಡೇಟ್ಸ್‌ ಕೊಟ್ಟಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಇದೇ ಮೊದಲ ಬಾರಿಗೆ ಎನ್ನುವಂತೆ ವಿಧಾನಸಭೆ ಚುನಾವಣೆ ತೀವ್ರ ಜಿದ್ದಾಜಿದ್ದಿನ ಕಣವಾಗಿ ಬದಲಾಗಿದೆ. ಕಣಿವೆ ರಾಜ್ಯದಲ್ಲಿ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಈ ಬಾರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಯನ್ನು ಪ್ರತಿಷ್ಠೆಯ ಕಣವಾಗಿ ಎಲ್ಲ ಪಕ್ಷಗಳು ಸ್ವೀಕರಿಸಿವೆ. ಬಿಜೆಪಿ ಸಹ ಈ ಬಾರಿ ಕಣಿವೆ ರಾಜ್ಯದಲ್ಲಿ ಹೊಸ ಹುಮ್ಮಸ್ಸಿನಿಂದ ಚುನಾವಣಾ ಕಣಕ್ಕೆ ಇಳಿದಿದೆ. ಇತ್ತ ಕಾಂಗ್ರೆಸ್‌ ಜಮ್ಮು ಮತ್ತು ಕಾಶ್ಮೀರದಲ್ಲೂ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಗಕ್ಕೆ ಇಳಿದಿದೆ.

J amp amp K polls big updates for who will win in Jammu and Kashmir

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 10 ದಿನಗಳಿಂದ ವಿಧಾನಸಭಾ ಕ್ಷೇತ್ರವಾರು ಸಮೀಕ್ಷೆ ನಡೆಸಿರುವ ಸಮೀಕ್ಷಾ ವರದಿಯನ್ನು ಲೋಕ ಪೋಲ್ ಬಿಡುಗಡೆ ಮಾಡಿದೆ. ಈ ಸಮೀಕ್ಷೆಯ ಪ್ರಕಾರ, ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಬಾರಿ ಇಂಡಿಯಾ ಮೈತ್ರಿಕೂಟಕ್ಕೆ 47ರಿಂದ 51 ಸ್ಥಾನ, ಬಿಜೆಪಿಗೆ 22ರಿಂದ 25 ಸ್ಥಾನ, ಪಿಡಿಪಿ ಪಕ್ಷಕ್ಕೆ 5ರಿಂದ 9 ಸ್ಥಾನ ಹಾಗೂ ಇತರೆ (ಸ್ವಾತಂತ್ರ ಅಥವಾ ಇತರೆ ಪಕ್ಷಗಳಿಗೆ) 7ರಿಂದ 11 ಸ್ಥಾನಗಳು ಸಿಗಲಿವೆ ಎಂದು ಹೇಳಲಾಗಿದೆ.

ಕಣಿವೆ ರಾಜ್ಯದಲ್ಲಿ ಗ್ಯಾರಂಟಿ ಹಿಂದೆ ಬಿದ್ದ ಕಾಂಗ್ರೆಸ್‌

ದೇಶದ ವಿವಿಧ ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಚುನಾವಣಾ ಪ್ರಚಾರಕ್ಕೆ ಇಳಿದಿರುವ ಕಾಂಗ್ರೆಸ್‌ ಕಣಿವೆ ರಾಜ್ಯದಲ್ಲೂ ಇದೇ ಮಾದರಿಯನ್ನು ಮುಂದುವರಿಸಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಹಾಗೂ ಎನ್‌ಸಿ ಮೈತ್ರಿಕೂಟ (ಇಂಡಿಯಾ) ಚುನಾವಣೆ ಕಣಕ್ಕೆ ಇಳಿದಿವೆ. ಇದೀಗ ಈ ಎರಡೂ ಪಕ್ಷಗಳು ಅಧಿಕಾರಕ್ಕೆ ಬಂದರೆ, ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಹೇಳಿದ್ದಾರೆ.

ಕಾಂಗ್ರೆಸ್‌ ಪಕ್ಷವು ಜಮ್ಮು - ಕಾಶ್ಮೀರದಲ್ಲಿ ಹಲವು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದೆ. ಕಾಶ್ಮೀರಿ ಪಂಡಿತರ ಪುನರ್ವಸತಿ ಕಲ್ಪಿಸುವುದಾಗಿ ಹೇಳಿದೆ. ಅಲ್ಲದೇ ಪ್ರತಿ ಕುಟುಂಬಕ್ಕೆ 25 ಲಕ್ಷ ರೂಪಾಯಿ ವರೆಗೆ ಆರೋಗ್ಯ ವಿಮೆ, ಮನೆಯ ಯಜಮಾನಿಗೆ 3,000 ಸಾವಿರ ರೂಪಾಯಿ, ಉದ್ಯಮಿ ಮಹಿಳೆಯರಿಗೆ 5 ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ನೀಡುವುದಾಗಿಯೂ ಪ್ರತಿ ವ್ಯಕ್ತಿಗೂ 11 ಕೆ.ಜಿ ಧಾನ್ಯ ವಿತರಣೆ ಮಾಡುವುದಾಗಿಯೂ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+