ಭಾರೀ ಕುತೂಹಲ ಹುಟ್ಟಿಸಿದ ಜಗದೀಶ್ ಶೆಟ್ಟರ್ ಮತ್ತು ನರೇಂದ್ರ ಮೋದಿ ಮಾತುಕತೆ
ನವದೆಹಲಿ, ಜನವರಿ 13: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಕಮಲ ಪಾಳಯದಲ್ಲಿ ಚರ್ಚೆ ನಡೆಯುತ್ತಿದೆ. ಬಿ ವೈ ವಿಜಯೇಂದ್ರ ಅವರ ವಿರೋಧಿ ಬಣ ರಾಜ್ಯಾಧ್ಯಕ್ಷರ ಬದಲಾವಣೆಯಾಗಬೇಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದು, ಕಮಲ ಪಾಳಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನ ಜಗದೀಶ್ ಶೆಟ್ಟರ್ ಭೇಟಿ ಮಾಡಿರುವುದು ಕುತೂಹಲ ಹುಟ್ಟಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರು ಭೇಟಿ ಮಾಡಿದ್ದು, ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಯಾವುದೇ ಚರ್ಚೆಯಾಗಿಲ್ಲ ಎಂದು ತಿಳಿದು ಬಂದಿದ್ದು, ನವದೆಹಲಿಯಲ್ಲಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ, "ನೂತನ ವರ್ಷ - 2025" ದ ಶುಭಾಶಯಗಳು ಕೋರಿದರು. ಭೇಟಿಯಾದ ಸಂದರ್ಭದಲ್ಲಿ ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚುನಾವಣೆಯ ಸಂದರ್ಭದಲ್ಲಿ ಸ್ವತಹ ಬೆಳಗಾವಿ ನಗರಕ್ಕೆ ಆಗಮಿಸಿ, ಅತ್ಯುತ್ತಮ ಸಹಕಾರವನ್ನು ನೀಡಿದ್ದನ್ನು ಸಂಸದ ಜಗದೀಶ್ ಶೆಟ್ಟರ್ ಅವರು ಮೋದಿಜಿಯವರೊಂದಿಗೆ ಸ್ಮರಿಸಿದರು.

ಸಂಸದ ಹಾಗೂ ಮಾಜಿ ಪ್ರಧಾನಿ ನರೇಂದ್ರ ಮೋದಿ ಅವರನ್ನ ಸನ್ಮಾನಿಸಲು ಹೋದಾಗ ನಾನು ಸಾಮಾನ್ಯ ಕಾರ್ಯಕರ್ತ ಸನ್ಮಾನ ಬೇಡ ಎಂದು ಕುಟುಂಬದ ಆತ್ಮೀಯ ಸದಸ್ಯರಂತೆ ಸಂಸದ ಜಗದೀಶ್ ಶೆಟ್ಟರ್ ಅವರ ಕುಶಲೊಪರಿಯನ್ನು ಪ್ರಧಾನ ಮಂತ್ರಿ ಮೋದಿ ಅವರು ವಿಚಾರಿಸಿದರು. ಈ ಸಂದರ್ಭದಲ್ಲಿ ಸಂಸದರು ಸವಿ ನೆನಪಿಗಾಗಿ ಹುಬ್ಬಳ್ಳಿ ಸಾಹಿತ್ಯ ಭಂಡಾರ ಪ್ರಕಟ ಮಾಡಿದ " Temple treasures a journey through time " ಯ ಪುಸ್ತಕವನ್ನು ನೀಡಿದರು.
ಈ ಸಮಯದಲ್ಲಿ ಸಂಸದರು ಸವದತ್ತಿಯ ಶ್ರೀ ಕ್ಷೇತ್ರ ಶ್ರೀ ರೇಣುಕಾ ಎಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗೆ 100 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದಕ್ಕೆ ನರೇಂದ್ರ ಮೋದಿಜಿಯವರಿಗೆ ಧನ್ಯವಾದಗಳನ್ನು ತಿಳಿಸಿ, ಅದೇ ರೀತಿಯಲ್ಲಿ ರಾಮದುರ್ಗದಲ್ಲಿರುವ ಐತಿಹಾಸಿಕ ಶಬರಿ ಕೊಳ್ಳವನ್ನು ಸಹ ಅಭಿವೃದ್ಧಿಪಡಿಸುವಂತೆ ವಿನಂತಿಸಿದರು. ಬೆಂಗಳೂರು - ಧಾರವಾಡದ ನಡುವೆ ಸದ್ಯ ಸಂಚರಿಸುತ್ತಿರುವ "ವಂದೇ ಭಾರತ" ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಬೆಳಗಾವಿಯವರೆಗೆ ವಿಸ್ತರಿಸಿ ಬೆಳಗಾವಿ ಜಿಲ್ಲಾ ನಿವಾಸಿಗಳ ಅನೇಕ ದಿನಗಳ ಬೇಡಿಕೆಯನ್ನು ಪರಿಗಣಿಸುವಂತೆ ವಿನಂತಿಸಿ, ಮನವಿಯನ್ನು ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೀಡಿದರು.
ಇನ್ನೂ ವಿಮಾನಯಾನ ಸೇವೆಗೆ ಸಂಬಂಧಿಸಿದಂತೆ "ಉಡಾನ್ 3.0" ಯೋಜನೆಯ ಅವಧಿಯನ್ನು ಇನ್ನೂ ಹೆಚ್ಚಿಸಿದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಮತ್ತು ಬೆಳಗಾವಿ ನಗರ ಹಾಗೂ ಟು ಟಯರ್ ಸಿಟಿಗಳ ವಿಮಾನಯಾನ ಸೇವೆಯ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಪ್ರಧಾನಮಂತ್ರಿಯವರಲ್ಲಿ ವಿನಂತಿಸಿದರು.ಬೇಡಿಕೆಯನ್ನು ಅವಲೋಕಿಸಿದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಇದನ್ನು ಈಡೇರಿಸುವ ಬಗ್ಗೆ ಸಂಬಂಧಿಸಿದ ಸಚಿವರಿಗೆ ಅವಶ್ಯ ಸೂಚಿಸುವ ಕುರಿತು ಭರವಸೆಯನ್ನು ನೀಡಿರುವುದಾಗಿ ಮತ್ತು ಸಂಸದರಾದ ಜಗದೀಶ ಶೆಟ್ಟರ ಅವರು ತಿಳಿಸಿದ್ದಾರೆ.












Click it and Unblock the Notifications