Tirupati Laddu: ತಿರುಪತಿ ಲಾಡು ಪ್ರಸಾದ ವಿವಾದ; ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಮೊದಲ ಪ್ರತಿಕ್ರಿಯೆ
ಹಿಂದೂ ಧರ್ಮದ ಜನರ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ತಿರುಪತಿ ವೆಂಕಟೇಶ್ವರ ದೇವಸ್ಥಾನದ ಪ್ರಸಾದದಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಪತ್ತೆಯಾಗಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಹಿಂದಿನ ವೈಎಸ್‌ಆರ್ ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಾಡು ಪ್ರಸಾದ ತಯಾರಿಯಲ್ಲಿ ಬಳಸಿದ ತುಪ್ಪದಲ್ಲಿ ಈ ಅಂಶ ಪತ್ತೆಯಾಗಿದೆ ಎಂದು ಆರೋಪಿಸಲಾಗಿದೆ. ಆದರೆ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿ ಹಾಕಿದ್ದಾರೆ. ಧರ್ಮವನ್ನು ರಾಜಕೀಯ ಕಾರಣಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಬುಧವಾರ ಲ್ಯಾಬ್ ವರದಿ ಹೊರಬಿದ್ದ ಬಳಿಕ, ಇದು ಜಗನ್‌ಮೋಹನ್ ರೆಡ್ಡಿ ನೀಡಿರುವ ಮೊದಲ ಪ್ರತಿಕ್ರಿಯೆಯಾಗಿದೆ. ರಾಜಕೀಯಕ್ಕಾಗಿ ನಂಬಿಕೆಯನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತು ಅವರ ಟಿಡಿಪಿ ವಿರುದ್ಧ ಆರೋಪಿಸಿದ್ದಾರೆ.

ಜಗನ್‌ಮೋಹನ್ ರೆಡ್ಡಿ ಆರೋಪವನ್ನು ನಿರಾಕರಿಸುವ ಮೊದಲು, ತಿರುಪತಿ ಪ್ರದಾದದ ವಿವಾದ ಸುಪ್ರೀಂ ಕೋರ್ಟ್‌ಗೆ ತಲುಪಿತು, ಇದು ಸಂವಿಧಾನದ 25 ನೇ ವಿಧಿಯ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ಕೇಂದ್ರ ಸಚಿವಾಲಯ ಪ್ರಕರಣದ ಬಗ್ಗೆ ವಿವರವಾದ ವರದಿಯನ್ನು ನೀಡಿದ್ದು, ಕೇಂದ್ರ ಆಹಾರ ಸಚಿವ ಪ್ರಲ್ಹಾದ್ ಜೋಶಿ ವಿವರವಾದ ತನಿಖೆಗೆ ಕರೆ ನೀಡಿದ್ದು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದರು.
ತುಪ್ಪ ಪೂರೈಕೆದಾರರ ವಿರುದ್ಧ ಆರೋಪ
ಟಿಟಿಡಿ ಕೂಡ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದೆ, ತುಪ್ಪ ಪೂರೈಕೆದಾರರು ಆಂತರಿಕ ಆಹಾರ ಪರೀಕ್ಷಾ ಸೌಲಭ್ಯಗಳ ಕೊರತೆಯನ್ನು ಬಳಸಿಕೊಂಡು ಕಳಪೆ ತುಪ್ಪ ಪೂರೈಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ನಿತ್ಯ ಗುಣಮಟ್ಟದ ಪರೀಕ್ಷೆ ಮಾಡಲು ಸೌಲಭ್ಯಗಳ ಕೊರತೆ ಇರುವುದನ್ನೇ ಬಳಸಿಕೊಂಡು ಕಳಪೆ ತುಪ್ಪ ಪೂರೈಸಿದ್ದಾರೆ ಎಂದು ದೇವಸ್ಥಾನದ ಅಧಿಕಾರಿಗಳು ಆರೋಪಿಸಿದ್ದಾರೆ.
ಜೂನ್ ಮತ್ತು ಜುಲೈನಲ್ಲಿ ತಮಿಳುನಾಡು ಮೂಲದ ಎಆರ್ ಡೈರಿ ಫುಡ್ ಪ್ರೈವೇಟ್ ಲಿಮಿಟೆಡ್ ತಿರುಮಲ ದೇವಸ್ಥಾನಕ್ಕೆ ತುಪ್ಪವನ್ನು ಪೂರೈಕೆ ಮಾಡಿತ್ತು. ಗುಣಮಟ್ಟ ಪರೀಕ್ಷೆಗಳನ್ನು ಪೂರೈಸಿದ ಬಳಕವೇ ತುಪ್ಪವನ್ನು ಪೂರೈಕೆ ಮಾಡಲು ಒಪ್ಪಿಗೆ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿ ಇವೆ ಎಂದು ಹೇಳಿದ್ದಾರೆ.
ಗುಜರಾತ್‌ನ ಸರ್ಜಾರಿ ಪ್ರಯೋಗಾಲಯವು ತಿರುಪತಿ ಲಾಡುವನ್ನು ಪರೀಕ್ಷೆ ನಡೆಸಲಾಗಿದ್ದು, ಲಾಡು ಪ್ರಸಾದದಲ್ಲಿ ಮೀನಿನ ಎಣ್ಣೆ, ಬೀಫ್ ಟ್ಯಾಲೋ ಮತ್ತು ಹಂದಿ ಕೊಬ್ಬಿನ ಅಂಶ ಇರುವುದು ದೃಢಪಟ್ಟಿದೆ ಎಂದು ಹೇಳಿದ್ದಾರೆ.
ಆಂಧ್ರ ಪ್ರದೇಶದ ಡಿಸಿಎಂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಸನಾತನ ಧರ್ಮವನ್ನು ಅಪವಿತ್ರಗೊಳಿಸುವ ಪ್ರಯತ್ನ ಎಂದು ಹೇಳಿದ್ದಾರೆ.
ತಿರುಮಲ ದೇವಸ್ಥಾನದಲ್ಲಿ ಪ್ರತಿದಿನ ಮೂರು ಲಕ್ಷ ಲಾಡುಗಳನ್ನು ತಯಾರಿಸಲಾಗುತ್ತದೆ. ಸುಮಾರು 1,400 ಕೆಜಿ ತುಪ್ಪ ಮತ್ತು ಗೋಡಂಬಿ, ಒಣದ್ರಾಕ್ಷಿ, ಏಲಕ್ಕಿ, ಬೇಳೆ ಹಿಟ್ಟು ಮತ್ತು ಸಕ್ಕರೆಯನ್ನು ಬಳಕೆ ಮಾಡಲಾಗುತ್ತದೆ. ತಮಿಳುನಾಡಿನ ದಿಂಡಿಗಲ್‌ನ ಪೂರೈಕೆದಾರರಿಂದ ತುಪ್ಪವನ್ನು ಖರೀದಿಸಲಾಗಿದೆ ಎಂದು ವರದಿಗಳು ಸೂಚಿಸುತ್ತವೆ.












Click it and Unblock the Notifications