Jagan Mohan Reddy: ಪ್ರಚಾರದ ವೇಳೆ ಕಲ್ಲುತೂರಾಟದಲ್ಲಿ ಗಾಯಗೊಂಡ ಆಂಧ್ರ ಪ್ರದೇಶ ಸಿಎಂ ಜಗನ್ ರೆಡ್ಡಿ
ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿಜಯವಾಡದಲ್ಲಿ ಚುನಾವಣಾ ಪ್ರಚಾರದ ವೇಳೆ ಅಪರಿಚಿತರು ಎಸೆದ ಕಲ್ಲು ತಾಗಿ ಗಾಯಗೊಂಡಿದ್ದಾರೆ.
ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ತಮ್ಮ ಮೇಮಂತ ಸಿದ್ದಮ್ (ನಾವು ಸಿದ್ಧ) ಬಸ್ ಯಾತ್ರೆಯ ಭಾಗವಾಗಿ ಬಸ್‌ನಲ್ಲಿ ಪ್ರಚಾರ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಜಗನ್ ಮೋಹನ್ ರೆಡ್ಡಿ ಅವರ ಎಡ ಹುಬ್ಬಿನ ಮೇಲೆ ಕಲ್ಲು ತಗುಲಿದ್ದು ಸ್ವಲ್ಪದರಲ್ಲೇ ಅವರ ಕಣ್ಣಿಗೆ ಬೀಳುವುದರಿಂದ ತಪ್ಪಿಸಿಕೊಂಡಿದ್ದಾರೆ. ಅವರ ಗಾಯಕ್ಕೆ ಎರಡು ಹೊಲಿಗೆಗಳು ಬೇಕಾಗುತ್ತವೆ ಎಂದು ವೈದ್ಯರು ತಿಳಿಸಿದ್ದಾರೆ.
ಸಮೀಪದ ಶಾಲೆಯೊಂದರಿಂದ ಕಲ್ಲು ಎಸೆಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. ದಾಳಿಯ ಬಗ್ಗೆ ವೈಎಸ್‌ಆರ್‌ಸಿಪಿ ಸದಸ್ಯರೊಬ್ಬರು ಪ್ರತಿಕ್ರಿಯೆ ನೀಡಿದ್ದು, ಇದು ಟಿಡಿಪಿ ಮೈತ್ರಿಕೂಟ ಮಾಡಿರುವ ಸಂಚು ಎಂದು ಆರೋಪಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು ಸೋಲುವ ಭಯದಿಂದ ಆತಂಕಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಜಗನ್ ಮೋಹನ್ ರೆಡ್ಡಿ ವಾಹನದ ಮೇಲೆ ನಿಂತು ರಸ್ತೆ ಬದಿಯಲ್ಲಿ ಸೇರಿದ್ದ ಜನರಿಗೆ ನಮಸ್ಕರಿಸುವುದನ್ನು ನೋಡಬಹುದು. ಬಳಿಕ ತಮ್ಮ ಎಡಗಣ್ಣಿನ ಹುಬ್ಬನ್ನು ಕೈಯಿಂದ ಮುಚ್ಚಿಕೊಂಡಿರುವುದನ್ನು ನೋಡಬಹುದು.
ಜಗನ್ ರೆಡ್ಡಿ ಜೊತೆಗಿದ್ದ ವ್ಯಕ್ತಿಯೊಬ್ಬರು ಬಟ್ಟೆಯಿಂದ ಎಡಗಣ್ಣನ್ನು ಮುಚ್ಚಿರುವುದನ್ನು ನೋಡಬಹುದು. ಬಸ್‌ನೊಳಗೆ ವೈದ್ಯರು ಜಗನ್ ಮೋಹನ್ ರೆಡ್ಡಿ ಅವರಿಗೆ ಚಿಕಿತ್ಸೆ ನೀಡಿದರು, ಬಳಿಕ ಅವರು ತಮ್ಮ ಪ್ರಚಾರವನ್ನು ಮುಂದುವರೆಸಿದರು.
ಆಂಧ್ರಪ್ರದೇಶದಲ್ಲಿ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆ ಒಟ್ಟಿಗೆ ನಡೆಯಲಿದೆ. 175 ಸದಸ್ಯ ಬಲದ ವಿಧಾನಸಭೆ ಮತ್ತು 25 ಲೋಕಸಭಾ ಸ್ಥಾನಗಳಿಗೆ ಮೇ 13ರಂದು ಚುನಾವಣೆ ನಡೆಯಲಿದೆ. ವೈಎಸ್‌ಆರ್‌ಸಿಪಿ 2019ರ ಚುನಾವಣೆಯಲ್ಲಿ 151 ವಿಧಾನಸಭಾ ಸ್ಥಾನಗಳು ಮತ್ತು 22 ಲೋಕಸಭಾ ಕ್ಷೇತ್ರಗಳನ್ನು ಗೆದ್ದಿತ್ತು. ಈ ಬಾರಿ ಟಿಡಿಪಿ, ಬಿಜೆಪಿ ಮತ್ತು ಜನಸೇನೆ ಮೈತ್ರಿಯಿಂದ ಸವಾಲು ಎದುರಿಸುತ್ತಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications