• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಉಪರಾಷ್ಟ್ರಪತಿ ಚುನಾವಣೆಗೆ ಜಗದೀಪ್ ಧಂಖರ್ ಎನ್‌ಡಿಎ ಅಭ್ಯರ್ಥಿ

|
Google Oneindia Kannada News

ನವದೆಹಲಿ, ಜುಲೈ 16: ಭಾರತದಲ್ಲಿ ಉಪ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಘೋಷಿಸಿದ್ದಾರೆ.
ನವದೆಹಲಿಯಲ್ಲಿ ಶನಿವಾರ ನಡೆದ ಸಂಸದೀಯ ಸಭೆಯಲ್ಲಿ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಲಾಗಿದೆ. ಮೈತ್ರಿಕೂಟದ ಸದಸ್ಯರೊಂದಿಗಿನ ಸುದೀರ್ಘ ಚರ್ಚೆಯ ನಂತರದಲ್ಲಿ ರಾತ್ರಿ 8 ಗಂಟೆಗೆ ಅಧಿಕೃತವಾಗಿ ಅಭ್ಯರ್ಥಿಯ ಹೆಸರನ್ನು ಘೋಷಿಸಲಾಗಿದೆ.

ಉಪರಾಷ್ಟ್ರಪತಿ ಚುನಾವಣೆ; ಅಭ್ಯರ್ಥಿಯ ಚರ್ಚೆಗೆ ವಿರೋಧ ಪಕ್ಷಗಳ ಸಭೆ ಉಪರಾಷ್ಟ್ರಪತಿ ಚುನಾವಣೆ; ಅಭ್ಯರ್ಥಿಯ ಚರ್ಚೆಗೆ ವಿರೋಧ ಪಕ್ಷಗಳ ಸಭೆ

ಎನ್‌ಡಿಎ ಅಭ್ಯರ್ಥಿ ಆಯ್ಕೆಗೂ ಪೂರ್ವದಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದರು. ಈ ಭೇಟಿಯ ಹಿಂದೆ ಹಲವು ಅನುಮಾನ ಹುಟ್ಟಿಕೊಂಡಿದ್ದು, ಇವರೇ ಎನ್‌ಡಿಎ ಅಭ್ಯರ್ಥಿ ಎನ್ನುವ ಊಹಾಪೋಹಗಳು ಹರಿದಾಡುತ್ತಿದ್ದವು. ರಾಜಕೀಯ ತಜ್ಞರ ಲೆಕ್ಕಾಚಾರದಂತೆ ಎನ್‌ಡಿಎ ಅಭ್ಯರ್ಥಿಯ ಹೆಸರು ಅಂತಿಮಗೊಂಡಿದೆ.

ಉಪ ರಾಷ್ಟ್ರಪತಿ ಆಯ್ಕೆಯ ವಿಧಾನ:
2022ರಲ್ಲಿ ದೇಶದ 16ನೇ ಉಪ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಸಲಾಗುತ್ತದೆ. ಈ ವೇಳೆ ಸಂಸತ್ ಉಭಯ ಸದನಗಳ ಸದಸ್ಯರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ. ರಾಜ್ಯಸಭೆಯ 233 ಚುನಾಯಿತ ಸದಸ್ಯರು, ರಾಜ್ಯಸಭೆಯ 12 ನಾಮ ನಿರ್ದೇಶಿತ ಸದಸ್ಯರು ಹಾಗೂ ಲೋಕಸಭೆಯ 543 ಸದಸ್ಯರು ಈ ಚುನಾವಣೆಯಲ್ಲಿ ಮತದಾನ ಮಾಡಲಿದ್ದಾರೆ. ಒಟ್ಟು ಮೂರನೇ ಎರಡರಷ್ಟು ಮತಗಳನ್ನು ಪಡೆದುಕೊಳ್ಳುವ ಅಭ್ಯರ್ಥಿಯು ಮುಂದಿನ ಉಪ ರಾಷ್ಟ್ರಪತಿ ಆಗಿ ಆಯ್ಕೆ ಆಗಲಿದ್ದಾರೆ.

English summary
BJP chief JP Nadda Announced Jagdeep Dhankhar as NDA candidate for the post of Vice President of India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X