Get Updates
Get notified of breaking news, exclusive insights, and must-see stories!

ಉಪರಾಷ್ಟ್ರಪತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ಜಗದೀಪ್ ಧನಕರ್

ನವದೆಹಲಿ, ಆಗಸ್ಟ್ 11 : ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಮತ್ತು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಅಭ್ಯರ್ಥಿ ಜಗದೀಪ್ ಧನಕರ್ ಭಾರತದ ಉಪರಾಷ್ಟ್ರಪತಿಯಾಗಿ ಇಂದು ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಗುರುವಾರ ಬೆಳಗ್ಗೆ 11:45 ಕ್ಕೆ ರಾಷ್ಟ್ರಪತಿ ಭವನದಲ್ಲಿ ಭಾರತದ ಚುನಾಯಿತ ನೂತನ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ಮಾರ್ಗರೇಟ್ ಆಳ್ವ ಅವರನ್ನು ಸೋಲಿಸುವ ಮೂಲಕ ಜಗದೀಪ್ ಧನಕರ್ ಆಗಸ್ಟ್ 6 ರಂದು ಉಪರಾಷ್ಟ್ರಪತಿಯಾಗಿ ಆಯ್ಕೆಯಾದರು.

ಆಗಸ್ಟ್ 7 ರಂದು, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮತ್ತು ಚುನಾವಣಾ ಆಯುಕ್ತ ಅನುಪ್ ಚಂದ್ರ ಪಾಂಡೆ ಜಂಟಿಯಾಗಿ ಭಾರತದ ಮುಂದಿನ ಉಪರಾಷ್ಟ್ರಪತಿಯಾಗಿ ಜಗದೀಪ್ ಧನಕರ್ ಅವರ ಚುನಾವಣೆಯ ಪ್ರಮಾಣಕೀರಣಕ್ಕೆ ಸಹಿ ಹಾಕಿದರು.

ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿ ಮಾರ್ಗರೇಟ್ ಆಳ್ವ 182 ಮತಗಳನ್ನು ಪಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ 528 ಮತಗಳನ್ನು ಪಡೆದು ನಿರಾಯಾಸವಾಗಿ ಗೆಲುವು ಸಾಧಿಸಿದರು.

 ಅತಿ ಹೆಚ್ಚು ಅಂತರದ ಗೆಲುವು

ಅತಿ ಹೆಚ್ಚು ಅಂತರದ ಗೆಲುವು

ಜಗದೀಪ್ ಧನಖರ್ ಶೇ.74.36 ಗಳಿಸಿದರು. 1997 ರಿಂದ ನಡೆದ ಕೊನೆಯ ಆರು ಉಪರಾಷ್ಟ್ರಪತಿ ಚುನಾವಣೆಗಳಲ್ಲಿ ಅವರು ಅತಿ ಹೆಚ್ಚು ಅಂತರದ ಗೆಲುವು ಸಾಧಿಸಿದ ಕೀರ್ತಿಗೆ ಭಾಜನರಾಗಿದ್ದಾರೆ.

ಒಟ್ಟು 780 ಮತದಾರರ ಪೈಕಿ 725 ಮಂದಿ ಮತ ಚಲಾಯಿಸಿದ್ದು, 15 ಮತಗಳು ಅಸಿಂಧುವಾಗಿವೆ ಎಂದು ಉಪರಾಷ್ಟ್ರಪತಿ ಚುನಾವಣೆಯ ಚುನಾವಣಾಧಿಕಾರಿ ತಿಳಿಸಿದ್ದಾರೆ. 92.94 ರಷ್ಟು ಮತದಾನವಾಗಿದ್ದು, ಉಪರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಯಾಗಲು 356 ಮತಗಳ ಅಗತ್ಯವಿದೆ ಎಂದು ಅವರು ಹೇಳಿದರು.

ಲೋಕಸಭೆಯಲ್ಲಿ 23 ಸಂಸದರು ಸೇರಿದಂತೆ ಒಟ್ಟು 36 ಸಂಸದರನ್ನು ಹೊಂದಿರುವ ತೃಣಮೂಲ ಕಾಂಗ್ರೆಸ್ ಚುನಾವಣೆಯಿಂದ ದೂರ ಉಳಿದಿತ್ತು. ಆದರೆ, ಅದರ ಇಬ್ಬರು ಸಂಸದರು ಮತ ಚಲಾಯಿಸಿದ್ದರು. ಉಪರಾಷ್ಟ್ರಪತಿ ಚುನಾವಣೆಯಲ್ಲಿ 55 ಸಂಸದರು ಮತದಾನ ಮಾಡಿರಲಿಲ್ಲ.

 ವಕೀಲರಾಗಿದ್ದ ಜಗದೀಪ್ ಧನಕರ್

ವಕೀಲರಾಗಿದ್ದ ಜಗದೀಪ್ ಧನಕರ್

ಮೇ 18, 1951 ರಂದು ರಾಜಸ್ಥಾನದ ಜುಂಜುನು ಜಿಲ್ಲೆಯ ಹಳ್ಳಿಯೊಂದರ ಕೃಷಿ ಕುಟುಂಬದಲ್ಲಿ ಜನಿಸಿದ ಧಂಖರ್ ಅವರು ಚಿತ್ತೋರ್‌ಗಢದ ಸೈನಿಕ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ಭೌತಶಾಸ್ತ್ರದಲ್ಲಿ ಪದವಿ ಮುಗಿಸಿದ ನಂತರ ಅವರು ರಾಜಸ್ಥಾನ ವಿಶ್ವವಿದ್ಯಾನಿಲಯದಿಂದ ಎಲ್‌ಎಲ್‌ಬಿ ವ್ಯಾಸಂಗ ಮಾಡಿದರು. ನಂತರ ಅವರು ರಾಜ್ಯದ ಪ್ರಮುಖ ವಕೀಲರಲ್ಲಿ ಒಬ್ಬರಾದರು.

ನಂತರ ಜಗದೀಪ್ ಧನಕರ್ ಅವರು ರಾಜಸ್ಥಾನ ಹೈಕೋರ್ಟ್ ಮತ್ತು ಭಾರತದ ಸುಪ್ರೀಂ ಕೋರ್ಟ್ ಎರಡರಲ್ಲೂ ವಕೀಲ ವೃತ್ತಿಯನ್ನು ಅಭ್ಯಾಸ ಮಾಡಿದ್ದಾರೆ.

 1989ರಲ್ಲಿ ಲೋಕಸಭೆಗೆ ಆಯ್ಕೆಯಾದ ಧನಕರ್

1989ರಲ್ಲಿ ಲೋಕಸಭೆಗೆ ಆಯ್ಕೆಯಾದ ಧನಕರ್

1989 ರ ಲೋಕಸಭಾ ಚುನಾವಣೆಯಲ್ಲಿ ಜನತಾ ದಳ ಪಕ್ಷದ ಮೂಲಕ ಜುಂಜುನುದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ಅವರು ಸಾರ್ವಜನಿಕ ಜೀವನವನ್ನು ಪ್ರವೇಶಿಸಿದರು. ಅವರು 1990 ರಲ್ಲಿ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದರು. ಅವರ ರಾಜಕೀಯವು ಆರಂಭದಲ್ಲಿ ಮಾಜಿ ಉಪ ಪ್ರಧಾನಿ ದೇವಿ ಲಾಲ್ ಅವರಿಂದ ಪ್ರಭಾವಿತವಾಗಿತ್ತು.


ಜಾಟ್ ಸಮುದಾಯಕ್ಕೆ ಸೇರಿದ ಧಂಖರ್ ನಂತರ ರಾಜ್ಯ ರಾಜಕೀಯದತ್ತ ಗಮನ ಹರಿಸಿದರು ಮತ್ತು 1993 ರಲ್ಲಿ ಅಜ್ಮೀರ್ ಜಿಲ್ಲೆಯ ಕಿಶನ್‌ಗಢ್ ಕ್ಷೇತ್ರದಿಂದ ರಾಜಸ್ಥಾನ ವಿಧಾನಸಭೆಗೆ ಆಯ್ಕೆಯಾದರು.

 ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದ ಜಗದೀಪ್ ಧನಕರ್

ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದ ಜಗದೀಪ್ ಧನಕರ್

ಧನ‌ಕರ್ ಅವರನ್ನು 2019 ರಲ್ಲಿ ಪಶ್ಚಿಮ ಬಂಗಾಳದ ಗವರ್ನರ್ ಆಗಿ ನೇಮಿಸಲಾಯಿತು. ಅವರು ಜುಲೈ 17 ರಂದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಉಪಾಧ್ಯಕ್ಷ ಅಭ್ಯರ್ಥಿಯಾಗಿ ತಮ್ಮ ಹೆಸರನ್ನು ಘೋಷಿಸಿದ ನಂತರ ಪಶ್ಚಿಮ ಬಂಗಾಳದ ಗವರ್ನರ್ ಹುದ್ದೆಗೆ ರಾಜೀನಾಮೆ ನೀಡಿದರು.

ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾಗಿರುವ ಭಾರತದ ಉಪರಾಷ್ಟ್ರಪತಿಯನ್ನು ರಾಜ್ಯಸಭೆ ಮತ್ತು ಲೋಕಸಭೆಯ ಸದಸ್ಯರನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಉಪರಾಷ್ಟ್ರಪತಿ ರಾಜ್ಯಸಭೆಯ ಅಧ್ಯಕ್ಷರೂ ಆಗಿರುತ್ತಾರೆ. ಖಜಾನೆ ಪೀಠಗಳು ಮತ್ತು ಪ್ರತಿಪಕ್ಷಗಳ ನಡುವೆ ಸ್ಪಷ್ಟವಾದ ವಿಭಜನೆಗಳಿರುವ ಸಮಯದಲ್ಲಿ ಧಂಕರ್ ಅವರು ಸಂಸತ್ತಿನ ಮೇಲ್ಮನೆಯ ಕಲಾಪಗಳ ಅಧ್ಯಕ್ಷತೆ ವಹಿಸುತ್ತಾರೆ.
ಧನಕರ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗುವುದರೊಂದಿಗೆ ಲೋಕಸಭೆ ಮತ್ತು ರಾಜ್ಯಸಭೆ ಎರಡರ ಅಧ್ಯಕ್ಷರು ರಾಜಸ್ಥಾನದವರಾಗಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+