Jagadish Shettar: ಕಾಂಗ್ರೆಸ್​ಗೆ ಗುಡ್​ ಬೈ ಹೇಳಿ ಬಿಜೆಪಿಗೆ ಮರಳಿದ ಜಗದೀಶ್‌ ಶೆಟ್ಟರ್‌ ಫಸ್ಟ್ ರಿಯಾಕ್ಷನ್!

ದೆಹಲಿ, ಜನವರಿ 25: ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್​ಸಿ ಜಗದೀಶ್ ಶೆಟ್ಟರ್ ಅವರನ್ನ ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುವ ಮೂಲಕ ಯಶಸ್ವಿಯಾಗಿದೆ.

ದೆಹಲಿ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಭುಪೇಂದ್ರ ಯಾದವ್​, ರಾಜೀವ್​ ಚಂದ್ರಶೇಖರ್​ ಸಮ್ಮುಖದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

Jagdish Shettars first reaction after joining BJP

ಈ ವೇಳೆ ಪಕ್ಷ ಸೇರ್ಪಡೆ ಬಳಿಕ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ನಾನು ಪಕ್ಷಕ್ಕೆ ವಾಪಸಾಗಬೇಕೆಂದು ನಾಯಕರ ಅಪೇಕ್ಷೆ ಇತ್ತು. ಕೇಂದ್ರ ನಾಯಕರಾದ ಅಮಿತ್​ ಶಾ ಅವರು ಅತ್ಯಂತ ಗೌರವದಿಂದ ಬರಮಾಡಿಕೊಂಡರು. ನಾನು ಬಿಜೆಪಿ ಮರು ಸೇರ್ಪಡೆಯಾಗಿದ್ದಕ್ಕೆ ಬಹಳ ಸಂತಸ ಆಗಿದೆ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು. ನಾನು ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡುತ್ತೇನೆ. ಕಾಂಗ್ರೆಸ್​ನವರು ಕೂಡ ಒಳ್ಳೇ ಗೌರವ, ಸ್ಥಾನಮಾನ ನೀಡಿದ್ದರು. ಕಾಂಗ್ರೆಸ್​ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್​ಗೆ ಧನ್ಯವಾದ ತಿಳಿಸುತ್ತೇನೆ ಎಂದ ಅವರು, ನಾನು ಪರಿಷತ್​ ಸ್ಥಾನಕ್ಕೆ ರಾಜೀನಾಮೆಯನ್ನೂ ಸಲ್ಲಿಸಿದ್ದೇನೆ. ಕಾಂಗ್ರೆಸ್​ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದೇನೆ. ಇ-ಮೇಲ್​ ಮೂಲಕ ರಾಜೀನಾಮೆಯನ್ನ ನೀಡಿದ್ದೇನೆ ಎಂದು ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿ ಸೇರ್ಪಡೆ: ವಿಜಯೇಂದ್ರ

ಹಿರಿಯ ಮುಖಂಡ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರಿದ್ದರಿಂದ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು.
ಜಗದೀಶ್‌ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ತಮ್ಮ ವಿಧಾನಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡಿ ಮತ್ತೊಮ್ಮೆ ಬಿಜೆಪಿ ಸೇರಿದ್ದಾರೆ. ಅವರ ಮನೆಗೇ ಅವರು ಮರಳಿ ಬಂದಿದ್ದಾರೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಬೆಳವಣಿಗೆ ದೃಷ್ಟಿಯಿಂದ ಇದೊಂದು ದೊಡ್ಡ ಶಕ್ತಿ ಎಂದ ಅವರು, ಪಕ್ಷದ ಹಿರಿಯರು, ಕಾರ್ಯಕರ್ತರ ಅಪೇಕ್ಷೆ ಇದಾಗಿತ್ತು. ಈ ಕುರಿತು ಹಲವಾರು ದಿನಗಳಿಂದ ಚರ್ಚೆ ಆಗಿತ್ತು. ಇವತ್ತು ಬೆಳಿಗ್ಗೆ ಬಿಜೆಪಿ ವರಿಷ್ಠರಾದ, ಮಾನ್ಯ ಗೃಹ ಸಚಿವ ಅಮಿತ್ ಶಾ ಅವರನ್ನು ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಮತ್ತಿತರ ಹಿರಿಯರೊಂದಿಗೆ ಭೇಟಿ ಮಾಡಿ, ಚರ್ಚಿಸಿ ಯಾವುದೇ ಅಪೇಕ್ಷೆ ಇಲ್ಲದೆ ಬಿಜೆಪಿ ಸೇರಿದ್ದಾರೆ ಎಂದು ತಿಳಿಸಿದರು. ರಾಷ್ಟ್ರೀಯ ಅಧ್ಯಕ್ಷ ನಡ್ಡಾಜೀ, ಅಮಿತ್ ಶಾಜೀ, ರಾಜ್ಯದ ಕಾರ್ಯಕರ್ತರು ಅವರ ಮರಳುವಿಕೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+