ಸುಪ್ರೀಂಕೋರ್ಟಿನ 44ನೇ ಮುಖ್ಯ ನ್ಯಾಯಮೂರ್ತಿಯಾಗಿ ಖೇಹರ್
ಸುಪ್ರೀಂಕೋರ್ಟಿನ 44ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ)ಯಾಗಿ ಜಗದೀಶ್ ಸಿಂಗ್ ಖೇಹರ್ ಅವರು ಬುಧವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನವದೆಹಲಿ, ಜನವರಿ 04: ಸುಪ್ರೀಂಕೋರ್ಟಿನ 44ನೇ ಮುಖ್ಯ ನ್ಯಾಯಮೂರ್ತಿ (ಸಿಜೆಐ)ಯಾಗಿ ಜಗದೀಶ್ ಸಿಂಗ್ ಖೇಹರ್ ಅವರು ಬುಧವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿರುವ ನ್ಯಾಯಮೂರ್ತಿಗಳ ಪೈಕಿ ಹಿರಿಯವರಾಗಿರುವ ಖೇಹರ್ ಅವರು ಸಿಖ್ ಸಮುದಾಯದಿಂದ ಸಿ.ಜೆ ಐ ಹುದ್ದೆಗೇರುತ್ತಿರುವ ಮೊದಲ ಸಿಖ್ ನ್ಯಾಯಮೂರ್ತಿಯಾಗಿದ್ದಾರೆ. [ಸಿಜೆಐ ಆಗಿ ಜೆಎಸ್ ಖೇಹರ್ ನೇಮಿಸಿದ ರಾಷ್ಟ್ರಪತಿ]

ನ್ಯಾ. ಜೆಎಸ್ ಖೇಹರ್ ಅವರ ಅಧಿಕಾರ ಅವಧಿ ಜನವರಿ 4 2017ರಿಂದ ಆರಂಭವಾಗಿ ಅಗಸ್ಟ್ 28, 2017ರಲ್ಲಿ ಅಂತ್ಯವಾಗಲಿದೆ. ನ್ಯಾ. ಟಿಎಸ್ ಠಾಕೂರ್ ಅವರ ಅಧಿಕಾರ ಅವಧಿ ಮಂಗಳವಾರ(ಜನವರಿ 03)ಕ್ಕೆ ಅಂತ್ಯ ಕಂಡಿತು.
ನ್ಯಾ. ಜೆಎಸ್ ಖೇಹರ್ ಅವರು ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.
1979ರಲ್ಲಿ ವಕೀಲ ವೃತ್ತಿ ಆರಂಭಿಸಿದ ಖೇಹರ್ ಅವರು ಪಂಜಾಬ್, ಹರ್ಯಾಣ, ಹಿಮಾಚಲ ಪ್ರದೇಶ ಸೇರಿದಂತೆ ಹಲವು ಹೈಕೋರ್ಟ್ ಗಳಲ್ಲಿ ಕಾರ್ಯನಿರ್ವಹಿಸಿದ್ದರು. ಉತ್ತರಾಖಂಡ್ ನ ಹೈಕೋರ್ಟ್ ಮುಖ್ಯ ಜಸ್ಟೀಸ್ ಆಗಿದ್ದ ಅವರು ನಂತರ 2010ರಲ್ಲಿ ಕರ್ನಾಟಕದ ಹೈಕೋರ್ಟ್ ಮುಖ್ಯ ಜಸ್ಟೀಸ್ ಆದರು. 2011ರಲ್ಲಿ ಸುಪ್ರೀಂಕೋರ್ಟಿನ ಜಡ್ಜ್ ಆಗಿ ನೇಮಕವಾಗಿದ್ದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications