ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅದಾನಿಗೆ 3 ವಿಮಾನ ನಿಲ್ದಾಣಗಳ ನಿರ್ವಹಣೆ ಜವಾಬ್ದಾರಿ ನೀಡಲು ಕೇಂದ್ರ ಅಸ್ತು

|
Google Oneindia Kannada News

ನವದೆಹಲಿ, ಆಗಸ್ಟ್ 19: ಭಾರತದ ಮೂರು ವಿಮಾನ ನಿಲ್ದಾಣಗಳ ನಿರ್ವಹಣೆ ಹಾಗೂ ಗುತ್ತಿಗೆಯ ಜವಾಬ್ದಾರಿಯನ್ನು ಅದಾನಿ ಗ್ರೂಪ್‌ಗೆ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಈ ಕುರಿತು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್, ನಾಗರಿಕ ವಿಮಾನಯಾನ ಸಚಿವಾಲಯದ ಅಧೀನದಲ್ಲಿರುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಮೂರು ವಿಮಾನ ನಿಲ್ದಾಣಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮತ್ತು ಎಎಐ ಮೂಲಕ ಗುತ್ತಿಗೆಗೆ ನೀಡಲು ಅನುಮೋದಿಸಿದೆ.

ಕೇಂದ್ರ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳುಕೇಂದ್ರ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಇದರಿಂದ ಸುಮಾರು 1,070 ಕೋಟಿ ರೂ.ಗಳಿಕೆಯೇ ಅಲ್ಲದೆ, ಪ್ರಯಾಣಿಕರಿಗೆ ಲಭ್ಯವಿರುವ ಸೌಲಭ್ಯಗಳು ಸುಧಾರಿಸುತ್ತದೆ ಎಂದರು.

Jaipur, Guwahati And Thiruvananthapuram Airports To Be Leased Out

ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಈ ಕಾರ್ಯ ನಡೆಯಲಿದೆ. ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು ಗುತ್ತಿಗೆ ನೀಡುವ ಪ್ರಸ್ತಾಪಕ್ಕೆ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳನ್ನು ಗುತ್ತಿಗೆಯನ್ನು ಅದಾನಿ ಗ್ರೂಪ್ ಗೆ ನೀಡಲಾಗಿದೆ. ಸಾರ್ವಜನಿಕ ವಿಮಾನಯಾನ(ಪಿಪಿಪಿ) ಆಧಾರದ ಮೇಲೆ ಗುತ್ತಿಗೆಗೆ ಈ ವಿಮಾನ ನಿಲ್ದಾಣಗಳನ್ನು ನಿರ್ವಹಿಸುವ ಮತ್ತು ಅಭಿವೃದ್ಧಿಪಡಿಸುವ ಹಕ್ಕನ್ನು ಖಾಸಗಿ ಕಂಪನಿಗಳಿಗೆ ವಹಿಸಲಾಗುವುದು.

50 ವರ್ಷಗಳ ಗುತ್ತಿಗೆ ನೀಡಲಾಗುವುದು ಎಂದು ಜಾವಡೇಕರ್ ಮಾಹಿತಿ ನೀಡಿದರು. ಪ್ರಸ್ತುತ, ಈ ಮೂರು ವಿಮಾನ ನಿಲ್ದಾಣಗಳನ್ನು ಎಎಐ ನಿರ್ವಹಿಸುತ್ತಿದೆ.

English summary
The Centre on Wednesday cleared award of airports at Jaipur, Thiruvananthapuram and Guwahati to the Adani Group that won these in an auction last year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X