ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುಲ್ವಾಮಾ ಮಾದರಿಯಲ್ಲಿ ಕಾಶ್ಮೀರದಲ್ಲಿ ಮತ್ತೊಂದು ದಾಳಿ? ಗುಪ್ತಚರ ಇಲಾಖೆ ಎಚ್ಚರಿಕೆ

|
Google Oneindia Kannada News

ನವದೆಹಲಿ, ಮಾರ್ಚ್ 11 : ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪುಲ್ವಾಮಾ ಮಾದರಿಯಂತೆಯೇ ಮತ್ತೊಂದು ಆತ್ಮಾಹುತಿ ದಾಳಿ ನಡೆಸಲು ಸಂಚು ರೂಪಿಸುತ್ತಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ಫೆಬ್ರವರಿ 14ರಂದು ಪುಲ್ವಾಮಾದಲ್ಲಿ ಮಾರುತಿ ಇಕೋ ವಾಹನವನ್ನು ಸಿಆರ್‌ಪಿಎಫ್ ಜವಾನರಿದ್ದ ಬಸ್ಸಿಗೆ ನುಗ್ಗಿಸಿ ನಡೆದ ಆತ್ಮಾಹುತಿ ದಾಳಿಯಲ್ಲಿ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು. ಇದಾಗಿ ತಿಂಗಳೊಳಗೆ ಮತ್ತೊಂದು ಅದೇ ಬಗೆಯ ದಾಳಿಯ ಎಚ್ಚರಿಕೆಯ ಗಂಟೆ ಮೊಳಗುತ್ತಿದೆ.

ಗುಪ್ತಚರ ಇಲಾಖೆ ಈ ಕುರಿತು ಭದ್ರತಾ ಪಡೆಗಳಿಗೆ ಮಾಹಿತಿ ರವಾನೆ ಮಾಡಿದೆ. ಪುಲ್ವಾಮಾ ಮಾದರಿಯಲ್ಲಿಯೇ ಮತ್ತೊಂದು ಆತ್ಮಾಹುತಿ ದಾಳಿ ನಡೆಸಲು ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ ಯೋಜನೆ ರೂಪಿಸಿದ್ದು, ಇದಕ್ಕಾಗಿ ಯುವಕರಿಗೆ ತರಬೇತಿ ನೀಡುತ್ತಿದೆ ಎಂದು ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಭಾರೀ ಬಂದೋಬಸ್ತ್ ಮಾಡಲಾಗುತ್ತಿದೆ.

ಆತ್ಮಾಹುತಿ ದಾಳಿಕೋರ ಆದಿಲ್ ಎಲ್ಲಿಯವ? ಜೈಷ್ ಆತನನ್ನು ಆರಿಸಿದ್ದೇಕೆ?ಆತ್ಮಾಹುತಿ ದಾಳಿಕೋರ ಆದಿಲ್ ಎಲ್ಲಿಯವ? ಜೈಷ್ ಆತನನ್ನು ಆರಿಸಿದ್ದೇಕೆ?

Jaish e Mohammed plotting for another suicide attack

ಪುಲ್ವಾಮಾ ಆತ್ಮಾಹುತಿ ದಾಳಿಯ ಮಾಸ್ಟರ್ ಮೈಂಡ್ ಹತ್ಯೆಪುಲ್ವಾಮಾ ಆತ್ಮಾಹುತಿ ದಾಳಿಯ ಮಾಸ್ಟರ್ ಮೈಂಡ್ ಹತ್ಯೆ

ಪಾಕಿಸ್ತಾನದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಕಮಾಂಡರ್ 5 ರಿಂದ 6 ಯುವಕರಿಗೆ ಆತ್ಮಾಹುತಿ ದಾಳಿ ನಡೆಸುವ ಕುರಿತು ತರಬೇತಿ ನೀಡುತ್ತಿದ್ದಾನೆ ಎಂದು ಗುಪ್ತಚರ ಇಲಾಖೆ ಹೇಳಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದೆ.

350 ಕೇಜಿ ಸ್ಫೋಟಕವನ್ನು ಸ್ಕಾರ್ಪಿಯೋದಲ್ಲಿ ತಂದು ಬಸ್ ಗೆ ಗುದ್ದಿದ ದಾಳಿಕೋರ350 ಕೇಜಿ ಸ್ಫೋಟಕವನ್ನು ಸ್ಕಾರ್ಪಿಯೋದಲ್ಲಿ ತಂದು ಬಸ್ ಗೆ ಗುದ್ದಿದ ದಾಳಿಕೋರ

ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ರಹಸ್ಯ ಸಂದೇಶಗಳನ್ನು ಗುಪ್ತಚರ ಇಲಾಖೆ ಡಿಕೋಡ್ ಮಾಡಿದೆ. ಇದರಿಂದಾಗಿ ಪುಲ್ವಾಮಾ ಮಾದರಿಯ ಮತ್ತೊಂದು ದಾಳಿ ನಡೆಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

'ದ ವಾರ್ ಈಸ್ ಬಿಟ್ವಿನ್ ಯು ಎಂಡ್ ಅಸ್. ಕಮ್ ಎಂಡ್ ಫೈಟ್, ವಿ ಆರ್ ರೆಡಿ' ಎಂಬ ಸಂದೇಶಗಳು ಹರಿದಾಡುತ್ತಿವೆ. ಈ ಬಾರಿಯೂ ಆತ್ಮಾಹುತಿ ದಾಳಿಯನ್ನು ನಡೆಸಬಹುದು ಎಂದು ಗುಪ್ತಚರ ಇಲಾಖೆ ಸಂದೇಶವನ್ನು ರವಾನಿಸಿದೆ.

English summary
Jaish-e-Mohammed plotting to fresh suicide attack in Jammu and Kashmir intelligence agencies have alerted security forces. Jaish-e-Mohammed conducted suicide attack in Pulwama on February 14, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X