ಎನ್ ಕೌಂಟರ್: 2 ಯೋಧರು ಹುತಾತ್ಮ, ಓರ್ವ ಉಗ್ರ ಹತ

Posted By:
Subscribe to Oneindia Kannada

ಶ್ರೀನಗರ, ನವೆಂಬರ್ 03 : ಜಮ್ಮು ಮತ್ತು ಕಾಶ್ಮೀರದ ಆವಂತಿಪೋರ್ ನಲ್ಲಿ ಭಾರತೀಯ ಸೇನಾಪಡೆ ಹಾಗೂ ಉಗ್ರರ ನಡುವೆ ಇಂದು ಬೆಳಿಗ್ಗೆ (ನ.03) ಗುಂಡಿನ ಚಕಮಕಿ ನಡೆದಿದೆ.

ಭಾರತೀಯ ಸೇನಾ ಪಡೆ ಓರ್ವ ಉಗ್ರನನ್ನು ಹೊಡೆದುರಿಳಿಸಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಆವಂತಿಪೋರ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ಭಾರತೀಯ ಸೇನೆ ಉಗ್ರರ ವಿರುದ್ಧ ಕಾರ್ಯಾಚರಣೆಗಿಳಿದಿದೆ.

Jaish terrorist killed, 2 Army jawans martyred in Jammu and Kashmir

ಈ ವೇಳೆ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆಗಳನ್ನು ಚುರುಕುಗೊಳಿಸಿದೆ. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆ ವ್ಯಕ್ತವಾಗಿದ್ದು, ಸೇನಾ ಪಡೆ ಕಾರ್ಯಚರಣೆ ಮುಂದುವರೆಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A terrorist has been killed and 2 security personnel martyred in an encounter in Awantipora village of south Kashmir's Pulwama district.The slain terrorist belonged to the Jaish-e-Mohammed and has been identified as Babar.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ