ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು: ಭದ್ರತಾ ಪಡೆ - ಉಗ್ರರ ನಡುವೆ ಗುಂಡಿನ ಚಕಮಕಿ, ಮೂವರು ಉಗ್ರರ ಹತ್ಯೆ

|
Google Oneindia Kannada News

ಶ್ರೀನಗರ, ಡಿ. 28: ಬುಧವಾರ ಜಮ್ಮುವಿನ ಹೊರವಲಯದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಎನ್‌ಕೌಂಟರ್‌ನಲ್ಲಿ ಕನಿಷ್ಠ ಮೂವರು ಉಗ್ರರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ ಜಮ್ಮುವಿನ ಹೊರವಲಯದ ಜಮ್ಮುವಿನ ಪಂಜತೀರ್ಥಿ-ಸಿದ್ರಾ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದ ಟ್ರಕ್ ಅನ್ನು ಭದ್ರತಾ ಪಡೆಗಳು ತಡೆದ ನಂತರ ಗುಂಡಿನ ಚಕಮಕಿ ನಡೆದಿದೆ. ಎನ್‌ಕೌಂಟರ್‌ನಲ್ಲಿ ಕನಿಷ್ಠ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು, ಕಾಶ್ಮೀರದಲ್ಲಿ ಎನ್‌ಕೌಂಟರ್‌: ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳುಜಮ್ಮು, ಕಾಶ್ಮೀರದಲ್ಲಿ ಎನ್‌ಕೌಂಟರ್‌: ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಗುಂಡಿನ ಕಾಳಗದಲ್ಲಿ ಟ್ರಕ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳವನ್ನು ಸ್ಥಳಕ್ಕೆ ಕರೆಯಲಾಗಿದೆ ಎಂದಿದ್ದಾರೆ.

Jammu: 3 terrorists killed in encounter with security forces

"ಈ ಪ್ರದೇಶದಲ್ಲಿ ಟ್ರಕ್‌ನ ಅನುಮಾನಾಸ್ಪದ ಚಲನವಲನವಿತ್ತು. ಪೊಲೀಸರು ಚೆಕ್ ಪೋಸ್ಟ್‌ನಲ್ಲಿ ಟ್ರಕ್ ಅನ್ನು ತಡೆದರು. ಭದ್ರತಾ ಪಡೆಗಳು ಟ್ರಕ್ ಅನ್ನು ಶೋಧಿಸಲು ಪ್ರಾರಂಭಿಸಿದಾಗ, ಒಳಗೆ ಅಡಗಿದ್ದ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು. ಗುಂಡಿನ ಚಕಮಕಿಯಲ್ಲಿ ಎಲ್ಲಾ ಭಯೋತ್ಪಾದಕರು ಹತರಾಗಿದ್ದಾರೆ. ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ " ಎಂದು ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಮುಕೇಶ್ ಸಿಂಗ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರವಷ್ಟೇ 15 ಕಿಲೋಗ್ರಾಂಗಳಷ್ಟು ತೂಕದ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಪೊಲೀಸರು ನಿಷ್ಕ್ರಿಯಗೊಳಿಸಿದ್ದರು. ಸೋಮವಾರ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಯ ಒಂದು ಕೋಡೆಡ್ ಶೀಟ್ ಮತ್ತು ಒಂದು ಲೆಟರ್ ಪ್ಯಾಡ್ ಪುಟವನ್ನು ಸಹ ವಶಪಡಿಸಿಕೊಳ್ಳಲಾಗಿದೆ, ಶಂಕಿತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಅಧಿಕಾರಿಗಳ ಪ್ರಕಾರ, ಬಸಂತಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

"ಸಿಲಿಂಡರ್‌ ಆಕಾರದಲ್ಲಿ ಸುಮಾರು 15 ಕೆಜಿ ತೂಕದ ಐಇಡಿ ತರಹದ ವಸ್ತು, 300-400 ಗ್ರಾಂ ಆರ್‌ಡಿಎಕ್ಸ್, 7.6 ಎಂಎಂನ ಏಳು ಕಾರ್ಟ್ರಿಡ್ಜ್‌ಗಳು, ಐದು ಡಿಟೋನೇಟರ್‌ಗಳು, ಒಂದು ಕೋಡೆಡ್ ಶೀಟ್, ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಇಟಿಯ ಒಂದು ಲೆಟರ್ ಪ್ಯಾಡ್ ಪುಟ ಉಧಮ್‌ಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ದೊರಕಿದೆ. ಒಬ್ಬ ಶಂಕಿತನನ್ನು ಸಹ ಬಂಧಿಸಲಾಗಿದೆ "ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

English summary
Three terrorists were killed during an encounter after Gunfight Between security forces and three terrorists Panjtirthi-Sidhra road in Jammu. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X