ಜಮ್ಮು ಮತ್ತು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಐವರು ಉಗ್ರರ ಬಲಿ
ನವದೆಹಲಿ, ಸೆಪ್ಟೆಂಬರ್ 21: ಜಮ್ಮು ಮತ್ತು ಕಾಶ್ಮೀರದ ಬಂಡಿಪೊರಾ ಜಿಲ್ಲೆಯ ಸುಂಬ್ಲಾರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಐವರು ಉಗ್ರರನ್ನು ಸದೆಬಡೆದಿದ್ದಾರೆ.
ಗಡಿ ನಿಯಂತ್ರಣ ರೇಖೆಯನ್ನು (ಎಲ್‌ಓಸಿ) ಇತ್ತೀಚೆಗೆ ದಾಟಿ ಬಂದಿದ್ದ ಲಷ್ಕರ್ ಎ ತಯಬಾ ಸಂಘಟನೆಯ ಐವರು ಉಗ್ರರು ಕಾಶ್ಮೀರದ ವಿವಿಧ ಭಾಗಗಳಿಗೆ ತೆರಳುತ್ತಿದ್ದರು.
ಅವರಲ್ಲಿ ಇಬ್ಬರು ಉಗ್ರರನ್ನು ಗುರುವಾರ ಹತ್ಯೆ ಮಾಡಲಾಗಿತ್ತು. ಉಳಿದ ಮೂವರು ಉಗ್ರರು ಶುಕ್ರವಾರ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ.

ಎನ್‌ಕೌಂಟರ್ ನಡೆದ ಸ್ಥಳದಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ಉಗ್ರರು ಇದ್ದಾರೆ ಎಂಬ ಮಾಹಿತಿ ಆಧಾರದಲ್ಲಿ ಸುಂಬ್ಲಾರ್ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ತೀವ್ರ ಕಾರ್ಯಾಚರಣೆ ನಡೆಸಿದ್ದವು. ಪತ್ತೆ ಕಾರ್ಯಾಚರಣೆ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಕೂಡಲೇ ಪ್ರತಿಕ್ರಿಯೆ ನೀಡಿದ ಭದ್ರತಾ ಸಿಬ್ಬಂದಿ ಮರುದಾಳಿ ನಡೆಸಿದರು.












Click it and Unblock the Notifications