'ಇತಿಹಾಸದ ಮರು ನಿರ್ಮಾಣ': ಜೆ&ಕೆ ವಿಶೇಷ ಸ್ಥಾನಮಾನ ರದ್ದು

Recommended Video

      Array

      ನವದೆಹಲಿ, ಆಗಸ್ಟ್ 05 : ಸ್ವಾತಂತ್ರ್ಯ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರದ್ಧುಗೊಳಿಸಲು ತೀರ್ಮಾನ ತೆಗೆದುಕೊಂಡಿದೆ.

      ಸೋಮವಾರ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡು ಮಹತ್ವದ ತೀರ್ಮಾನವನ್ನು ಬೆಳಗ್ಗೆ 11. 15ರ ಸುಮಾರಿಗೆ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಗೆ ತಿಳಿಸಿದರು.

      ಪ್ರತಿಪಕ್ಷಗಳ ಗದ್ದಲದ ನಡುವೆ ಸರಕಾರದ ಸಂಕಲ್ಪಗಳನ್ನು ಮಂಡಿಸುತ್ತೇನೆ ಎಂದು ಮಾತು ಆರಂಭಿಸಿದ ಗೃಹ ಸಚಿವ ಅಮಿತ್ ಶಾ ಕಣಿವೆ ರಾಜ್ಯಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಲು ತೀರ್ಮಾನಿಸಲಾಗಿದೆ ಎಂದರು.

      Jammu And Kashmir : Articles 370, 35A to be scrapped

      ಜಮ್ಮುಮತ್ತು ಕಾಶ್ಮೀರ ಇನ್ನು ಮುಂದೆ ವಿಧಾನಸಭೆಯನ್ನು ಒಳಗೊಂಡ ಕೇಂದ್ರಾಡಳಿತ ಪ್ರದೇಶವಾಗಲಿದೆ. ಜಮ್ಮು ಮತ್ತು ಕಾಶ್ಮೀರದಿಂದ ಪ್ರತ್ಯೇಕಗೊಳ್ಳುವ ಲಡಾಕ್ ಸಂಪೂರ್ಣ ಕೇಂದ್ರಾಡಳಿತ ಪ್ರದೇಶವಾಗಲಿದೆ.

      ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಇನ್ನೂ ಮೌನವಾಗಿದ್ದಾರೆ. ಆಗಸ್ಟ್ 7ರ ಬುಧವಾರ ದೇಶವನ್ನು ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ.

      ಇದಕ್ಕೂ ಮೊದಲು ರಾಜ್ಯಸಭೆಯ ಕಲಾಪ ಆರಂಭವಾಗುತ್ತಿದ್ದಂತೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿರುವ ಗುಲಾಂ ನಭಿ ಆಝಾದ್, "ಕೆಲವು ಭಾಗಗಳಲ್ಲಿ ಕರ್ಫ್ಯೂ ಹೇರಲಾಗಿದೆ. ರಾಜ್ಯದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಈ ಕಾರಣಕ್ಕೆ ಮೊದಲು ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಚರ್ಚೆ ನಡೆಯಬೇಕು," ಎಂದು ಒತ್ತಾಯಿಸಿದರು.

      "ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ ನಾನು ಎಲ್ಲಾ ಉತ್ತರ ನೀಡಲು ಸಿದ್ಧವಾಗಿ ಬಂದಿದ್ದೇನೆ," ಎಂದು ಗೃಹ ಸಚಿವ ಅಮಿತ್ ಶಾ ಬೆಂಬಲ ಕೋರಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+