ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಇತಿಹಾಸದ ಮರು ನಿರ್ಮಾಣ': ಜೆ&ಕೆ ವಿಶೇಷ ಸ್ಥಾನಮಾನ ರದ್ದು

|
Google Oneindia Kannada News

Recommended Video

Array

ನವದೆಹಲಿ, ಆಗಸ್ಟ್ 05 : ಸ್ವಾತಂತ್ರ್ಯ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರದ್ಧುಗೊಳಿಸಲು ತೀರ್ಮಾನ ತೆಗೆದುಕೊಂಡಿದೆ.

ಸೋಮವಾರ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡು ಮಹತ್ವದ ತೀರ್ಮಾನವನ್ನು ಬೆಳಗ್ಗೆ 11. 15ರ ಸುಮಾರಿಗೆ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಗೆ ತಿಳಿಸಿದರು.

Kashmir Issue LIVE: ಆರ್ಟಿಕಲ್ 370 ರದ್ದು; ರಾಜ್ಯಸಭೆಯಲ್ಲಿ ಘೋಷಣೆKashmir Issue LIVE: ಆರ್ಟಿಕಲ್ 370 ರದ್ದು; ರಾಜ್ಯಸಭೆಯಲ್ಲಿ ಘೋಷಣೆ

ಪ್ರತಿಪಕ್ಷಗಳ ಗದ್ದಲದ ನಡುವೆ ಸರಕಾರದ ಸಂಕಲ್ಪಗಳನ್ನು ಮಂಡಿಸುತ್ತೇನೆ ಎಂದು ಮಾತು ಆರಂಭಿಸಿದ ಗೃಹ ಸಚಿವ ಅಮಿತ್ ಶಾ ಕಣಿವೆ ರಾಜ್ಯಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಲು ತೀರ್ಮಾನಿಸಲಾಗಿದೆ ಎಂದರು.

'ಕದಡಿದ ಕಾಶ್ಮೀರ, ಬೆಂಕಿಯೊಂದಿಗೆ ಸರಸ': ಕಣಿವೆ ರಾಜ್ಯದಲ್ಲಿ ಏನಾಗುತ್ತಿದೆ?'ಕದಡಿದ ಕಾಶ್ಮೀರ, ಬೆಂಕಿಯೊಂದಿಗೆ ಸರಸ': ಕಣಿವೆ ರಾಜ್ಯದಲ್ಲಿ ಏನಾಗುತ್ತಿದೆ?

Jammu And Kashmir : Articles 370, 35A to be scrapped

ಜಮ್ಮುಮತ್ತು ಕಾಶ್ಮೀರ ಇನ್ನು ಮುಂದೆ ವಿಧಾನಸಭೆಯನ್ನು ಒಳಗೊಂಡ ಕೇಂದ್ರಾಡಳಿತ ಪ್ರದೇಶವಾಗಲಿದೆ. ಜಮ್ಮು ಮತ್ತು ಕಾಶ್ಮೀರದಿಂದ ಪ್ರತ್ಯೇಕಗೊಳ್ಳುವ ಲಡಾಕ್ ಸಂಪೂರ್ಣ ಕೇಂದ್ರಾಡಳಿತ ಪ್ರದೇಶವಾಗಲಿದೆ.

ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಇನ್ನೂ ಮೌನವಾಗಿದ್ದಾರೆ. ಆಗಸ್ಟ್ 7ರ ಬುಧವಾರ ದೇಶವನ್ನು ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ.

ಇದಕ್ಕೂ ಮೊದಲು ರಾಜ್ಯಸಭೆಯ ಕಲಾಪ ಆರಂಭವಾಗುತ್ತಿದ್ದಂತೆ, ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕರಾಗಿರುವ ಗುಲಾಂ ನಭಿ ಆಝಾದ್, "ಕೆಲವು ಭಾಗಗಳಲ್ಲಿ ಕರ್ಫ್ಯೂ ಹೇರಲಾಗಿದೆ. ರಾಜ್ಯದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಈ ಕಾರಣಕ್ಕೆ ಮೊದಲು ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಚರ್ಚೆ ನಡೆಯಬೇಕು," ಎಂದು ಒತ್ತಾಯಿಸಿದರು.

ಭಾರತ ಸಂವಿಧಾನದ 370ನೇ ಪರಿಚ್ಛೇದ ಏನು? ಎತ್ತ?ಭಾರತ ಸಂವಿಧಾನದ 370ನೇ ಪರಿಚ್ಛೇದ ಏನು? ಎತ್ತ?

"ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ ನಾನು ಎಲ್ಲಾ ಉತ್ತರ ನೀಡಲು ಸಿದ್ಧವಾಗಿ ಬಂದಿದ್ದೇನೆ," ಎಂದು ಗೃಹ ಸಚಿವ ಅಮಿತ್ ಶಾ ಬೆಂಬಲ ಕೋರಿದರು.

English summary
jammu and kashmir crisis : In a historical move Government of India to be scrapped Articles 370, 35A at Jammu And Kashmir. Union home minister Amit Shah announced govt move in Rajya Sabha on August 5, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X