Jammu And Kashmir Assembly Election 2024 Results; ಕಾಂಗ್ರೆಸ್ ಮೈತ್ರಿಕೂಟಕ್ಕೆ ಮುನ್ನಡೆ

ಶ್ರೀನಗರ, ಅಕ್ಟೋಬರ್ 08: ದೇಶಾದ್ಯಂತ ಕುತೂಹಲಕ್ಕೆ ಕಾರಣವಾಗಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ 2024ರ ಮತ ಎಣಿಕೆ ಮಂಗಳವಾರ ನಡೆಯುತ್ತಿದೆ. 2014ರ ಬಳಿಕ ಮೊದಲ ಬಾರಿಗೆ ಕಣಿವೆ ರಾಜ್ಯದಲ್ಲಿ ಚುನಾವಣೆ ನಡೆದಿದ್ದು, ಯಾರಿಗೆ ಅಧಿಕಾರ ಎಂಬುದು ಚರ್ಚೆಯ ವಿಷಯ. ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿವೆ. ಮೂರು ಹಂತದಲ್ಲಿ ಮತದಾನ ನಡೆದಿದ್ದು, ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 46.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಒಟ್ಟು ಶೇ 63.88ರಷ್ಟು ಮತದಾನವಾಗಿತ್ತು. ಚುನಾವಣೋತ್ತರ ಸಮೀಕ್ಷೆಗಳಲ್ಲಿ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದೆ ಎಂದು ಅಂದಾಜಿಸಲಾಗಿದೆ.

Jammu And Kashmir Assembly Election 2024 Results Congress And National Conference Alliance Leading

ಮಂಗಳವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಪ್ರಾಥಮಿಕವಾಗಿ ಕಾಂಗ್ರೆಸ್‌ & ಎನ್‌ಸಿ ಮೈತ್ರಿಕೂಟ 47, ಬಿಜೆಪಿ 23, ಪಿಡಿಪಿ 3 ಮತ್ತು ಇತರರು 11 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಬುದ್ಗಾಮ್, ಗಂದೇರ್ಬಾಲ್ ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎರಡು ಕ್ಷೇತ್ರದಲ್ಲಿ ಅವರು ಚುನಾವಣೆಗೆ ಸ್ಪರ್ಧಿಸಿದ್ದು, ಎರಡೂ ಕ್ಷೇತ್ರದಲ್ಲಿಯೂ ಮುನ್ನಡೆ ಪಡೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಗಸ್ಟ್ 2019ರಲ್ಲಿ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿತು. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ವಾಪಸ್ ಪಡೆದ ಬಳಿಕ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆದಿದೆ. ಬಿಜೆಪಿ ಏಕಾಂಗಿಯಾಗಿ ಚುನಾವಣೆ ಎದುರಿಸುತ್ತಿದೆ. ಆದರೆ ಲೋಕಸಭೆ ಚುನಾವಣೆ 2024ರಲ್ಲಿ 'ಇಂಡಿಯಾ' ಮೈತ್ರಿಕೂಟದ ಭಾಗವಾಗಿದ್ದ ಕಾಂಗ್ರೆಸ್ ಮತ್ತು ಎನ್‌ಸಿ ಮೈತ್ರಿ ಮಾಡಿಕೊಂಡು ಸೀಟು ಹಂಚಿಕೆ ಮಾಡಿಕೊಂಡಿವೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೂಚನೆಯಂತೆಯೇ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಶ್ರೀನಗರದಲ್ಲಿ ಎರಡು ದಿನ ವಾಸ್ತವ್ಯ ಹೂಡಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕರಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಜೊತೆ ಮಾತುಕತೆ ನಡೆಸಿ ಮೈತ್ರಿ ಮಾಡಿಕೊಂಡಿದ್ದರು.

ಸಂವಿಧಾನದ 370ನೇ ವಿಧಿ ರದ್ದುಗೊಂಡ ಬಳಿಕ ನಡೆದ ಚುನಾವಣೆಯಲ್ಲಿ ಜನರು ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ಪಕ್ಷದ ನಾಯಕರು ನಿರೀಕ್ಷೆ ಇಟ್ಟುಕೊಂಡಿದ್ದರು. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ರಾಜ್ಯದಲ್ಲಿ ಬಿರುಸಿನ ಪ್ರಚಾರವನ್ನು ನಡೆಸಿದ್ದರು. ಆದರೆ ಅಕ್ಟೋಬರ್ 5ರಂದು ಪ್ರಕಟವಾದ ಚುನಾವಣೋತ್ತರ ಸಮೀಕ್ಷೆಗಳಲ್ಲಿಯೇ ಬಿಜೆಪಿಗೆ ಅಧಿಕಾರ ಸಿಗುವುದಿಲ್ಲ ಎಂಬ ಸೂಚನೆ ಸಿಕ್ಕಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+