Jammu And Kashmir Assembly Election 2024 Results; ಮ್ಯಾಜಿಕ್ ನಂಬರ್ ದಾಟಿದ ಮೈತ್ರಿಕೂಟ

ಶ್ರೀನಗರ, ಅಕ್ಟೋಬರ್ 08: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ 2024ರಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಸರ್ಕಾರ ರಚನೆಗೆ ಬೇಕಾದ ಮ್ಯಾಜಿಕ್ ನಂಬರ್ ದಾಟಿದೆ. ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆಯುತ್ತಿದೆ. ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳು 90, ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 46. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದವು.

ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು ಮೂರು ಹಂತದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮತದಾನ ನಡೆದಿತ್ತು. ಚುನಾವಣಾ ಫಲಿತಾಂಶ ಇಂದು ಘೋಷಣೆಯಾಗಲಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಟ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ.

Jammu And Kashmir Assembly Election 2024 Results Congress NC Crossed Magic Number

12.45ರ ಮಾಹಿತಿಯಂತೆ ನ್ಯಾಷನಲ್ ಕಾನ್ಫರೆನ್ಸ್ 43, ಕಾಂಗ್ರೆಸ್ 7, ಬಿಜೆಪಿ 28 ಸ್ಥಾನ, ಪಿಡಿಪಿ 2 ಮತ್ತು ಇತರರು 7 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಬಹುಮತಕ್ಕೆ ಬೇಕಾದ ಮ್ಯಾಜಿಕ್ ನಂಬರ್ ದಾಟಿ ಮುನ್ನಡೆ ಕಾಯ್ದುಕೊಂಡಿವೆ. ಸಂಜೆಯ ವೇಳೆಗೆ ಅಂತಿಮ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ದಶಕಗಳ ಬಳಿಕ ಚುನಾವಣೆ ನಡೆದಿದೆ. 2014ರಲ್ಲಿ ಕೊನೆಯ ಬಾರಿಗೆ ವಿಧಾನಸಭೆ ಚುನಾವಣೆ ನಡೆದಿತ್ತು. ಬಿಜೆಪಿ ಮತ್ತು ಪಿಡಿಪಿ ಮೈತ್ರಿಕೂಟದ ಸರ್ಕಾರ ರಚನೆಯಾಗಿತ್ತು. ಆದರೆ ಪೂರ್ಣಾವಧಿಯನ್ನು ಪೂರೈಸದ ಸರ್ಕಾರ 2018ರಲ್ಲಿ ಪತನವಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಗಸ್ಟ್ 2019ರಲ್ಲಿ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿತು. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ವಾಪಸ್ ಪಡೆದ ಬಳಿಕ 2024ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆದಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು 'ಇಂಡಿಯಾ' ಮೈತ್ರಿಕೂಟ ರಚನೆಯಾಗಿತ್ತು. ಕಾಂಗ್ರೆಸ್ ನೇತೃತ್ವದ ಈ ಮೈತ್ರಿಕೂಟದಲ್ಲಿದ್ದ ನ್ಯಾಷನಲ್ ಕಾನ್ಪರೆನ್ಸ್ ಈಗ ವಿಧಾನಸಭೆ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜೊತೆ ಕೈ ಜೋಡಿಸಿದೆ.

ಅಕ್ಟೋಬರ್ 5ರಂದು ಪ್ರಕಟವಾದ ಚುನಾವಣೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದೆ ಎಂದು ಅಂದಾಜಿಸಿದ್ದವು. ಆದರೆ ಮಂಗಳವಾರದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ರಚನೆಯತ್ತ ಸಾಗಿದೆ.

ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟದ ಸೀಟು ಹಂಚಿಕೆಯಂತೆ ನ್ಯಾಷನಲ್ ಕಾನ್ಫರೆನ್ಸ್ 51, ಕಾಂಗ್ರೆಸ್ 32 ಸೀಟುಗಳಲ್ಲಿ ಕಣಕ್ಕಿಳಿದಿತ್ತು. ಸಿಪಿಐ(ಎಂ) ಮತ್ತು ಜೆಕೆಎನ್‌ಪಿಪಿ ಪಕ್ಷಕ್ಕೆ ತಲಾ ಒದೊಂದು ಸೀಟುಗಳನ್ನು ಬಿಟ್ಟುಕೊಡಲಾಗಿತ್ತು.

ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟದ ಸರ್ಕಾರ ರಚನೆಯಾದರೆ ನ್ಯಾಷನಲ್ ಕಾನ್ಪರೆನ್ಸ್ ಪಕ್ಷದ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಮತ್ತೆ ಮುಖ್ಯಮಂತ್ರಿಯಾಗುವ ನಿರೀಕ್ಷೆ ಇದೆ. ಉಪ ಮುಖ್ಯಮಂತ್ರಿ ಸ್ಥಾನ ಕಾಂಗ್ರೆಸ್‌ಗೆ ಸಿಗುವ ಸಾಧ್ಯತೆ ಇದೆ.

ಚುನಾವಣಾ ಫಲಿತಾಂಶ ಸಂಪೂರ್ಣವಾಗಿ ಘೋಷಣೆಯಾದ ಬಳಿಕ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಲೆಫ್ಟಿನೆಂಟ್ ಗವರ್ನರ್ ಐವರು ಶಾಸಕರನ್ನು ನಾಮ ನಿರ್ದೇಶನ ಮಾಡಲಿದ್ದಾರೆ. ಈ ಶಾಸಕರು ಸದನದಲ್ಲಿ ಯಾರಿಗೆ ಬೆಂಬಲ ನೀಡಲಿದ್ದಾರೆ? ಎಂಬುದು ಸಹ ಕುತೂಹಲಕ್ಕೆ ಕಾರಣವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+