Jammu And Kashmir Assembly Election 2024 Results; 5 ಶಾಸಕರ ನಾಮ ನಿರ್ದೇಶನ ವಿವಾದ

ಶ್ರೀನಗರ, ಅಕ್ಟೋಬರ್ 08: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ 2024ರ ಮತ ಎಣಿಕೆ ಮಂಗಳವಾರ ನಡೆಯುತ್ತಿದೆ. ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳು 90. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 46. ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಪರೆನ್ಸ್ ಮೈತ್ರಿಕೂಟ ಮುನ್ನಡೆ ಕಾಯ್ದುಕೊಂಡಿದ್ದು, ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆ ಯಾಗುವ ನಿರೀಕ್ಷೆ ಇದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆದಿತ್ತು. ಒಟ್ಟು ಶೇ 63.88ರಷ್ಟು ಮತದಾನವಾಗಿತ್ತು. ಚುನಾವಣಾ ಫಲಿತಾಂಶ ಸಂಪೂರ್ಣವಾಗಿ ಘೋಷಣೆಯಾಗುವ ಮೊದಲೇ ಲೆಫ್ಟಿನೆಂಟ್ ಗವರ್ನರ್ ಅಧಿಕಾರದ ಬಗ್ಗೆ ಚರ್ಚೆ ನಡೆಯುತ್ತಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ವಿಧಾನಸಭೆಗೆ ಐವರು ಶಾಸಕರನ್ನು ನಾಮ ನಿರ್ದೇಶನ ಮಾಡಲು ಅವಕಾಶವಿದೆ.

Jammu And Kashmir Assembly Election 2024 Results Lieutenant Governor And Power To Nominate Five Members

ಮಂಗಳವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದೆ. 12 ಗಂಟೆಯ ಮಾಹಿತಿಯಂತೆ ಕಾಂಗ್ರೆಸ್ 9 ಮತ್ತು ನ್ಯಾಷನಲ್ ಕಾನ್ಫರೆನ್ಸ್ 43 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಬಿಜೆಪಿ 26 ಸ್ಥಾನ, ಪಿಡಿಪಿ 2 ಮತ್ತು ಇತರರು 7 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ.

ನಾಮ ನಿರ್ದೇಶನ ವಿವಾದ: ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಐವರು ಶಾಸಕರನ್ನು ನಾಮ ನಿರ್ದೇಶನ ಮಾಡುವುದು ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್, ನ್ಯಾಷನಲ್ ಕಾನ್ಪರೆನ್ಸ್, ಮೆಹಬೂಬಾ ಮಫ್ತಿ ಅವರ ಪಿಡಿಪಿ ಪಕ್ಷಗಳು ಲೆಫ್ಟಿನೆಂಟ್ ಗವರ್ನರ್‌ಗೆ ನೀಡಿದ ಅಧಿಕಾರದ ಬಗ್ಗೆ ಆಕ್ಷೇಪವನ್ನು ವ್ಯಕ್ತಪಡಿಸಿದೆ.

ಚುನಾವಣೋತ್ತರ ಸಮೀಕ್ಷೆಗಳು ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದೆ ಎಂದು ಅಂದಾಜಿಸಿವೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಗೆ ನೀಡಿರುವ ಅಧಿಕಾರ ರಾಜ್ಯದಲ್ಲಿ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸುವ ನಿರೀಕ್ಷೆ ಇದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಬಿಜೆಪಿ ಪರವಾಗಿ ಇರುವವರನ್ನು ನಾಮ ನಿರ್ದೇಶನ ಮಾಡಲಿದ್ದಾರೆ ಎಂಬುದು ವಿರೋಧ ಪಕ್ಷಗಳ ಆರೋಪವಾಗಿದೆ.

ಬಿಜೆಪಿ ಎಂದಿಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಏಕಾಂಗಿಯಾಗಿ ಸರ್ಕಾರ ರಚನೆ ಮಾಡಿ ಅಧಿಕಾರ ನಡೆಸಿಲ್ಲ. 2014ರ ಚುನಾವಣೆಯ ಬಳಿಕ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದವು. ಆದರೆ ಈ ಮೈತ್ರಿಕೂಟದ ಸರ್ಕಾರ 2018ರಲ್ಲಿ ಪತನಗೊಂಡಿತು. 2019ರಲ್ಲಿ ಸಂವಿಧಾನದ 370ನೇ ವಿಧಿಯಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಯಿತು.

ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಣೆ ಮಾಡಲಾಯಿತು. ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂದು ಎರಡು ಭಾಗವಾಗಿ ವಿಭಾಗಿಸಲಾಯಿತು. ಈ ಬಳಿಕ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆ ಇದಾಗಿದೆ. ಸರ್ಕಾರ ರಚನೆ ಮಾಡಲು ಬಿಜೆಪಿಗೆ ಕಡಿಮೆ ಸೀಟುಗಳು ಬೇಕಾದರೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮೂಲಕ ತಮ್ಮನ್ನು ಬೆಂಬಲಿಸುವವರನ್ನು ನಾಮ ನಿರ್ದೇಶನ ಮಾಡಲಾಗುತ್ತದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ.

ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಕ್ಷೇತ್ರಗಳನ್ನು ಬಿಜೆಪಿ ತಮಗೆ ಬೇಕಾದಂತೆ ಮರು ವಿಂಗಡನೆ ಮಾಡಿಕೊಂಡಿದೆ. ಜಮ್ಮು ವಿಭಾಗಕ್ಕೆ 43, ಕಾಶ್ಮೀರ ವಿಭಾಗಕ್ಕೆ 47 ಸೀಟುಗಳು ಸಿಕ್ಕಿವೆ. ಈಗ ಐದು ಶಾಸಕರು ಸಹ ಬಿಜೆಪಿಗೆ ಬೇಕಾದವರನ್ನು ನೇಮಕ ಮಾಡಲಾಗುತ್ತದೆ ಎಂದು ವಿಪಕ್ಷಗಳು ದೂರಿವೆ.

ಲೆಫ್ಟಿನೆಂಟ್ ಗವರ್ನರ್ ನಾಮ ನಿರ್ದೇಶನ ಮಾಡುವಾಗ ಇಬ್ಬರು ಮಹಿಳೆಯರು, ಇಬ್ಬರು ಕಾಶ್ಮೀರಿ ಪಂಡಿತರು, ಪಾಕ್ ಆಕ್ರಮಿತ ಕಾಶ್ಮೀರದ ಒಬ್ಬರನ್ನು ಪರಿಗಣಿಸಬೇಕು ಎಂದು ನಿಯಮ ರೂಪಿಸಲಾಗಿದೆ. ಐವರು ನಾಮ ನಿರ್ದೇಶಿತ ಶಾಸಕರು ಜನರಿಂದ ಆಯ್ಕೆಯಾದ ಶಾಸಕರಂತೆ ಎಲ್ಲಾ ಅಧಿಕಾರ ಮತ್ತು ಹಕ್ಕುಗಳನ್ನು ಹೊಂದಿರುತ್ತಾರೆ.

ಕಾಂಗ್ರೆಸ್ ಪಕ್ಷ ಲೆಫ್ಟಿನೆಂಟ್ ಗವರ್ನರ್ ಐವರು ಶಾಸಕರನ್ನು ನೇಮಕ ಮಾಡುವುದು ಪ್ರಜಾಪ್ರಭುತ್ವದ ವಿರೋಧಿಯಾಗಿದೆ. ಜನರು ತಮ್ಮ ಹಕ್ಕುಗಳನ್ನು ಚಲಾವಣೆ ಮಾಡುವ ಸಂವಿಧಾನದ ಮೂಲ ತತ್ವಕ್ಕೆ ವಿರುದ್ಧವಾಗಿದೆ ಎಂದು ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+