J&K 2024 polls: ಜಮ್ಮು-ಕಾಶ್ಮೀರದ ಯುವ ಮತದಾರರಿಗೆ ಪ್ರಧಾನಿ ನರೇಂದ್ರ ಮೋದಿ ವಿಶೇಷ ಕರೆ
ಜಮ್ಮು-ಕಾಶ್ಮೀರದಲ್ಲಿ ಹತ್ತು ವರ್ಷಗಳ ನಂತರ ಇಂದು ಮೊದಲ ಹಂತದ ಚುನಾವಣೆಗೆ ಮತದಾನ ನಡೆಯುತ್ತಿದೆ. 370ನೇ ವಿಧಿ ರದ್ದಾದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ನಡೆದ ಚುನಾವಣೆ ಇದಾಗಿದೆ. ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಮೈತ್ರಿಯಾಗಿ ಸ್ಫರ್ಧೆ ಮಾಡುತ್ತಿದ್ದು, ಪಿಡಿಪಿ ಹಾಗೂ ಬಿಜೆಪಿ ಪ್ರತ್ಯೇಕವಾಗಿ ಕಣದಲ್ಲಿದೆ.
ತೀವ್ರ ಕುತೂಹಲ ಮೂಡಿಸಿರುವ ಈ ಚುನಾವಣೆಯ ಮೊದಲ ಹಂತವಾಗಿ ಇಂದು(ಸೆಪ್ಟೆಂಬರ್ 17) ಬುಧವಾರ 24 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 2014ರ ನಂತರ ಕಾಶ್ಮೀರದಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆಯಾಗಿದ್ದು, ಯಾವುದೇ ಅವಘಡ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ.

ಜಮ್ಮು-ಕಾಶ್ಮೀರ ಚುನಾವಣೆಯ ಮೊದಲ ಹಂತದ ಮತದಾನ ಈಗಾಗಲೇ ಆರಂಭವಾಗಿದ್ದು, ಇಂದಿನ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲ್ಲಿನ ನಾಗರಿಕರಿಗೆ ಮನವಿ ಮಾಡಿದ್ದಾರೆ. ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರಿಗೆ ಪ್ರಧಾನಿ ವಿಶೇಷ ಕರೆ ನೀಡಿದ್ದಾರೆ.
ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಇಂದು ಮತದಾನ ನಡೆಯುವ ಕ್ಷೇತ್ರಗಳಲ್ಲಿರುವ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ. ಹಾಗೂ ಪ್ರಜಾಪ್ರಭುತ್ವದ ಹಬ್ಬವನ್ನು ಬಲಪಡಿಸಿ. ವಿಶೇಷವಾಗಿ ಯುವ ಮತ್ತು ಮೊದಲ ಬಾರಿಗೆ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸುವವರಿಗೆ ಕರೆ ನೀಡುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
As the first phase of the Jammu and Kashmir Assembly elections begins, I urge all those in constituencies going to the polls today to vote in large numbers and strengthen the festival of democracy. I particularly call upon young and first-time voters to exercise their franchise.
— Narendra Modi (@narendramodi) September 18, 2024
ಇನ್ನು ಇಂದು ಜಮ್ಮು-ಕಾಶ್ಮೀರ 24 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 219 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 125 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಬರೋಬ್ಬರಿ 23 ಲಕ್ಷ ಮಂದಿ ಮತದಾರರು ಈ ಕ್ಷೇತ್ರದಲ್ಲಿ ಇದ್ದಾರೆ. ಇಂದು ಮೊದಲ ಹಂತದ ಚುನಾವಣೆ ನಡೆದ ಬಳಿಕ ಸೆಪ್ಟೆಂಬರ್ 25 ರಂದು ಎರಡನೇ ಹಂತಹ ಮತದಾನ ಹಾಗೂ ಅಕ್ಟೋಬರ್ 1ರಂದು 3ನೇ ಹಂತದ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್












Click it and Unblock the Notifications