Jammu and Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟಾರೆ 63.88% ಮತದಾನ; ಕುತೂಹಲ ಕೆರಳಿಸಿದ ಫಲಿತಾಂಶ

10 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆದಿದೆ. ಮೂರು ಹಂತಗಳಲ್ಲಿ ಚುನಾವಣೆ ನಡೆಸಲಾಗಿದ್ದು ಶಾಂತಿಯುತವಾಗಿ ಮತದಾನ ನಡೆಯುವ ಮೂಲಕ ಹೊಸ ಇತಿಹಾಸ ರಚನೆಯಾಗಿದೆ. ಈ ಹತ್ತು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಮುಖ್ಯವಾಗಿ ಆರ್ಟಿಕಲ್ 370 ರದ್ದು ಮಾಡಿದ್ದು ಸಂಚಲನವನ್ನೇ ಸೃಷ್ಟಿಸಿದೆ. ಅಭಿವೃದ್ಧಿ, ಭಯೋತ್ಪಾದನೆ, ವಿಶೇಷ ಸ್ಥಾನಮಾನ ಈ ಚುನಾವಣೆಯ ಪ್ರಮುಖ ವಿಚಾರಗಳಾಗಿದ್ದವು, ಎಲ್ಲವನ್ನೂ ಕೇಳಿಸಿಕೊಂಡಿರುವ ಮತದಾರ, ತನ್ನ ನಿರ್ಧಾರವನ್ನು ಮತಯಂತ್ರದ ಮೂಲಕ ತಿಳಿಸಿದ್ದಾನೆ.

ಜಮ್ಮು ಮತ್ತು ಕಾಶ್ಮಿರ ವಿಧಾನಸಭೆ ಚುನಾವಣೆಯ ಮೂರು ಹಂತಗಳಲ್ಲಿ ಸೇರಿ ಒಟ್ಟಾರೆ ಶೇ.63.88ರಷ್ಟು ಮತದಾನವಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಾಹಿತಿ ಕೊಟ್ಟಿದೆ. ಮೊದಲ ಹಂತದಲ್ಲಿ 61.38 ಪ್ರತಿಶತ ಮತದಾನವಾಗಿದ್ದರೆ, ಎರಡನೇ ಹಂತದಲ್ಲಿ 57.31 ರಷ್ಟು ಮತದಾನವಾಗಿತ್ತು, ಅಕ್ಟೋಬರ್ 1ರಂದು ನಡೆದ ಮೂರನೇ ಹಂತದಲ್ಲಿ 69.69 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

Jammu and Kashmir Assembly Election Sees 63 88 Voter Turnout

ಮೂರನೇ ಹಂತದಲ್ಲಿ ಮಹಿಳೆಯರ ಪ್ರಾಬಲ್ಯ

ಅಕ್ಟೋಬರ್ 1ರಂದು ನಡೆದ ಮೂರನೇ ಹಂತದ ಚುನಾವಣೆಯಲ್ಲಿ ಪುರುಷ ಮತದಾರರಿಗಿಂತ ಮಹಿಳಾ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾಯಿಸಿದ್ದಾರೆ. 69.37 ರಷ್ಟು ಪುರುಷ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರೆ, 70.2 ಪ್ರತಿಶತ ಮಹಿಳೆಯರು ಮತ ಚಲಾಯಿಸಿದ್ದಾರೆ. ಜಮ್ಮು ಮತ್ತು ಕಾಶ್ಮಿರದ ಒಟ್ಟಾರೆ ಮತದಾನ ಪ್ರಮಾಣವನ್ನು ಗಣನೆಗೆ ತೆಗೆದುಕೊಂಡರೆ ಪುರುಷ ಮತದಾರರ ಪ್ರಮಾಣ 64.88% ರಷ್ಟಿದ್ದರೆ, ಮಹಿಳಾ ಮತದಾರರ ಪ್ರಮಾಣ 63.04 ರಷ್ಟಿದೆ.

ಯಾವೆಲ್ಲಾ ಪಕ್ಷಗಳಿಂದ ಸ್ಪರ್ಧೆ?

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳಾದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಜೊತೆಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿವೆ. ಇನ್ನು ಜಮ್ಮು ಮತ್ತು ಕಾಶ್ಮೀರದ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಪಿಡಿಪಿ ಸ್ವತಂತ್ರವಾಗಿ ಸ್ಪರ್ಧೆ ಮಾಡಿವೆ.

ಮತದಾರರನ್ನು ಸೆಳೆಯಲು ಬಿಜೆಪಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್‌ರಂತಹ ಘಟಾನುಘಟಿ ನಾಯಕರಿಂದ ಪ್ರಚಾರ ಮಾಡಿಸಿದೆ. ಮತ್ತೊಂದು ಕಡೆ ಕಾಂಗ್ರೆಸ್ ಪರವಾಗಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಪ್ರಚಾರ ನಡೆಸಿದರು. ಜಮ್ಮು ಮತ್ತು ಕಾಶ್ಮಿರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ತಮ್ಮ ಪಕ್ಷಗಳ ಪರ ಪ್ರಚಾರ ಮಾಡಿದ್ದಾರೆ.

ಫಲಿತಾಂಶದತ್ತ ಎಲ್ಲರ ಚಿತ್ತ

ಇನ್ನು ಭಾರಿ ಕುತೂಹಲ ಕೆರಳಿಸಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ಫಲಿತಾಂಶ ಅಕ್ಟೋಬರ್ 8 ರಂದು ಹೊರಬೀಳಲಿದೆ. ಅದಕ್ಕೂ ಮುನ್ನ ಅಕ್ಟೋಬರ್ 5ರಂದು ಸಂಜೆ 6 ಗಂಟೆ ಬಳಿಕ ಚುನಾವಣೋತ್ತರ ಸಮೀಕ್ಷೆ ಫಲಿತಾಂಶಗಳು ಹೊರ ಬೀಳಲಿದ್ದು, ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+