Jammu & Kashmir: ಜಮ್ಮು ಮತ್ತು ಕಾಶ್ಮೀರ ಚುನಾವಣೋತ್ತರ ಸಮೀಕ್ಷೆ ಫಲಿತಾಂಶ; ದಿನಾಂಕ, ಸಮಯ ಮಾಹಿತಿ

ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ನಡೆದಿದ್ದು, ಸರ್ಕಾರ ರಚನೆಯಾಗಲು ವೇದಿಕೆ ಸಜ್ಜಾಗಿದೆ. ಮೂರು ಹಂತಗಳಲ್ಲಿ ಚುನಾವಣೆ ನಡೆದಿದ್ದು ಶಾಂತಿಯುತವಾಗಿ ಮತದಾನ ನಡೆದಿದೆ. ಸೆಪ್ಟೆಂಬರ್ 18 ರಂದು ಮೊದಲ ಹಂತದಲ್ಲಿ ಚುನಾವಣೆ ನಡೆದಿದ್ದರೆ, ಸೆಪ್ಟೆಂಬರ್ 25ರಂದು ಎರಡನೇ ಹಂತದಲ್ಲಿ ಮತ್ತು ಅಕ್ಟೋಬರ್ 1ರಂದು ಮೂರನೇ ಹಂತದಲ್ಲಿ ಚುನಾವಣೆ ನಡೆದಿದೆ. ಇದೀಗ ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದ್ದು, ಅದಕ್ಕೂ ಮುನ್ನ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿದ್ದು ಭಾರಿ ಕುತೂಹಲ ಕೆರಳಿಸಿವೆ.

ಚುನಾವಣೋತ್ತರ ಸಮೀಕ್ಷೆಗಳು ಬಹುತೇಕ ಫಲಿತಾಂಶದ ಮುನ್ಸೂಚನೆಯಾಗಿರುತ್ತಿವೆ. 100 ಪ್ರತಿಶತ ನಿಖರವಾಗಿ ಹೇಳಲು ಸಾಧ್ಯವಿಲ್ಲವಾದರೂ, ಯಾವ ಪಕ್ಷ ಅಧಿಕಾರಕ್ಕೆ ಬರುತ್ತದೆ, ಹೆಚ್ಚಿನ ಸ್ಥಾನ ಪಡೆಯುತ್ತದೆ ಎನ್ನುವ ಚಿತ್ರಣ ಸಿಗುತ್ತದೆ. ಮತದಾನ ನಡೆದ ನಂತರ ಏಜೆನ್ಸಿಗಳು ಮಾದರಿ ಸಮೀಕ್ಷೆಗಳನ್ನು ನಡೆಸುತ್ತವೆ.

Jammu and Kashmir Assembly Elections 2024 exit poll date and timings

ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಜಮ್ಮು ಮತ್ತು ಕಾಶ್ಮೀರ ಚುನಾವಣೆಯ ಎಕ್ಸಿಟ್‌ ಪೋಲ್‌ ಫಲಿತಾಂಶಗಳನ್ನು ಅಕ್ಟೋಬರ್ 5ರಂದು ಸಂಜೆ 6.30ರ ಬಳಿಕ ಮಾತ್ರ ಪ್ರಸಾರ ಮಾಡಲು ಅನುಮತಿ ನೀಡಲಾಗಿದೆ.

ಚುನಾವಣೋತ್ತರ ಸಮೀಕ್ಷೆ ಮಾರ್ಗಸೂಚಿಗಳು

ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿಯು ಆಗಸ್ಟ್ 31 ರಂದು ಪ್ರಕಟಿಸಿದ ಮಾರ್ಗಸೂಚಿ ಮತ್ತು ಪ್ರಜಾಪ್ರತಿನಿಧ ಕಾಯ್ದೆ ಸೆಕ್ಷನ್ 126 ಎ ನಿಬಂಧನೆಗಳ ಪ್ರಕಾರ, ಮಾಧ್ಯಮಗಳು, ಏಜೆನ್ಸಿಗಳು ಮತ್ತು ಯಾವುದೇ ವ್ಯಕ್ತಿಗಳು ನಿಗದಿತ ಸಮಯದವರೆಗೆ ಚುನಾವಣೋತ್ತರ ಫಲಿತಾಂಶಗಳನ್ನು ಪ್ರಕಟಿಸಬಾರದು ಮತ್ತು ಪ್ರಸಾರ ಮಾಡಬಾರದು ಎಂದು ಸೂಚನೆ ಕೊಟ್ಟಿದೆ.

ಪತ್ರಿಕೆಗಳು, ದೂರದರ್ಶನ ಚಾನೆಲ್‌ಗಳು, ರೇಡಿಯೋ, ಆನ್‌ಲೈನ್ ಸುದ್ದಿ ಪೋರ್ಟಲ್‌ಗಳು, ಸಾಮಾಜಿಕ ಮಾಧ್ಯಮ, ಫೇಸ್‌ಬುಕ್, ಯೂಟ್ಯೂಬ್, ಇನ್‌ಸ್ಟಾಗ್ರಾಂ, ವಾಟ್ಸಾಪ್‌ ಸೇರಿದಂತೆ ಎಲ್ಲಾ ಮಾಧ್ಯಮಗಳಿಗೆ ಇದು ಅನ್ವಯವಾಗಲಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡ, ಜೈಲು ಶಿಕ್ಷೆ ಸೇರಿದಂತೆ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವ ಅಧಿಕಾರ ಚುನಾವಣಾ ಆಯೋಗಕ್ಕಿದೆ.

ಅಕ್ಟೋಬರ್ 5 ರಂದು ಸಂಜೆ 6.30 ರ ಬಳಿಕ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಲಿದೆ. ಎಲ್ಲಾ ಮಾಧ್ಯಮಗಳು, ಯೂಟ್ಯೂಬ್ ವಾಹಿನಿಗಳು, ಚುನಾವಣಾ ಏಜೆನ್ಸಿಗಳು ಫಲಿತಾಂಶವನ್ನು ಪ್ರಕಟಿಸಲಿವೆ.

ಆರ್ಟಿಕಲ್ 370 ರದ್ದಾದ ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕಿದ್ದ ವಿಶೇಸ ಸ್ಥಾನಮಾನ ರದ್ದಾಗಿತ್ತು, ಕೇಂದ್ರಾಡಳಿತ ಪ್ರದೇಶವಾಗಿದ್ದು, 2014ರ ಬಳಿಕ ಮೊದಲ ಬಾರಿ ವಿಧಾನಸಭೆ ಚುನಾವಣೆ ನಡೆದಿದ್ದು, ಫಲಿತಾಂಶ ದೇಶದ ಕುತೂಹಲ ಕೆರಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+