ಕಾಶ್ಮೀರ: ಉಗ್ರರ ದಾಳಿಗೆ ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮ
ಪುಲ್ವಾಮ, ಜುಲೈ 30: ದಕ್ಷಿಣ ಕಾಶ್ಮೀರದ ಪುಲ್ವಾಮಾ ಎಂಬಲ್ಲಿ ಭಾರತೀಯ ಸೇನೆಯ ಯೋಧರು ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ಸಿಆರ್ ಪಿಎಫ್ ನ(Central reserved police force)134 ಬೆಟಾಲಿಯನ್ ನ ನಾಸೀರ್ ಅಹ್ಮದ್ ಹುತಾತ್ಮರಾದ ಯೋಧ ಎಂದು ಗುರುತಿಸಲಾಗಿದೆ.
ಜು.25 ರಂದು ಗಡಿಯಲ್ಲಿ ಅಕ್ರಮವಾಗಿ ನುಸುಳಲು ಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಭಾರತೀಯ ಸೇನೆಯ ಯೋಧರು ಹೊಡೆದುರುಳಿಸಿದ್ದರು. ಅವರಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಘಟನೆ ನಡೆದ ಮೂರ್ನಾಲ್ಕು ದಿನಗಳಲ್ಲಿ ಉಗ್ರರು ಭಾರತೀಯ ಯೋಧರ ಮೇಲೆ ಗುಂಡಿನ ದಾಳಿ ನಡೆದಿದ ಪರಿಣಾಮ ನಾಸೀರ್ ಅಹ್ಮದ್ ಹುತಾತ್ಮರಾಗಿದ್ದಾರೆ.

ಇದಕ್ಕೂ ಮುನ್ನ ಜು.16 ರಂದು ಜಮ್ಮು ಕಾಶ್ಮೀರದ ಕುಪ್ವಾರ್ ಜಿಲ್ಲೆಯಲ್ಲಿ ನಡೆದಿದ್ದ ಎನ್ ಕೌಂಟರ್ ದಾಳಿಯಲ್ಲಿ ಭಾರತೀಯ ಸೇನಾಪಡೆ ನಡೆಸಿದ್ದ ಎನ್ ಕೌಂಟರ್ ದಾಳಿಯಲ್ಲಿ ಓರ್ವ ಉಗ್ರನನ್ನು ಹೊಡದೆದುರುಳಿಸಲಾಗಿತ್ತು.












Click it and Unblock the Notifications