ಜಮ್ಮು-ಕಾಶ್ಮೀರ: ಉಗ್ರರ ದಾಳಿಗೆ ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮ
ಅನಂತನಾಗ್, ಜುಲೈ 13: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಶೀರ್ ಪೊರಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಓರ್ವ ಸಿಆರ್ ಪಿಎಪ್ ಯೋಧ ಹುತಾತ್ಮರಾಗಿದ್ದಾರೆ.
ಇಂದು ಬೆಳಿಗ್ಗೆಯಿಂದ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿತ್ತು. ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯೋಧ ಹುತಾತ್ಮರಾಗಿದ್ದು, ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ.
ಜುಲೈ 10 ರಂದು ಇಲ್ಲಿನ ಶೋಪಿಯಾನ್ ದ ಕುಂಡಲನ್ ಪ್ರದೇಶದಲ್ಲಿ ನಡೆದ ಎನ್ ಕೌಂಟರ್ ದಾಳಿಯಲ್ಲಿ ಇಬ್ಬರು ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿತ್ತು.

ಶೋಪಿಯಾನ್ ದ ಮನೆಯೊಂದರಲ್ಲಿ ನಾಲ್ವರು ಭಯೋತ್ಪಾದಕರು ಅಡಗಿ ಕುಳಿತಿದ್ದರು. ಈ ಸಂದರ್ಭದಲ್ಲಿ ಉಗ್ರರ ವಿರುದ್ಧ ದಾಳಿ ನಡೆಸಿದ್ದ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದರು.
ಇತ್ತೀಚೆಗಷ್ಟೇ ಕಾಶ್ಮೀರದ ಕುಲ್ಗಾಮ್ ನಲ್ಲಿ ಪೊಲೀಸ್ ಪೇದೆಯೊಬ್ಬರನ್ನು ಅಪಹರಿಸಿ ಉಗ್ರರು ಕೊಂದುಹಾಕಿದ್ದರು. ಇದಕ್ಕೆ ಪ್ರತೀಕಾರ ಎಂಬಂತೆ ಭಯೋತ್ಪಾದಕರ ದಮನಕ್ಕೆ ಭಾರತ ಮುಂದಾಗಿತ್ತು.












Click it and Unblock the Notifications