Jammu and Kashmir: ಇದೆಲ್ಲ ಟೈಂಪಾಸ್; ನಾನು ಆ ನಂಬರ್ ಮಾತ್ರ ನೋಡ್ತೀನಿ ಎಂದ ಒಮರ್ ಅಬ್ದುಲ್ಲಾ
ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣದಲ್ಲಿ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಹಲವು ಕಾರಣಗಳಿಂದ ಈ ಚುನಾವಣೆ ಪ್ರಮುಖ್ಯತೆ ಹಾಗೂ ಕುತೂಹಲ ಮೂಡಿಸಿವೆ. ಎಕ್ಸಿಟ್ ಪೋಲ್‌ನ ಪ್ರಕಾರ ಈ ಬಾರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅತಂತ್ರ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದ್ದು, ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿದೆ.
ಇದೀಗ ಜಮ್ಮು ಮತ್ತು ಕಾಶ್ಮೀರದಲ್ಲಿ ಅತಂತ್ರ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ಎಕ್ಸಿಟ್ ಪೋಲ್ ವರದಿಗೆ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರು ವ್ಯಂಗ್ಯವಾಡಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಒಮರ್ ಅಬ್ದುಲ್ಲಾ ಅವರು, ಎಕ್ಸಿಟ್ ಪೋಲ್ ಹಾಗೂ ಕೆಲವು ನ್ಯೂಸ್ ಚಾನೆಲ್‌ಗಳ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಇತ್ತೀಚಿಗೆ ನಡೆದ ಸಾಲು ಸಾಲು ಸಾರ್ವತ್ರಿಕ ಚುನಾವಣೆಗಳ ಸೋಲು ಕಂಡ ನಂತರ, ಸುದ್ದಿ ವಾಹಿನಿಗಳು (ನ್ಯೂಸ್ ಚಾನೆಲ್) ಎಕ್ಸಿಟ್ (ಚುನಾವಣಾ ಪೂರ್ವ ಫಲಿತಾಂಶ)ನ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿರುವುದು ನೋಡಿದರೆ ನನಗೆ ಆಶ್ಚರ್ಯವಾಗುತ್ತಿದೆ ಎಂದಿದ್ದಾರೆ. ಸಾಲು ಸಾಲು ಚುನಾವಣೆಯಲ್ಲಿ ಸೋತ ನಂತರ ಎನ್ನುವುದನ್ನು ಬಿಜೆಪಿಯನ್ನು ಉದ್ದೇಶಿಸಿ ಹೇಳಿದ್ದು, ಮಾಧ್ಯಮಗಳಿಗೆ ಟಾಂಗ್ ಕೊಟ್ಟಿದ್ದಾರೆ. ನಾನು ಈ ಚಾನೆಲ್‌ಗಳ, ಸೋಷಿಯಲ್ ಮೀಡಿಯಾ, ವಾಟ್ಸ್ ಆ್ಯಪ್‌ಗಳ ಅಬ್ಬರವನ್ನು (ಕಿರುಚಾಟವನ್ನು) ಕೇರ್ ಮಾಡಲ್ಲ.
ಜಮ್ಮು ಮತ್ತು ಕಾಶ್ಮೀರದ ಚುನಾವಣಾ ಫಲಿತಾಂಶದ ಎಕ್ಸಿಟ್ ಪೋಲ್ ವರದಿಯನ್ನು ನಾನು ನಿರ್ಲಕ್ಷಿಸುತ್ತೇನೆ ಎಂದಿದ್ದಾರೆ. ಅಲ್ಲದೇ ನಿಜಕ್ಕೂ ಮ್ಯಾಟರ್ ಆಗುವುದು ಅಕ್ಟೋಬರ್ 8ರಂದು ಪ್ರಕಟವಾಗುವ ಫಲಿತಾಂಶ ಮಾತ್ರ. ಉಳಿದಿದೆಲ್ಲವೂ ಬರೀ ಟೈಂಪಾಸ್ ಎಂದು ಅವರು ಹೇಳಿದ್ದಾರೆ. ಈ ಟ್ವೀಟ್ ಇದೀಗ ಸಾಕಷ್ಟು ವೈರಲ್ ಆಗಿದೆ.
I’m amazed channels are bothering with exit polls especially after the fiasco of the recent general elections. I’m ignoring all the noise on channels, social media, WhatsApp Etc because the only numbers that matter will be revealed on the 8th of Oct. The rest is just time pass.
— Omar Abdullah (@OmarAbdullah) October 5, 2024
370ನೇ ವಿಧಿ ರದ್ದು: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತ ಸ್ವತಂತ್ರ್ಯದ ನಂತರ ಸಂವಿಧಾನದಲ್ಲಿ ನೀಡಲಾಗಿದ್ದ 370ನೇ ವಿಧಿಯನ್ನು ರದ್ದು ಮಾಡಿದ ನಂತರದಲ್ಲಿ ನಡೆಯುತ್ತಿರುವ ಚುನಾವಣೆ ಇದಾಗಿದ್ದು, ಕುತೂಹಲ ಮೂಡಿಸಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕೆಲವು ಪಕ್ಷಗಳು ಇದನ್ನೇ ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡಿದ್ದವು. ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ದಿನಗಳಲ್ಲಿ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಮರಳಿಪಡೆಯುವುದಕ್ಕೂ ಶ್ರಮಿಸುವುದಾಗಿ ಹೇಳಿವೆ. ಈ ಹೇಳಿಕೆಗೆ ಬಿಜೆಪಿ ಸವಾಲು ಹಾಕಿದ್ದೂ ಇದೆ. ನಿಮ್ಮ ಕೈಯಿಂದ ಸಾಧ್ಯವಾದರೆ 370ನೇ ರದ್ದನ್ನು ತೆಗೆದು ನೋಡಿ ಎಂದೂ ಸವಾಲು ಹಾಕಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಅತಂತ್ರ ಫಲಿತಾಂಶ ?
ಜಮ್ಮು ಮತ್ತು ಕಾಶ್ಮೀರದಲ್ಲಿ 10 ವರ್ಷಗಳ ನಂತರ ಚುನಾವಣೆ ನಡೆದಿದೆ. ಇಲ್ಲಿ ಎಲ್ಲಾ ಪಕ್ಷಗಳು ಜಿದ್ದಾಜಿದ್ದಿನ ಪೈಪೋಟಿ ನೀಡಿವೆ. ಬಿಜೆಪಿ ಇದೇ ಮೊದಲ ಬಾರಿ ಕಣಿವೆ ರಾಜ್ಯದಲ್ಲಿ ಅಬ್ಬರದ ಚುನಾವಣಾ ಪ್ರಚಾರವನ್ನು ಮಾಡಿದೆ. ಇನ್ನೊಂದು ಮುಖ್ಯ ಅಂಶವೆಂದರೆ ಈ ಬಾರಿಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ವತಂತ್ರ ಅಭ್ಯರ್ಥಿಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧೆ ಮಾಡಿದ್ದಾರೆ.
ಸ್ವತಂತ್ರ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣಾ ಕಣದಲ್ಲಿ ಇರುವುದಕ್ಕೆ ಮುಖ್ಯ ಕಾರಣ ಮತ ವಿಭಜನೆಯೇ ಆಗಿದೆ. ಇದೆಲ್ಲ ಬಿಜೆಪಿಯ ಪ್ಲಾನ್ ಎಂದು ಕೆಲವು ಪಕ್ಷಗಳು ಆರೋಪ ಸಹ ಮಾಡಿದ್ದವು. ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿದ್ದು, ಮ್ಯಾಜಿಕ್ ನಂಬರ್ 46 ಆಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications