Jammu & Kashmir Election: 40 ಕ್ಷೇತ್ರಗಳಲ್ಲಿ ಮೂರನೇ ಹಂತದ ಚುನಾವಣೆ; ಭದ್ರತೆ ಹೆಚ್ಚಳ

ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಮೊದಲ ಎರಡು ಹಂತಗಳಲ್ಲಿ ಶಾಂತಿಯುತ ಮತದಾನ ನಡೆದಿತ್ತು. ಅಕ್ಟೋಬರ್ 1 (ಮಂಗಳವಾರ) ಮೂರನೇ ಮತ್ತು ಕೊನೆಯ ಹಂತದ ಚುನಾವಣೆ ನಡೆಯಲಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರಿ ಭದ್ರತೆ ಏರ್ಪಡಿಸಲಾಗಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ಪಕ್ಷಗಳು ಭರ್ಜರಿ ಪ್ರಚಾರ ನಡೆಸಿದ್ದು, ಸರ್ಕಾರ ರಚಿಸುವ ಹುಮ್ಮಸ್ಸಿನಲ್ಲಿವೆ.

ಮೂರನೇ ಹಂತದಲ್ಲಿ 40 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಮೊದಲ ಎರಡು ಹಂತಗಳಲ್ಲಿ 50 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಚುನಾವಣೆ ನಡೆದಿದೆ. ಮೊದಲ ಹಂತದ ಚುನಾವಣೆ ಸೆಪ್ಟೆಂಬರ್ 18ರಂದು 24 ಕ್ಷೇತ್ರಗಳಲ್ಲಿ ಚುನಾವಣೆ ನಡೆದರೆ, ಸೆಪ್ಟೆಂಬರ್ 25ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ 26 ಕ್ಷೇತ್ರಗಳಲ್ಲಿ ಚುನಾವಣೆ ನಡೆದಿತ್ತು. ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ.

Jammu and Kashmir Set for Phase 3 of Assembly Elections on October 1st

ಕಾಂಗ್ರೆಸ್, ನ್ಯಾಷನಲ್‌ ಕಾನ್ಫರೆನ್ಸ್, ಬಿಜೆಪಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ), ಅಪ್ನಿ ಪಾರ್ಟಿ, ಸಿಪಿಐ(ಎಂ), ಜೆ & ಕೆ ಪೀಪಲ್ಸ್ ಕಾನ್ಫರೆನ್ಸ್ ಮತ್ತು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು ಬಿರುಸಿನ ಪ್ರಚಾರ ನಡೆಸಿವೆ.

7 ಜಿಲ್ಲೆಗಳಲ್ಲಿ ಮತದಾನ, ಬಿಗಿ ಭದ್ರತೆ

ಕೊನೆಯ ಹಂತದಲ್ಲಿ ಕುಪ್ವಾರ, ಬಾರಾಮುಲ್ಲಾ, ಬಂಡಿಪೋರಾ, ಉಧಂಪುರ, ಸಾಂಬಾ, ಕಥುವಾ ಮತ್ತು ಜಮ್ಮು ಸೇರಿದಂತೆ ಏಳು ಜಿಲ್ಲೆಗಳ 40 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 39 ಲಕ್ಷ ಮತದಾರರು ಕೊನೆಯ ಹಂತದ ಚುನಾವಣೆಯಲ್ಲಿ ಮತ ಚಲಾಯಿಸಲು ಸಜ್ಜಾಗಿದ್ದಾರೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ.

ಮೂರನೇ ಹಂತದ ಚುನಾವಣೆಗೆ ಭಾರಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಶಾಂತಿಯುತ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಏಳು ಜಿಲ್ಲೆಗಳಲ್ಲಿ 5,060 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗಿದ್ದು, 20,000ಕ್ಕೂ ಹೆಚ್ಚು ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪ್ರತಿ ಮತಗಟ್ಟೆ ಕೇಂದ್ರದಲ್ಲಿ ಒಬ್ಬ ಮುಖ್ಯ ಅಧಿಕಾರಿ ಸೇರಿದಂತೆ ನಾಲ್ಕು ಚುನಾವಣಾ ಸಿಬ್ಬಂದಿ ಕಾರ್ಯ ನಿರ್ವಹಿಸಲಿದ್ದಾರೆ.

ಕಾಂಗ್ರೆಸ್ ನಾಯಕ, ಮಾಜಿ ಡಿಸಿಎಂ ತಾರಾ ಚಂದ್, ಮುಜಾಫರ್ ಹುಸೇನ್ ಬೇಗ್ ಸೇರಿದಂತೆ ವಿವಿಧ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ಸೇರಿ 415 ಮಂದಿ ಕಣದಲ್ಲಿದ್ದಾರೆ. ಜಮ್ಮು ಭಾಗದ 24 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಭಾರಿ ಪೈಪೋಟಿ ಏರ್ಪಟ್ಟಿದೆ. ಉತ್ತರ ಕಾಶ್ಮೀರದ 16 ಸ್ಥಾನಗಳಲ್ಲಿ ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳು ಮತ್ತು ಜಮ್ಮು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಅಭ್ಯರ್ಥಿಗಳ ನಡುವೆ ಸ್ಪರ್ಧೆ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+