Jammu And Kashmir Elections: ರೈತರಿಗೆ ವಾರ್ಷಿಕ 10,000 ರೂ ನೆರವು: ಮೋದಿ ಕೊಟ್ಟ ಭರವಸೆ ಇಲ್ಲಿದೆ

ನವದೆಹಲಿ, ಸೆಪ್ಟೆಂಬರ್‌ 20: ಜಮ್ಮು-ಕಾಶ್ಮೀರದಲ್ಲಿ ದಶಕ ನಂತರ ಇಂದು ಬುಧವಾರ ಮೊದಲ ಹಂತದ ಚುನಾವಣೆಗೆ ಮತದಾನ ನಡೆದಿದೆ. ಎರಡನೇ ಹಂತದಲ್ಲಿ, ಸೆಪ್ಟೆಂಬರ್ 25 ರಂದು ಜಮ್ಮು ಮತ್ತು ಕಾಶ್ಮೀರದ 26 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮೂರನೇ ಮತ್ತು ಕೊನೆಯ ಹಂತದಲ್ಲಿ ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರದ 40 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ.

ಈಗಾಗಲೇ ಭರ್ಜರಿ ಚುನಾವಣಾ ಪ್ರಚಾರವನ್ನ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಶ್ರೀನಗರದ ಶೇರ್-ಎ-ಕಾಶ್ಮೀರ್ ಸ್ಟೇಡಿಯಮ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳ ಬೆಂಬಲಾರ್ಥ ರ್ಯಾಲಿಯಲ್ಲಿ ಮಾತನಾಡಿದ ಅವರು,ಜಮ್ಮು-ಕಾಶ್ಮೀರದ ರಾಜ್ಯ ಸ್ಥಾನಮಾನ ಮರುಸ್ಥಾಪಿಸುವ ಭರವಸೆಯನ್ನು ಬಿಜೆಪಿ ಈಡೇರಿಸಲಿದೆ ಎಂದರು.

Jammu and kashmir statehood will be restored says PM Modi

ಜಮ್ಮು-ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ದಿನದ ಮತದಾನ ಹೆಚ್ಚಿನ ಪ್ರಮಾಣದಲ್ಲಿ ಮತಚಲಾಯಿಸಿರುವುದನ್ನ ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದು,ಇದು ಪ್ರಜಾಪ್ರಭುತ್ವದ ಮೇಲಿನ ಅಪಾರ ವಿಶ್ವಾಸವನ್ನು ತೋರಿಸಿದೆ. ತಮ್ಮ ಮತವು ಬದಲಾವಣೆಯನ್ನು ತರಬಹುದು, ಸಬಲೀಕರಣದತ್ತ ಮೊದಲ ಹೆಜ್ಜೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.

ಇನ್ನೂ ರೈತರಿಗೆ ವಾರ್ಷಿಕ 10,000 ರೂ.ಗಳ ನೆರವು,ಪ್ರತಿ ಕುಟುಂಬದ ಯಜಮಾನಿಗೆ 18,000 ರೂ.ಗಳ ವಾರ್ಷಿಕ ನೆರವು,ಆರೋಗ್ಯ ವಿಮೆ ರಕ್ಷಣೆಯನ್ನು ಈಗಿನ ಐದು ಲಕ್ಷ ರೂ.ಗಳಿಂದ ಏಳು ಲಕ್ಷ ರೂ.ಗಳಿಗೆ ಹೆಚ್ಚಿಸುವುದು ಇವು ಪ್ರಧಾನಿಯವರ ಇತರ ಭರವಸೆಗಳಲ್ಲಿ ಸೇರಿವೆ.

ಕಳೆದ ಐದು ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯಲ್ಲಿ ವ್ಯಾಪಕ ಬದಲಾವಣೆಗಳಾಗಿವೆ ಎಂದ ಪ್ರಧಾನಿ ಮೋದಿ ಅವರು, ಹಿಂದೆ ಚುನಾವಣಾ ಪ್ರಚಾರಗಳು ಸಂಜೆ ಆರು ಗಂಟೆಗೆ ಅಂತ್ಯಗೊಳ್ಳುತ್ತಿದ್ದವು,ಮನೆಮನೆಗೆ ತೆರಳಿ ಪ್ರಚಾರ ಅಸಾಧ್ಯವಾಗಿತ್ತು, ಇಂದು ತಡರಾತ್ರಿಯಲ್ಲಿಯೂ ಚುನಾವಣಾ ಪ್ರಚಾರ ನಡೆಯುತ್ತಿದೆ. ಈಗ ಜನರು ಪ್ರಜಾಪ್ರಭುತ್ವವನ್ನು ಸಂಭ್ರಮಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು.

ಕಾಂಗ್ರೆಸ್, ನ್ಯಾಷನಲ್ ಕಾನ್ಸರೆನ್ಸ್ ಮತ್ತು ಪಿಡಿಪಿ ತಮ್ಮ ಸ್ವಂತ ಲಾಭಗಳಿಗಾಗಿ ಪ್ರಜಾಪ್ರಭುತ್ವ ಮತ್ತು ಕಾಶ್ಮೀರಿಯತ್ ಅನ್ನು ತುಳಿದಿವೆ. 1980ರ ದಶಕದಲ್ಲಿ ಜಮ್ಮು-ಕಾಶ್ಮೀರ ರಾಜಕೀಯವನ್ನು ತಮ್ಮ ಜಹಗೀರು ಎಂದು ಅವು ಪರಿಗಣಿಸಿದ್ದವು. ತಮ್ಮ ಕುಟುಂಬದವರನ್ನು ಹೊರತುಪಡಿಸಿ ಇತರ ಯಾರೂ ಮುಂದೆ ಬರುವುದನ್ನು ಅವು ಬಯಸಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದರು.

ಕಾಂಗ್ರೆಸ್, ನ್ಯಾಷನಲ್ ಕಾನ್ಸರೆನ್ಸ್ ಮತ್ತು ಪಿಡಿಪಿಯೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಅವು ಏಕೆ ನಿಲ್ಲಿಸುತ್ತಿದ್ದವು? ಅದು ತಮ್ಮ ಕುಟುಂಬ ಆಡಳಿತಕ್ಕೆ ಸವಾಲು ಹಾಕುವ ಹೊಸಮುಖಗಳನ್ನು ಮುಂದಕ್ಕೆ ತರುತ್ತದೆ ಎನ್ನುವುದು ಅವುಗಳಿಗೆ ತಿಳಿದಿತ್ತು. ಪರಿಣಾಮವಾಗಿ ಯುವಜನರು ಪ್ರಜಾಪ್ರಭುತ್ವದಲ್ಲಿ ನಂಬಿಕೆಯನ್ನು ಕಳೆದುಕೊಳ್ಳತೊಡಗಿದ್ದರು ಎಂದು ಮೋದಿ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+