ಶ್ರೀನಗರ: ಉಗ್ರರಿಂದ ಗ್ರೇನೇಡ್ ದಾಳಿ, ನಾಲ್ವರು ಯೋಧರಿಗೆ ಗಂಭೀರ ಗಾಯ
ಶ್ರೀನಗರ, ಸೆಪ್ಟೆಂಬರ್ 4: ಶ್ರೀನಗರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಭದ್ರತಾ ಪಡೆಗಳ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿಯಲ್ಲಿ ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಸೋಪೋರ್ ನಲ್ಲಿ ಮಂಗಳವಾರ ನಡೆದಿದೆ.
ಸೊಪೋರ್ ನಲ್ಲಿರುವ ಡಿ/177ಬಿಎನ್ ಸಿಆರ್'ಪಿಎಫ್ ಯೋಧರ ಮೇಲೆ ಮಂಗಳವಾರ ಬೆಳಿಗ್ಗೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ದಾಳಿ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಈ ವೇಳೆ ನಾಲ್ವರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಗಾಯಗೊಂಡ ಯೋಧರನ್ನು ಸ್ತಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ಶ್ರೀನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸಿದ ಬಳಿಕವೇ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ.












Click it and Unblock the Notifications