Jammu and Kashmir: ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರು ಬಲಿ

ಶ್ರೀನಗರ, ಅಕ್ಟೋಬರ್‌ 26: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಮಚ್ಚಲ್ ಸೆಕ್ಟರ್‌ನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ಪೊಲೀಸರು ಗುರುವಾರ ತಿಳಿಸಿದ್ದಾರೆ.

'ಕುಪ್ವಾರಾ ಪೊಲೀಸರು ನೀಡಿದ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಮಚ್ಚಲ್ ಸೆಕ್ಟರ್‌ನಲ್ಲಿ ಎನ್‌ಕೌಂಟರ್ ಪ್ರಾರಂಭವಾಗಿದೆ. ಇದರಲ್ಲಿ ಇದುವರೆಗೆ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ವಿವರಗಳನ್ನು ನೀಡಲಾಗುವುದು' ಎಂದು ಕಾಶ್ಮೀರ ವಲಯ ಪೊಲೀಸರು ಸಾಮಾಜಿಕ ಮಾಧ್ಯಮ 'ಎಕ್ಸ್‌'ನಲ್ಲಿ ತಿಳಿಸಿದ್ದಾರೆ.

Jammu and Kashmir: Two terrorists killed in firing by security forces

ಕಾರ್ಯಾಚರಣೆ ಮುಂದುವರಿದಿದೆ. ಇನ್ನೂ ಇಬ್ಬರು ಉಗ್ರರು ಅಡಗಿಕೊಂಡಿಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದಿನ ದಿನ, ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಭಾರತೀಯ ಸೇನೆ ಜಂಟಿ ಕಾರ್ಯಾಚರಣೆ ಮಾಡಿದೆ. ಭಾರತೀಯ ಸೇನೆಯ ಸಿಬ್ಬಂದಿ ಕುಪ್ವಾರ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದೆ.

ಅಕ್ಟೋಬರ್ 26 ರಂದು ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ನಡೆಸಿದ್ದಾರೆ. ಕುಪ್ವಾರಾ ಸೆಕ್ಟರ್‌ನಲ್ಲಿ ಎಲ್‌ಒಸಿ ಉದ್ದಕ್ಕೂ ಒಳನುಸುಳುವಿಕೆಯ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ ಎಂದು ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ 'ಎಕ್ಸ್‌'ನಲ್ಲಿ ತಿಳಿಸಿದೆ.

ಕಳೆದ ವಾರ, ಬಾರಾಮುಲ್ಲಾದ ಉರಿ ಸೆಕ್ಟರ್‌ನಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿದ ನಂತರ ಭದ್ರತಾ ಪಡೆಗಳು ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದರು. ಗುಪ್ತಚರ ಏಜೆನ್ಸಿಗಳ ಒಳಹರಿವಿನ ಆಧಾರದ ಮೇಲೆ, ಸೈನ್ಯವನ್ನು ಹೆಚ್ಚಿನ ಎಚ್ಚರಿಕೆಯಲ್ಲಿ ಇರಿಸಲಾಯಿತು ಎಂದು ತಿಳಿದುಬಂದಿದೆ.

ಸೇನೆಯ ಪ್ರಕಟಣೆಯ ಪ್ರಕಾರ, ನಿರಂತರ ಮಳೆ ಮತ್ತು ಕಳಪೆ ಗೋಚರತೆಯ ಜೊತೆಗೆ ಕೆಟ್ಟ ಹವಾಮಾನದ ಲಾಭವನ್ನು ಉಗ್ರರು ಪಡೆದುಕೊಂಡಿದ್ದಾರೆ. ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪು ಉರಿ ಸೆಕ್ಟರ್‌ನಲ್ಲಿ ಎಲ್ಒಸಿಯಾದ್ಯಂತ ನುಸುಳಲು ಪ್ರಯತ್ನಿಸಿತು ಎಂದು ವರದಿಯಾಗಿದೆ.

ಮಧ್ಯಾಹ್ನ 3 ಗಂಟೆಗೆ, ಪಡೆಗಳು ಭಯೋತ್ಪಾದಕರನ್ನು ತಡೆಹಿಡಿದಿವೆ. ಇದರ ಪರಿಣಾಮವಾಗಿ ಭಾರೀ ಗುಂಡಿನ ಚಕಮಕಿಯು ಬೆಳಕು ಹರಿಯುವವರೆಗೂ ಮುಂದುವರಿದಿದೆ. ಇದರಲ್ಲಿ ಇಬ್ಬರು ಭಯೋತ್ಪಾದಕರ ಎನ್ಕೌಂಟರ್ಗೆ ಬಲಿಯಾಗಿದ್ದಾರೆ. ರಾತ್ರಿಯಿಡೀ ಈ ಪ್ರದೇಶವನ್ನು ಕಣ್ಗಾವಲಿನಲ್ಲಿ ಇರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಉಗ್ರರಿಂದ ಎರಡು ಎಕೆ ಸಿರೀಸ್ ರೈಫಲ್‌ಗಳು, ಆರು ಪಿಸ್ತೂಲ್‌ಗಳು, ನಾಲ್ಕು ಚೈನೀಸ್ ಗ್ರೆನೇಡ್‌ಗಳು, ಕಂಬಳಿಗಳು ಮತ್ತು ಎರಡು ಕೆಂಪು ಬಣ್ಣದ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಾಕಿಸ್ತಾನಿ ಮತ್ತು ಭಾರತೀಯ ಕರೆನ್ಸಿ ನೋಟುಗಳು, ಪಾಕಿಸ್ತಾನಿ ಔಷಧಗಳು ಮತ್ತು ತಿನ್ನಬಹುದಾದ ವಸ್ತುಗಳು ಈ ಚೀಲದಲ್ಲಿದ್ದವು ಎಂದು ಗೊತ್ತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+