ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆಗಳ ಗುಂಡಿಗೆ ನಾಲ್ವರು ಉಗ್ರರ ಬಲಿ

ಬಾರಾಮುಲ್ಲಾ, ಆಗಸ್ಟ್ 8: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.

ಉಗ್ರರ ಬೇಟೆಯ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ಆವಂತಿಪುರದಲ್ಲಿ ಮಂಗಳವಾರ ಭದ್ರತಾ ಪಡೆಗಳು ಪಟ್ಟಾನ್ ಬಾರಾಮುಲ್ಲಾದಲ್ಲಿ ಇಕ್ಬಾಲ್ ಕಾಲೊನಿ ನಿವಾಸಿ ಅಬ್ದುಲ್ ಮಜೀದ್ ಶಾ ಎಂಬ ಉಗ್ರನನ್ನು ಬಂಧಿಸಿದ್ದವು.

jammu and kashmir four terrorists shot dead

ಆತನ ಬಳಿಯಿಂದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಇತರೆ ಸ್ಫೋಟಕ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಆತ ಬಾರಾಮುಲ್ಲಾದಲ್ಲಿ ಚಟುವಟಿಕೆ ನಡೆಸುತ್ತಿರುವ ಇತರೆ ಉಗ್ರರನ್ನು ಭೇಟಿ ಮಾಡಲು ಕಾರ್‌ನಲ್ಲಿ ತೆರಳುತ್ತಿದ್ದಾಗ ಆತನನ್ನು ಬಂಧಿಸಲಾಗಿತ್ತು.

ವಿಚಾರಣೆ ವೇಳೆ ಆತ, ಭಯೋತ್ಪಾದನಾ ದಾಳಿಗಳನ್ನು ನಡೆಸಲು ಯೋಜನೆ ನಡೆಸುತ್ತಿರುವ ಇತರೆ ಉಗ್ರರ ಜತೆ ನಿಕಟ ಸಂಪರ್ಕ ಹೊಂದಿರುವುದಾಗಿ ಬಾಯ್ಬಿಟ್ಟಿದ್ದ. ಆತನ ವಿರುದ್ಧ ಆವಂತಿಪುರ ಪೊಲೀಸ್ ಠಾಣೆಯಲ್ಲಿ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 7/25 ಅಡಿ ಪ್ರಕರಣ ದಾಖಲಿಸಲಾಗಿದೆ.

ಉಗ್ರ ನೀಡಿದ ಮಾಹಿತಿ ಆಧರಿಸಿ ಉಳಿದ ಉಗ್ರರ ಅಡುಗುದಾಣದ ಮೇಲೆ ದಾಳಿ ನಡೆಸಲಾಗಿದ್ದು, ಕಾರ್ಯಾಚರಣೆ ಇನ್ನೂ ಪ್ರಗತಿಯಲ್ಲಿದೆ. ಇದುವರೆಗೂ ನಾಲ್ವರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.ಗುರೇಜ್ ವಲಯದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದ್ದ ಸೇನಾ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಯೋಧರು ಹತ್ಯೆ ಮಾಡಿದ್ದರು. ಈ ಘಟನೆಯಲ್ಲಿ ಒಬ್ಬ ಮೇಜರ್ ಸೇರಿದಂತೆ ಮೂವರು ಯೋಧರು ಕೂಡ ಮೃತಪಟ್ಟಿದ್ದರು.

ಇನ್ನು ನಾಲ್ವರು ತಲೆಮರೆಸಿಕೊಂಡಿದ್ದರು. ಅವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+