Get Updates
Get notified of breaking news, exclusive insights, and must-see stories!

ಜಮ್ಮು ಕಾಶ್ಮೀರ, ಜಾರ್ಖಂಡ್ ಚುನಾವಣಾ ಫಲಿತಾಂಶ

ನವದೆಹಲಿ, ಡಿ. 23 : ಎರಡು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ನೆಲಕಚ್ಚಿದ್ದು, ಕಾಂಗ್ರಸ್ ಮುಕ್ತ ಭಾರತ ಕರೆಗೆ ಜನರಿಂದ ಉತ್ತಮ ಬೆಂಬಲ ಸಿಕ್ಕಿದೆ ಎಂದು ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಿದೆ. 2014 ಬಿಜೆಪಿಯ ಚುನಾವಣಾ ವರ್ಷವಾಗಿದೆ, ಪ್ರಧಾನಿ ನರೇಂದ್ರ ಮೋದಿ ಅವರು ಅಭಿವೃದ್ಧಿ ಕಾರ್ಯಗಳಿಂದಾಗಿಯೇ ಜನರು ಬಿಜೆಪಿಗೆ ಮತ ನೀಡಿದ್ದಾರೆ ಎಂದು ಅಮಿತ್ ಶಾ ಹೇಳಿದರು. ಜಾರ್ಖಂಡ್‌ನಲ್ಲಿ ನಾವು ಸರ್ಕಾರ ರಚಿಸುತ್ತೇವೆ ಎಂದು ಅಮಿತ್ ಶಾ ತಿಳಿಸಿದರು.

ಸಮಯ 3 ಗಂಟೆ : ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಬೀರ್‌ ವಾ ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ.

ಸಮಯ 2.15 : ಜಾರ್ಖಂಡ್‌ನ ಜಗನ್ನಾಥಪುರ ಕ್ಷೇತ್ರದಲ್ಲಿ ಮಧು ಕೋಡಾ ಪತ್ನಿ ಗೀತಾ ಕೋಡಾ ಅವರು ಜಯಗಳಿಸಿದ್ದಾರೆ. ಮಾಜಿ ಸಿಎಂ ಮಧು ಕೋಡಾ ಪತ್ನಿ ಗೀತಾ ಕೋಡಾ ಅವರು ಜೈ ಭಾರತ ಸಮಾನತಾ ಪಾರ್ಟಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಸಮಯ 1.45 : ಜಾರ್ಖಂಡ್‌ ನ ಮಜ್‌ಗಾವ್‌ ಕ್ಷೇತ್ರದಿಂದ ಜೈ ಭಾರತ ಸಮಾನತ ಪಾರ್ಟಿಯಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಮಧುಕೋಡಾ ಪರಾಭವಗೊಂಡಿದ್ದಾರೆ.

Jharkhand Election

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸೋನವರ್ ಕ್ಷೇತ್ರದಲ್ಲಿ ಪಿಡಿಪಿ ಅಭ್ಯರ್ಥಿ ಮೊಹಮದ್ ಅಶ್ರಫ್ ಮಿರ್ ವಿರುದ್ಧ ಸೋಲು ಅನುಭವಿಸಿದ್ದಾರೆ. ಬೀರ್‌ ವಾ ಕ್ಷೇತ್ರದಲ್ಲಿಯೂ ಅವರು ಸ್ಪರ್ಧಿಸಿದ್ದಾರೆ.

Jammu And Kashmir

ಸಮಯ 1 ಗಂಟೆ : 'ನಾನು ನನ್ನ ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಎನ್‍ಸಿ ಜೊತೆ ಸೇರಬೇಕೋ ಅಥವಾ ಪಿಡಿಪಿ ಜೊತೆ ಸೇರಬೇಕೋ ಎನ್ನುವುದನ್ನು ಬಿಜೆಪಿ ನಿರ್ಧರಿಸಲಿದೆ' ಎಂದು ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ನಾಯಕಿ ಹೀನಾ ಭಟ್ ಹೇಳಿದ್ದಾರೆ.

ಸಮಯ 12.30 : ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೋನವರ್ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ. ಎರಡು ಕ್ಷೇತ್ರದಲ್ಲಿ ಅವರು ಸ್ಪರ್ಧಿಸಿದ್ದು, ಬೀರ್‌ ವಾ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಸಮಯ 11.50 : ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.

11. 35 : ಜಾರ್ಖಂಡ್‌ನ ಮಜಗಾಂವ್ ಕ್ಷೇತ್ರದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾಗೆ ಹೀನಾಯ ಸೋಲು ಕಂಡಿದ್ದಾರೆ. ಜೆಎಂಎಂ ಅಭ್ಯರ್ಥಿ ನೀರಲ್‌ ಮಧು ಕೋಡಾ ವಿರುದ್ಧ ಜಯಗಳಿಸಿದ್ದಾರೆ.

 election results

ಸಮಯ 11.20 : ಜಮ್ಮು ಮತ್ತು ಕಾಶ್ಮೀರದಲ್ಲಿ ಮೈತ್ರಿ ಮಾತುಕತೆಯ ಕುರಿತು ಮುಕ್ತವಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಸಮಯ 11.10 : ಜಮ್ಮು ಮತ್ತು ಕಾಶ್ಮೀರದಲ್ಲಿ ಬಹುಮತಗಳಿಸಲು 44 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು. ಸದ್ಯ ಬಿಜೆಪಿ 24, ಪಿಡಿಪಿ 26, ಎನ್‌ಸಿ 12, ಕಾಂಗ್ರೆಸ್ 17 ಮತ್ತು ಇತರರು 8 ಸ್ಥಾನಗಳಲ್ಲಿ ಮುನ್ನಡೆ ಹೊಂದಿದ್ದಾರೆ.

ಸಮಯ 10.40 : ಜಾರ್ಖಂಡ್‌ನಲ್ಲಿ ಬಿಜೆಪಿ 42, ಕಾಂಗ್ರೆಸ್ 5, ಜೆಎಂಎಂ 20, ಜಾರ್ಖಂಡ್ ವಿಕಾಸ ಮೋರ್ಚಾ (ಜೆವಿಎಂ)+ 9 ಮತ್ತು ಇತರರು 5 ಸ್ಥಾನಗಳಲ್ಲಿ ಮುಂದಿದ್ದು, ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದೆ.

ಸಮಯ 10.25 : ಜಮ್ಮು ಕಾಶ್ಮೀರದಲ್ಲಿ ಬಿಜೆಪಿಯೊಂದಿಗೆ ಸೇರಿ ಕೆಲಸ ಮಾಡಲು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಸಿದ್ಧವಿದೆ ಎಂದು ಪಿಡಿಪಿ ವಕ್ತಾರ ನಹೀಮ್ ಅಖ್ತರ್ ಹೇಳಿದ್ದಾರೆ.

ಸಮಯ 10.10 : ಎರಡೂ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುತದೊಂದಿಗೆ ಸರ್ಕಾರ ರಚನೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಸಮಯ 10 ಗಂಟೆ : ಜಮ್ಮು ಕಾಶ್ಮೀರದಲ್ಲಿ ಅತಂತ್ರ ಫಲಿತಾಂಶ ಬರುವ ಹಿನ್ನಲೆಯಲ್ಲಿ ಮೈತ್ರಿ ಮಾತುಕತೆಗಳು ಆರಂಭವಾಗಿವೆ. ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಲು ವಿವಿಧ ಪಕ್ಷಗಳು ಸಿದ್ಧವಾಗಿವೆ. ಸದ್ಯದ ಫಲಿತಾಂಶದ ಪ್ರಕಾರ ಬಿಜೆಪಿ 23, ಪಿಡಿಪಿ 27, ಎನ್‌ಸಿ 15, ಕಾಂಗ್ರೆಸ್ 14 ಮತ್ತು ಇತರರು 8 ಸ್ಥಾನಗಳಲ್ಲಿ ಮುಂದಿದ್ದಾರೆ.

ಸಮಯ 9.45 : ಜಮ್ಮು ಕಾಶ್ಮೀರದಲ್ಲಿ ಪಿಡಿಪಿ, ಬಿಜೆಪಿ ಸಮಬಲ ಸಾಧಿಸಿದ್ದು ಯಾವುದೇ ಪಕ್ಷ ಸ್ಪಷ್ಟ ಬಹುಮತಗಳಿಸುವುದು ಅಸಾಧ್ಯವಾಗಿದೆ. ಜಾರ್ಖಂಡ್‌ನಲ್ಲಿ ಬಿಜೆಪಿ ಸ್ಪಷ್ಟ ಬಹುತದೊಂದಿಗೆ ಸರ್ಕಾರ ರಚನೆ ಮಾಡಲಿದೆ.

9.35 : ಜಮ್ಮು ಕಾಶ್ಮೀರದಲ್ಲಿ ಬಹುದೊಡ್ಡ ಪಕ್ಷವಾಗಿ ಹೊರ ಹೊಮ್ಮುತ್ತಿರುವ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ), ಎರಡನೇ ಸ್ಥಾನದಲ್ಲಿ ಬಿಜೆಪಿ, ಮೂರನೇ ಸ್ಥಾನದಲ್ಲಿ ನ್ಯಾಷನಲ್ ಕಾನ್ಫರೆನ್ಸ್(ಎನ್.ಸಿ).

ಸಮಯ 9.26 : ಜಾರ್ಖಂಡ್‌ನಲ್ಲಿ ಬಿಜೆಪಿ ಮುನ್ನಡೆ, ಎರಡನೇ ಸ್ಥಾನದಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ ( ಜೆಎಂಎಂ).

ಎರಡು ರಾಜ್ಯಗಳಲ್ಲಿ ಮತ ಎಣಿಕೆ ಆರಂಭ : ಜಮ್ಮು ಮತ್ತು ಕಾಶ್ಮೀರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭಗೊಂಡಿದ್ದು, ಮಧ್ಯಾಹ್ನದ ಹೊತ್ತಿಗೆ ಫಲಿತಾಂಶದ ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆ ಇದೆ.

jharkhand

87 ಶಾಸಕ ಬಲದ ಜಮ್ಮು ಕಾಶ್ಮೀರ ವಿಧಾನಸಭೆಗೆ ಚುನಾವಣೆಗೆ 821 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. 81 ಶಾಸಕ ಬಲದ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ 1,136 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಶೇ 66ರಷ್ಟು ಮತ್ತು ಜಾರ್ಖಂಡ್‌ನಲ್ಲಿ 66.47ರಷ್ಟು ಮತದಾನ ನಡೆದಿದೆ.

ಜಮ್ಮು ಕಾಶ್ಮೀರದಲ್ಲಿ ಆಡಳಿತಾರೂಢ ನ್ಯಾಷನಲ್‌ ಕಾನ್ಫರೆನ್ಸ್‌, ಪಿಡಿಪಿ, ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಸ್ಪರ್ಧೆಇದೆ. ಅಧಿಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ಓಮರ್‌ ಅಬ್ದುಲ್ಲಾ ಪ್ರಯತ್ನ ನಡೆಸಿದ್ದಾರೆ. ಇದೇ ಮೊದಲ ಬಾರಿಗೆ ಕಣಿವೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವ ಕಸರತ್ತು ನಡೆಸಿದೆ. ಸಿಎಂ ಓಮರ್‌ ಅಬ್ದುಲ್ಲಾ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. [ಸಮೀಕ್ಷೆ : ಜಮ್ಮು ಅತಂತ್ರ, ಜಾರ್ಖಂಡ್ ನಲ್ಲಿ ಬಿಜೆಪಿ]

assembly election results

ಇನ್ನು ಕಳೆದ 14 ವರ್ಷಗಳ ಅವಧಿಯಲ್ಲಿ 9 ಸರ್ಕಾರಗಳನ್ನು ಕಂಡಿರುವ, ಮೂರು ಬಾರಿ ರಾಷ್ಟ್ರಪತಿ ಆಳ್ವಿಕೆಗೆ ಒಳಪಟ್ಟಿರುವ ಜಾರ್ಖಂಡ್‌ನ‌ಲ್ಲಿ ಈ ಬಾರಿ ಸ್ಪಷ್ಟ ಬಹುಮತದ ಸರ್ಕಾರ ಅಸ್ತಿತ್ವಕ್ಕೆ ಬರಲಿದೆಯೇ ಎಂಬ ಕುತೂಹಲವಿದೆ. ಮತದಾನೋತ್ತರ ಸಮೀಕ್ಷೆಗಳ ಪ್ರಕಾರ ಜಾರ್ಖಂಡ್‌ನಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಜಮ್ಮುಕಾಶ್ಮೀರದ ಫಲಿತಾಂಶ ಅತಂತ್ರವಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+