Get Updates
Get notified of breaking news, exclusive insights, and must-see stories!

Omar Abdullah: ಜಮ್ಮು & ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನದ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಹೇಳಿದ್ದೇನು?

ಜಮ್ಮು & ಕಾಶ್ಮೀರ, ಅಕ್ಟೋಬರ್‌, 19: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ನೇತತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯ ಸ್ಥಾನಮಾನ ನೀಡಬೇಕೆನ್ನುವ ನಿರ್ಣಯವನ್ನು ಅಂಗೀಕರಿಸಿತ್ತು. ಇನ್ನು ಇಂದು (ಅಕ್ಟೋಬರ್‌ 19) ರಾಜ್ಯದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಈ ಬಗ್ಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ಈ ನಿರ್ಣಯವನ್ನು ಅಂಗೀಕರಿಸಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಒಮರ್‌ ಅಬ್ದುಲ್ಲಾ ನೇತತ್ವದ ಜಮ್ಮು ಮತ್ತು ಕಾಶ್ಮೀರ ಸಚಿವ ಸಂಪುಟ ರಾಜ್ಯ ಸ್ಥಾನಮಾನ ಮರುಸ್ಥಾಪನೆಗೆ ನಿರ್ಣಯವನ್ನು ಅಂಗೀಕರಿಸಿದೆ. ತನ್ನ ಮೊದಲ ಸಭೆಯಲ್ಲಿ ಕ್ಯಾಬಿನೆಟ್‌ ರಾಜ್ಯತ್ವವನ್ನು ಪುನಃಸ್ಥಾಪಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿತು ಎಂದು ತಿಳಿದುಬಂದಿತ್ತು. ಇನ್ನೂ ಇದೀಗ ಇಂದು ಲೆಪ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಅವರು ಈ ಬಗ್ಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Jammu amp amp Kashmir L-G clears resolution passed by Omar-led Cabinet urging Centre to restore Statehood

ನಿರ್ಣಯದ ಪ್ರತಿಯನ್ನು ಸಿದ್ಧಪಡಿಸಲಾಗಿದ್ದು, ಜಮ್ಮು ಕಾಶ್ಮೀರ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ಈ ಕರಡನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಹಸ್ತಾಂತರಿಸಲು ಮುಖ್ಯಮಂತ್ರಿಗಳು ಕೆಲವೇ ದಿನಗಳಲ್ಲಿ ನವದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸೆಪ್ಟೆಂಬರ್ 16ರಂದು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹತ್ತು ವರ್ಷಗಳ ಬಳಿಕ ರಾಜ್ಯದಲ್ಲಿ ಸರ್ಕಾರ ರಚನೆಯಾಗಿದ್ದು, ಕೇಂದ್ರಾಡಳಿತ ಪ್ರದೇಶವಾಗಿ ಮಾರ್ಪಾಡದ ಬಳಿಕ ಆಯ್ಕೆಯಾದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.

ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್‌ಕೆಐಸಿಸಿ)ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಮಾಣವಚನ ಬೋಧಿಸಿದರು. ಒಮರ್ ಅಬ್ದುಲ್ಲಾ ಜೊತೆಗೆ ಶಾಸಕರಾದ ಸತೀಶ್ ಶರ್ಮಾ (ಸ್ವತಂತ್ರ), ಸಕಿನಾ ಇಟೂ, ಜಾವಿದ್ ದಾರ್, ಸುನ್ರಿಂದರ್ ಚೌಧರಿ ಮತ್ತು ಜಾವಿದ್ ರಾಣಾ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು 90 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದಿದೆ. ನ್ಯಾಷನಲ್ ಕಾನ್ಫರೆನ್ಸ್ 42 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು ಮತ್ತು ಕಾಂಗ್ರೆಸ್ 6 ಸ್ಥಾನಗಳನ್ನು ಪಡೆದುಕೊಂಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+