Get Updates
Get notified of breaking news, exclusive insights, and must-see stories!

ಜಮ್ಮು ಮತ್ತು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರ ಬಲಿ

ಜಮ್ಮು, ಸೆಪ್ಟೆಂಬರ್ 15: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿರುವ ಚೌಗಂನಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಭಾರಿ ಗುಂಡಿನ ಚಕಮಕಿ ನಡೆದಿದೆ.

ಐವರು ಉಗ್ರರು ಭಾಗಿಯಾಗಿದ್ದು, ಭದ್ರತಾ ಪಡೆಗಳು ಇದುವರೆಗೂ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಅವರ ಮೃತದೇಹಗಳು ಪತ್ತೆಯಾಗಿವೆ ಎಂದು ಸೇನಾ ಮೂಲಗಳು ತಿಳಿಸಿವೆ.

ಇನ್ನೂ ಇಬ್ಬರು ಉಗ್ರರು ಇದ್ದಾರೆ ಎನ್ನಲಾಗಿದೆ. ಮೃತರಲ್ಲಿ ಲಷ್ಕರ್ ಎ ತಯಬಾದ ಪ್ರಮುಖ ನಾಯಕ ಕೂಡ ಸೇರಿದ್ದಾನೆ.

Jammu and Kashmir: security forces killed 3 terrorists in an encounter in Kulgam

ಘಟನೆಯಲ್ಲಿ ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ. ಎನ್‌ಕೌಂಟರ್ ಕಾರಣದಿಂದಾಗಿ ಬಾರಾಮುಲ್ಲಾ-ಖಾಸಿಗುಂದ್ ನಡುವಿನ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಚೌಗಂನಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಆಧಾರದಲ್ಲಿ ಶನಿವಾರ ಬೆಳಿಗ್ಗೆ ಈ ಪ್ರದೇಶದಲ್ಲಿ ಹುಡುಕಾಟ ಕಾರ್ಯಾಚರಣೆ ಆರಂಭಿಸಲಾಗಿತ್ತು.

ಈ ವೇಳೆ ಉಗ್ರರು ಅಡಗಿದ್ದ ತಾಣದತ್ತ ಭದ್ರತಾ ಪಡೆಗಳು ಆಗಮಿಸುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿದಾಳಿ ನಡೆಸಿದ ಭದ್ರತಾ ಪಡೆಗಳು ಮೂವರನ್ನು ಹೊಡೆದುರುಳಿಸಿದರು. ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+