• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಈ ವರ್ಷ ಜನೌಷಧಿ ಕೇಂದ್ರಗಳಿಂದ 484 ಕೋಟಿ ರೂ. ವಹಿವಾಟು

|

ಬೆಂಗಳೂರು,ಜನವರಿ 14:ಈ ವರ್ಷ ಜನೌಷಧಿ ಕೇಂದ್ರಗಳಿಂದ 484 ಕೋಟಿ ರೂ ವಹಿವಾಟು ನಡೆದಿದೆ.

ಭಾರತೀಯ ಜನೌಷಧಿ ಮಳಿಗೆಗಳಿಂದ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಗುಣಮಟ್ಟದ ಜೆನರಿಕ್ ಔಷಧಿಗಳನ್ನು ಮಾರಾಟ ಮಾಡುತ್ತಿದ್ದು, ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಶೇ 60 ರಷ್ಟು ಹೆಚ್ಚು ವಹಿವಾಟು ನಡೆದಿದೆ ಎಂದಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ದೇಶದ 7064 ಪ್ರಧಾನಮಂತ್ರಿ ಜನೌಷಧಿ ಮಳಿಗೆಗಳಲ್ಲಿ 484 ಕೋಟಿ ರೂಪಾಯಿ ಮೊತ್ತದ ದಾಖಲೆ ಪ್ರಮಾಣದ ವಹಿವಾಟು ನಡೆದಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟು 788 ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳಿದ್ದು, ಕೈಗೆಟುಕುವ ದರದಲ್ಲಿ ಗುಣಮಟ್ಟದ ಜೆನರಿಕ್ ಔಷಧಿಗಳನ್ನು ಮಾರಾಟ ಮಾಡಲಾಗುತ್ತಿದೆ. 2021ರ ಮಾರ್ಚ್ ಅಂತ್ಯದ ವೇಳೆಗೆ ಮಳಿಗೆಗಳ ಸಂಖ್ಯೆಯನ್ನು 80ಕ್ಕೆ ಹೆಚ್ಚಿಸಲು ಹಾಗೂ ಈ ಕೇಂದ್ರಗಳ ಮೂಲಕ 125 ಕೋಟಿ ರೂ. ಮೊತ್ತದ ಔಷಧಗಳನ್ನು ಮಾರಾಟ ಮಾಡುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು.

ಜನೌಷಧಿ ಮಳಿಗೆಗಳಲ್ಲಿ ಔಷಧಿ ಖರೀದಿ ಮಾಡಿದ ಪರಿಣಾಮ ದೇಶದ ಜನರಿಗೆ 3000 ಕೋಟಿ ರೂಪಾಯಿ ಉಳಿತಾಯವಾಗಿದ್ದು, ಜನರಿಗೆ ಹೆಚ್ಚಿನ ರೀತಿಯಲ್ಲಿ ಉಪಯೋಗವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಳೆದ ಡಿಸೆಂಬರ್ ನಲ್ಲಿ 3.6 ಕೋಟಿ ಸುವಿಧ ಜನೌಷಧಿ ಸ್ಯಾನಿಟರಿ ಪ್ಯಾಡ್ ಗಳಿಗೆ ಬೇಡಿಕೆ ಬಂದಿದೆ. ಒಟ್ಟು 30 ಕೋಟಿ ಜನೌಷಧಿ ಸ್ಯಾನಿಟರಿ ಪ್ಯಾಡ್ ಗಳ ಟೆಂಡರ್ ನ್ನು ಅಂತಿಮಗೊಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸರ್ಕಾರ ದೇಶದಲ್ಲಿ ಎಲ್ಲಾ ರೀತಿಯಲ್ಲೂ ಮಹಿಳಾ ಸಬಲೀಕರಣದ ಗುರಿ ಹೊಂದಿದ್ದು, ಈವರೆಗೆ 10 ಕೋಟಿ ಜನೌಷಧಿ ಸುವಿಧ ಸ್ಯಾನಿಟರಿ ಪ್ಯಾಡ್ ಗಳನ್ನು ಒಂದು ರೂ. ದರದಲ್ಲಿ ಮಾರಾಟ ಮಾಡಲಾಗಿದೆ.

English summary
In the financial year 2020-2021 (upto 12th January 2021), sales worth Rs. 484 Cr were recorded at the 7064 Pradhan Mantri Bhartiya Jan Aushadhi Kendras across all districts of the country selling quality generic medicines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X