ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಮೀಕ್ಷೆ; ಮಹಾರಾಷ್ಟ್ರ, ಹರ್ಯಾಣದಲ್ಲಿ ಯಾರಿಗೆ ಜಯ?

|
Google Oneindia Kannada News

ಬೆಂಗಳೂರು, ಅಕ್ಟೋಬರ್ 18 : ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ಅಕ್ಟೋಬರ್ 21ರಂದು ಮತದಾನ ನಡೆಯಲಿದೆ.

ಮಹಾರಾಷ್ಟ್ರದ 288 ಮತ್ತು ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಪ್ರಚಾರ ಬಿರುಸುಗೊಂಡಿದೆ. ಅಕ್ಟೋಬರ್ 21ರಂದು ಮತದಾನ ನಡೆಯಲಿದ್ದು, 24ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

ಮಹಾರಾಷ್ಟ್ರ ಚುನಾವಣೆಯಲ್ಲಿ ಕುಟುಂಬ ರಾಜಕೀಯದ ಬೇರುಗಳುಮಹಾರಾಷ್ಟ್ರ ಚುನಾವಣೆಯಲ್ಲಿ ಕುಟುಂಬ ರಾಜಕೀಯದ ಬೇರುಗಳು

ಜನ್ ಕೀ ಬಾತ್ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು ಎರಡೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿದ ಬಿಜೆಪಿ ವಿಧಾನಸಭೆ ಚುನಾವಣೆಗಳಲ್ಲೂ ಗೆಲುವಿನ ಓಟ ಮುಂದುವರೆಸಲಿದೆ.

ಹರ್ಯಾಣ ಚುನಾವಣೆಗೂ ಮುನ್ನವೇ ಬಿಜೆಪಿಗೆ ಗೆಲುವಿನ ಮುನ್ಸೂಚನೆ ಹರ್ಯಾಣ ಚುನಾವಣೆಗೂ ಮುನ್ನವೇ ಬಿಜೆಪಿಗೆ ಗೆಲುವಿನ ಮುನ್ಸೂಚನೆ

ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ಪ್ರಸ್ತುತ ಬಿಜೆಪಿಯೇ ಅಧಿಕಾರ ನಡೆಸುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿಯೂ ಪಕ್ಷ ಗೆದ್ದು ಪುನಃ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆ ಹೇಳಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದೆ.

ಮಹಾರಾಷ್ಟ್ರ ಚುನಾವಣೆ: ಬಿಜೆಪಿ ಮೈತ್ರಿಕೂಟಕ್ಕೆ ಸಿಹಿ ಸುದ್ದಿ ಕೊಟ್ಟ ಸಮೀಕ್ಷೆ ಮಹಾರಾಷ್ಟ್ರ ಚುನಾವಣೆ: ಬಿಜೆಪಿ ಮೈತ್ರಿಕೂಟಕ್ಕೆ ಸಿಹಿ ಸುದ್ದಿ ಕೊಟ್ಟ ಸಮೀಕ್ಷೆ

ಮಹಾರಾಷ್ಟ್ರದಲ್ಲಿ ಎಷ್ಟು ಸೀಟು

ಮಹಾರಾಷ್ಟ್ರದಲ್ಲಿ ಎಷ್ಟು ಸೀಟು

ಮಹಾರಾಷ್ಟ್ರದಲ್ಲಿ 288 ವಿಧಾನಸಭಾ ಕ್ಷೇತ್ರಗಳಿವೆ. ಬಹುಮತ ಪಡೆಯಲು ಮ್ಯಾಜಿಕ್ ನಂಬರ್ 145. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 142 ರಿಂದ 147 ಸ್ಥಾನದಲ್ಲಿ ಜಯಗಳಿಸಬಹುದು ಎಂದು ಸಮೀಕ್ಷೆ ಹೇಳಿದೆ. ಶಿವಸೇನೆ 83-85, ಕಾಂಗ್ರೆಸ್ 21-23, ಎನ್‌ಸಿಪಿ 27-29 ಕ್ಷೇತ್ರದಲ್ಲಿ ಗೆಲ್ಲಬಹುದು ಎಂಬುದು ಸಮೀಕ್ಷೆಯ ವರದಿ.

ಏಕಾಂಗಿಯಾಗಿ ಬಿಜೆಪಿ ಗೆಲುವು

ಏಕಾಂಗಿಯಾಗಿ ಬಿಜೆಪಿ ಗೆಲುವು

ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಮೈತ್ರಿ ಮಾಡಿಕೊಂಡು ಬಿಜೆಪಿ ಚುನಾವಣೆ ಎದುರಿಸುತ್ತಿದೆ. 288 ಕ್ಷೇತ್ರಗಳ ಪೈಕಿ ಶಿವಸೇನೆ 124, ಬಿಜೆಪಿ 164 ಸ್ಥಾನಗಳಲ್ಲಿ ಕಣಕ್ಕಿಳಿದಿದೆ. ಸಮೀಕ್ಷೆ ವರದಿ ಪ್ರಕಾರ ಬಿಜೆಪಿ ರಾಜ್ಯದಲ್ಲಿ ಏಕಾಂಗಿಯಾಗಿ ಜಯಗಳಿಸಲಿದೆ. 142-147 ಸ್ಥಾನ ಬಿಜೆಪಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ.

ಹರ್ಯಾಣ ವಿಧಾನಸಭೆ

ಹರ್ಯಾಣ ವಿಧಾನಸಭೆ

ಹರ್ಯಾಣ ವಿಧಾನಸಭೆಯ 90 ಸ್ಥಾನಗಳಿಗೆ ಅಕ್ಟೋಬರ್ 21ರಂದು ಮತದಾನ ನಡೆಯಲಿದೆ. ಬಹುಮತ ಪಡೆಯಲು ಮ್ಯಾಜಿಕ್ ನಂಬರ್ 46. ಬಿಜೆಪಿ 58-70, ಕಾಂಗ್ರೆಸ್‌ 12-15, ಜೆಜೆಪಿ 5-8 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ಕಾಂಗ್ರೆಸ್‌ಗೆ ಮತ್ತೆ ಹಿನ್ನಡೆ?

ಕಾಂಗ್ರೆಸ್‌ಗೆ ಮತ್ತೆ ಹಿನ್ನಡೆ?

ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್‌ಗೆ ಮತ್ತೊಮ್ಮೆ ಹಿನ್ನಡೆಯಾಗಲಿದೆ. ಚುನಾವಣೆ ಸೋಲಿನ ಬಳಿಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸೋನಿಯಾ ಗಾಂಧಿಯನ್ನು ಎಐಸಿಸಿ ಅಧ್ಯಕ್ಷರಾಗಿ ಪುನಃ ನೇಮಕ ಮಾಡಲಾಗಿದೆ. ಅವರು ಅಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

English summary
Jan ki Baat pre poll survey predicted that BJP will won Haryana and Maharashtra assembly elections 2019. Election will be held on 21 October 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X