ಆಂಧ್ರ ಪ್ರದೇಶ ಚುನಾವಣೆ; ಪವನ್ ಕಲ್ಯಾಣ್ ಮಹತ್ವದ ಘೋಷಣೆ
ಹೈದರಾಬಾದ್, ಸೆಪ್ಟೆಂಬರ್ 14; ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ ಸಮಯದಲ್ಲಿ ಮಹತ್ವದ ಘೋಷಣೆಯೊಂದು ನಡೆದಿದೆ. ನಟ ಮತ್ತು ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಗುರುವಾರ ಈ ಘೋಷಣೆಯನ್ನು ಮಾಡಿದ್ದಾರೆ.
ಜನಸೇನಾ ಪಕ್ಷ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಮುಂದಿನ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿವೆ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ. ಈ ಹೇಳಿಕೆ ಆಂಧ್ರ ಪ್ರದೇಶದ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಂಧನದ ಬಳಿಕ ರಾಜ್ಯ ರಾಜಕೀಯ ಮತ್ತಷ್ಟು ಕಾವೇರಿದೆ. ಇಂತಹ ಸಂದರ್ಭದಲ್ಲಿಯೇ ಪವನ್ ಕಲ್ಯಾಣ್ ಮೈತ್ರಿಯ ಘೋಷಣೆ ಮಾಡಿದ್ದಾರೆ. ಭಾನುವಾರ ಚಂದ್ರಬಾಬು ನಾಯ್ಡು ಭೇಟಿಗೆ ತೆರಳುತ್ತಿದ್ದ ಪವನ್ ಕಲ್ಯಾಣ್‌ರನ್ನು ಪೊಲೀಸರು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆದಿದ್ದರು.
ಎನ್. ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್ ಜಗನ್ ಮೋಹನ ರೆಡ್ಡಿ ನೇತೃತ್ವದ ಆಂಧ್ರ ಪ್ರದೇಶ ಸರ್ಕಾರದ ವಿರುದ್ಧ ಹಲವು ಹೋರಾಟಗಳನ್ನು ಮಾಡಿಕೊಂಡು ಬಂದಿದ್ದಾರೆ. ಈಗ ಅವರು ಚುನಾವಣೆಗೆ ಕೆಲವೇ ತಿಂಗಳು ಇರುವಾಗ ಮೈತ್ರಿಯ ಘೋಷಣೆ ಮಾಡಿದ್ದಾರೆ.
ಜಗನ್ ವಿರುದ್ಧ ಹೋರಾಟ; ಆಂಧ್ರ ಪ್ರದೇಶ ವಿಧಾನಸಭೆ 175 ಸ್ಥಾನಗಳನ್ನು ಹೊಂದಿದೆ. ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 88. 2019ರ ಚುನಾವಣೆಯಲ್ಲಿ ಜಗನ್ ಮೋಹನ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ 151 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಪೂರ್ಣ ಬಹುಮತ ಪಡೆದು ಅಧಿಕಾರ ಹಿಡಿಯಿತು. ಟಿಡಿಪಿ 23 ಸ್ಥಾನಗಳಲ್ಲಿ ಮಾತ್ರ ಜಯಗಳಿಸಿತು.
ಸದ್ಯ ಎನ್. ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್ ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. 2024ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇಂತಹ ಸಮಯದಲ್ಲಿಯೇ ಎನ್. ಚಂದ್ರಬಾಬು ನಾಯ್ಡು ಬಂಧಿಸಲಾಗಿದೆ.
ಕಳೆದ ಶನಿವಾರ ಮುಂಜಾನೆ 6 ಗಂಟೆಗೆ ಆಂಧ್ರ ಪ್ರದೇಶದ ಕೌಶಾಲಾಭಿವೃದ್ಧಿ ನಿಗಮದಲ್ಲಿ ನಡೆದಿರುವ 550 ಕೋಟಿ ರೂ. ಅವ್ಯವಹಾರ ಪ್ರಕರಣದಲ್ಲಿ ಎನ್. ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಅವರು ಮೊದಲ ಆರೋಪಿ.
ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ನೇತೃತ್ವದ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಲಾಗುತ್ತಿದೆ. ಚಂದ್ರಬಾಬು ನಾಯ್ಡು ಬಂಧನದ ಬಳಿಕ ವೈಎಸ್ಆರ್ ಕಾಂಗ್ರೆಸ್ ಮತ್ತು ಟಿಡಿಪಿ ನಡುವೆ ರಾಜಕೀಯ ಆರೋಪ ಪ್ರತ್ಯಾರೋಪ ಜೋರಾಗಿದೆ.
ಈಗಾಗಲೇ ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಘೋಷಣೆ ಮಾಡಿದ್ದಾರೆ. ವಿಶೇಷವಾಗಿ ವಿನ್ಯಾಸಗೊಳಿಸಿದ ವಾಹನದಲ್ಲಿ ಅವರು ಈಗಾಗಲೇ ರಾಜ್ಯದಲ್ಲಿ 'ವಾರಾಹಿ' ಚುನಾವಣಾ ಯಾತ್ರೆಯನ್ನು ಮಾಡಿದ್ದಾರೆ. ಅಣ್ಣಾವರಂನಿಂದ ಪಶ್ಚಿಮ ಗೋದಾವರಿಯ ಭೀಮಾವರಂ ತನಕ ಈ ಯಾತ್ರೆ ನಡೆದಿದೆ.
"ಜನಸೇನಾ ಪಕ್ಷವು ವಿಧಾನಸಭೆಯನ್ನು ಪ್ರವೇಶಿಸಲಿದ್ದು, ಹೆಜ್ಜೆಗುರುತುಗಳನ್ನು ಮೂಡಿಸಲಿದೆ. ಜನರ ಜೊತೆ ಸಾಧ್ಯವಾದಷ್ಟು ಮಟ್ಟಿಗೆ ಪಕ್ಷ ನಿಲ್ಲಲಿದೆ. ಜಗನ್ ಮೋಹನ್ ರೆಡ್ಡಿ ಸರಿಯಾದ ರೀತಿಯಲ್ಲಿ ಆಡಳಿತ ನಡೆಸಲಿ. ಇಲ್ಲವಾದಲ್ಲಿ ಮುಂದೆ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖಸ್ಥರು ನೆಲದ ಮೇಲೆ ಕೂರುವಂತೆ ಮಾಡುತ್ತೇನೆ" ಎಂದು ಪವನ್ ಕಲ್ಯಾಣ್ ಘೋಷಣೆ ಮಾಡಿದ್ದಾರೆ.
2019ರ ಚುನಾವಣೆಯಲ್ಲಿ ಜನಸೇನಾ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿತ್ತು. ಪವನ್ ಕಲ್ಯಾಣ್ ಭೀಮಾವರಂ ಸೇರಿ ಎರಡು ಕಡೆ ನಿಂತು ಸೋಲು ಕಂಡಿದ್ದರು. ರಾಪಕ ವರಪ್ರಸಾದ್ ಎಂಬುವವರು ಮಾತ್ರ ಗೆದ್ದು ಪಕ್ಷ ಚುನಾವಣೆಯಲ್ಲಿ1 ಸ್ಥಾನದಲ್ಲಿ ಗೆಲುವು ಕಂಡಿತ್ತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications