ಜಯಲಲಿತಾ ಅಕ್ರಮ ಆಸ್ತಿ ಕೇಸ್ : ಕರ್ನಾಟಕದ ವಾದವೇನು?
ಬೆಂಗಳೂರು, ಜನವರಿ 20 : ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ಮೇಲ್ಮನವಿ ಅರ್ಜಿ ವಿಚಾರಣೆ ಫೆ.2ರಿಂದ ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ. ವಿಚಾರಣೆ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್ ವಾದ ಮಂಡನೆ ಮಾಡಲು ಅವಕಾಶ ನೀಡಲಿಲ್ಲ ಎಂದು ಕರ್ನಾಟಕ ಸರ್ಕಾರ ವಾದ ಮಂಡಿಸಲಿದೆ.
ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಆರೋಪ ಮುಕ್ತಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಫೆ.2ರಿಂದ ದಿನ ಬಿಟ್ಟು ದಿನ ಈ ಅರ್ಜಿಯ ವಿಚಾರಣೆ ನಡೆಯಲಿದೆ. [ಫೆ.2ರಿಂದ ಜಯಲಲಿತಾ ಅರ್ಜಿ ವಿಚಾರಣೆ]

ಸರ್ಕಾರದ ಪರವಾಗಿ ವಾದ ಮಂಡನೆ ಮಾಡುವ ವಿಶೇಷ ಸರ್ಕಾರಿ ಅಭಿಯೋಜಕ ಬಿ.ವಿ.ಆಚಾರ್ಯ ಅವರು, ಕರ್ನಾಟಕ ಹೈಕೋರ್ಟ್ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಲಿಖಿತ ಮನವಿ ಸಲ್ಲಿಸಲು ಮಾತ್ರ ಅವಕಾಶ ನೀಡಿತ್ತು. ವಾದ ಮಂಡನೆಗೆ ಅವಕಾಶ ನೀಡಲಿಲ್ಲ ಎಂದು ಕೋರ್ಟ್ ಮುಂದೆ ವಾದ ಮಂಡನೆ ಮಾಡಲಿದ್ದಾರೆ. [ಜಯಾ ಪ್ರಕರಣದ timeline]
ಪ್ರಕರಣದಲ್ಲಿ ಜಯಲಲಿತಾ, ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್, ಇಳವರಸಿ ಮತ್ತು ಸುಧಾಕರನ್ ಅವರನ್ನು ದೋಷಮುಕ್ತ ಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಬೇಕು ಎಂದು ಸರ್ಕಾರ ಮನವಿ ಮಾಡಲಿದೆ. [ಜಯಲಲಿತಾ ಖುಲಾಸೆಗೊಳಿಸಿದ್ದ ಜಡ್ಜ್ ನಿವೃತ್ತಿ]
ಕರ್ನಾಟಕ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ 4 ವರ್ಷ ಜೈಲು ಶಿಕ್ಷೆ ಮತ್ತು 100 ಕೋಟಿ ರೂ.ಗಳ ದಂಡದ ತೀರ್ಪಿನ ಜಾರಿಗೆ ಮನವಿ ಮಾಡಲಾಗುತ್ತದೆ. ಡಿಎಂಕೆ ನಾಯಕ ಅನ್ಬಳಗನ್ ಅವರು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ಎರಡೂ ಅರ್ಜಿಗಳ ವಿಚಾರಣೆ ಒಟ್ಟಿಗೆ ನಡೆಯಲಿದೆ.
ಹೈಕೋರ್ಟ್ ಆದೇಶವೇನು? : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ.ಜಯಲಲಿತಾ ಅವರು ನಿರ್ದೋಷಿ ಎಂದು ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು 2015ರ ಮೇ 11ರಂದು ತೀರ್ಪು ನೀಡಿದ್ದರು. ನಂತರ ಜಯಲಲಿತಾ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿದ್ದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications