ನವೆಂಬರ್ 23ರ ತನಕ ಜಯಲಲಿತಾಗಿಲ್ಲ ಸಂಕಷ್ಟ

ಬೆಂಗಳೂರು, ಅಕ್ಟೋಬರ್ 12 : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರನ್ನು ಖುಲಾಸೆಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ನವೆಂಬರ್ 23ಕ್ಕೆ ನಡೆಯಲಿದೆ.

ಸೋಮವಾರ ಅರ್ಜಿಯ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್ ನವೆಂಬರ್ 23ಕ್ಕೆ ವಿಚಾರಣೆಯನ್ನು ಮುಂದೂಡಿತು. ಕರ್ನಾಟಕ ಹೈಕೋರ್ಟ್‌ ತೀರ್ಪಿಗೆ ಮಧ್ಯಂತರ ತಡೆಯಾಜ್ಞೆ ನೀಡಬೇಕು ಎಂದು ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಕೋರ್ಟ್ ತಳ್ಳಿ ಹಾಕಿತು. [ಜಯಲಲಿತಾ ಖುಲಾಸೆಗೊಳಿಸಿದ್ದ ಜಡ್ಜ್ ನಿವೃತ್ತಿ]

jayalalithaa

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ, ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್, ಇಳವರಸಿ ಮತ್ತು ಸುಧಾಕರನ್ ಅವರನ್ನು ದೋಷಮುಕ್ತಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.[ಜಯಲಲಿತಾ ಖುಲಾಸೆ, ಹೈಕೋರ್ಟ್ ತೀರ್ಪಿಗೆ ತಡೆ ಇಲ್ಲ]

ಹೈಕೋರ್ಟ್ ಜಯಲಲಿತಾ ಮತ್ತು ಇತರ ಮೂವರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ 4000 ಪುಟಗಳ ಮೇಲ್ಮನವಿಯನ್ನು ಸಲ್ಲಿಸಿದೆ. ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡಿ, ವಿಶೇಷ ಕೋರ್ಟ್ ನೀಡಿದ್ದ 4 ವರ್ಷ ಜೈಲು ಶಿಕ್ಷೆ ಮತ್ತು 100 ಕೋಟಿ ರೂ.ಗಳ ದಂಡದ ತೀರ್ಪಿನ ಜಾರಿಗೆ ಮನವಿ ಮಾಡಿದೆ. [4 ಸಾವಿರ ಪುಟದ ಮೇಲ್ಮನವಿ ಸಲ್ಲಿಸಿದ ಕರ್ನಾಟಕ]

ಕಳೆದ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಪಿ.ಸಿ.ಘೋಷ್ ಮತ್ತು ಆರ್.‌ಕೆ.ಅಗರ್‌ವಾಲ್ ಅವರ ವಿಭಾಗೀಯ ಪೀಠ ಜಯಲಲಿತಾ ಅವರಿಗೆ ನೋಟಿಸ್ ಜಾರಿಗೊಳಿಸಿತ್ತು. ಜಯಲಲಿತಾ ಅವರ ಕಡೆಯಿಂದ ಆಕ್ಷೇಪಣೆ ಸಲ್ಲಿಕೆಯಾದ ಬಳಿಕ ತೀರ್ಪಿಗೆ ಮಧ್ಯಂತರ ತಡೆಯಾಜ್ಞೆ ನೀಡುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿತ್ತು.

ಕರ್ನಾಟಕ ಹೈಕೋರ್ಟ್ ಆದೇಶವೇನು? : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜೆ.ಜಯಲಲಿತಾ ಅವರು ನಿರ್ದೋಷಿ ಎಂದು ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು 2015ರ ಮೇ 11ರಂದು ತೀರ್ಪು ನೀಡಿದ್ದರು. ಮೇ.23ರಂದು ಜಯಲಲಿತಾ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಕರ್ನಾಟಕ ಸರ್ಕಾರ ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದೆ. ಒಂದು ವೇಳೆ ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ಸಿಕ್ಕರೆ, ಸಿಬಿಐ ವಿಶೇಷ ನ್ಯಾಯಾಲಯ ನೀಡಿದ್ದ 4 ವರ್ಷದ ಜೈಲು ಶಿಕ್ಷೆ ತೀರ್ಪು ಜಾರಿಗೆ ಬರಲಿದೆ. [ಪಿಟಿಐ ಚಿತ್ರ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+