ಜಯಾ ಆಸ್ತಿ ಪ್ರಕರಣ, ವಿಚಾರಣೆ ಮುಂದೂಡಲು ಕರ್ನಾಟಕದ ವಿರೋಧ

By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಫೆಬ್ರವರಿ 23 : ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಆಕ್ಷೇಪಣೆ ಸಲ್ಲಿಸಲಿದೆ. ಅರ್ಜಿಯ ವಿಚಾರಣೆಯನ್ನು ಮುಂದೂಡಬೇಕು ಎಂದು ಜಯಲಲಿತಾ ಅವರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಮಂಗಳವಾರ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್‌ಮುಂದೆ ತನ್ನ ಆಕ್ಷೇಪಣೆಯನ್ನು ಸಲ್ಲಿಸಲಿದೆ. ಜಯಲಲಿತಾ ಅವರು ಅರ್ಜಿಯ ವಿಚಾರಣೆ ವಿಳಂಬವಾಗಲಿ ಎಂದು ಪದೇ-ಪದೇ ವಿಚಾರಣೆ ಮುಂದೂಡುವಂತೆ ಮನವಿ ಮಾಡುತ್ತಿದ್ದಾರೆ ಎಂದು ಸರ್ಕಾರ ತನ್ನ ಅರ್ಜಿಯಲ್ಲಿ ಹೇಳಲಿದೆ. [ಜಯಾ ಪ್ರಕರಣದ timeline]

jayalalithaa

ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಯಲಿತಾ ಅವರನ್ನು ಖುಲಾಸೆಗೊಳಿಸಿರುವ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಕರ್ನಾಟಕ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ಫೆ.2ರಿಂದ ಈ ಅರ್ಜಿಯ ವಿಚಾರಣೆ ಸುಪ್ರೀಂಕೋರ್ಟ್‌ನಲ್ಲಿ ದಿನ ಬಿಟ್ಟು ದಿನ ನಡೆಯುತ್ತಿದೆ. ಆದರೆ, ಜಯಲಲಿತಾ ಅವರು ವಿಚಾರಣೆ ಮುಂದೂಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ. [ಜಯಲಲಿತಾ ಅಕ್ರಮ ಆಸ್ತಿ ಕೇಸ್ : ಕರ್ನಾಟಕದ ವಾದವೇನು?]

ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಪಿ.ಸಿ.ಘೋಷ್ ಅವರ ಪೀಠ ನಡೆಸುತ್ತಿದೆ. ಇದೇ ಪೀಠ ಜಯಲಲಿತಾ ಪ್ರಕರಣದಲ್ಲಿ ಕರ್ನಾಟಕ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸುತ್ತಿದೆ. [ಜಯಲಲಿತಾ ಖುಲಾಸೆಗೊಳಿಸಿದ್ದ ಜಡ್ಜ್ ನಿವೃತ್ತಿ]

ಅರುಣಾಚಲ ಪ್ರದೇಶದಲ್ಲಿನ ಪ್ರಕರಣವನ್ನು ಮುಂದಿಟ್ಟುಕೊಂಡು ಜಯಲಲಿತಾ ಅವರು ಜನವರಿಯಲ್ಲಿ ತಮ್ಮ ಅರ್ಜಿಯ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದ್ದರು. ಫೆಬ್ರವರಿಯಲ್ಲಿ ಮತ್ತೊಮ್ಮೆ ಇದೇ ಕಾರಣ ನೀಡಿ ವಿಚಾರಣೆ ಮುಂದೂಡಲು ಕೋರಿದ್ದಾರೆ. ನ್ಯಾ.ಪಿ.ಸಿ.ಘೋಷ್ ಅವರ ಪೀಠ ಈ ಬಗ್ಗೆ ಕರ್ನಾಟಕ ಸರ್ಕಾರದ ಅಭಿಪ್ರಾಯ ಕೇಳಿದೆ.

ತಕ್ಷಣ ವಿಚಾರಣೆ ನಡೆಸಿ : ಮೇಲ್ಮನವಿ ಅರ್ಜಿಯ ವಿಚಾರಣೆ ಮುಂದೂಡುವುದು ಬೇಡ, ಈಗಾಗಲೇ ಅರ್ಜಿಯ ವಿಚಾರಣೆ ವಿಳಂಬವಾಗಿದೆ. ತಕ್ಷಣ ವಿಚಾರಣೆಯನ್ನು ಆರಂಭಿಸಿ ಎಂದು ಕರ್ನಾಟಕ ಸರ್ಕಾರ ತನ್ನ ಆಕ್ಷೇಪಣೆಯಲ್ಲಿ ಕೋರ್ಟ್‌ಗೆ ಮನವಿ ಮಾಡಲಿದೆ.

ಖುಲಾಸೆಗೊಳಿಸಿದೆ : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಜಯಲಲಿತಾ ಅವರಿಗೆ 4 ವರ್ಷಗಳ ಜೈಲು ಶಿಕ್ಷೆ ಮತ್ತು 100 ಕೋಟಿ ರೂ. ದಂಡವನ್ನು ವಿಧಿಸಿ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಜಯಲಲಿತಾ ಅವರು ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ವಿಶೇಷ ಪೀಠದ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು 2015ರ ಮೇ 11ರಂದು ತೀರ್ಪು ಪ್ರಕಟಿಸಿದ್ದರು. ಜಯಲಲಿತಾ ಸೇರಿದಂತೆ ಎಲ್ಲರನ್ನು ಖುಲಾಸೆಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Karnataka Government will file its objections to the adjournment sought by Tamil Nadu Chief Minister, J Jayalalithaa in the disproportionate assets case. In the objections to be filed in the Supreme Court on Tuesday.
Please Wait while comments are loading...