JDS-BJP Alliance: ಬಿಜೆಪಿ-ಜೆಡಿಎಸ್ ಮೈತ್ರಿ ಈಗ ಅಧಿಕೃತ: ಎನ್‌ಡಿಎಗೆ ಸ್ವಾಗತ ಎಂದ ಜೆಪಿ ನಡ್ಡಾ
2024ರ ಲೋಕಸಭಾ ಚುನಾವಣೆಗೆ ಮುನ್ನ ಜೆಡಿಎಸ್ ಈಗ ಅಧಿಕೃತವಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಎನ್‌ಡಿಎ ಒಕ್ಕೂಟಕ್ಕೆ ಸೇರ್ಪಡೆಯಾಗಿದ್ದು, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಎನ್‌ಡಿಎ ಒಕ್ಕೂಟಕ್ಕೆ ಜೆಡಿಎಸ್ ಪಕ್ಷಕ್ಕೆ ಸ್ವಾಗತ ಕೋರಿದ್ದಾರೆ.
ಹಿರಿಯ ಜೆಡಿಎಸ್ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಭೇಟಿಯಾದ ನಂತರ ಈ ಬಗ್ಗೆ ಅಧಿಕೃತ ಘೋಷಣೆ ಮಾಡಲಾಗಿದೆ.

ಎಕ್ಸ್ (ಟ್ವಿಟರ್) ನಲ್ಲಿ ಜೆಪಿ ನಡ್ಡಾ ಈ ಬಗ್ಗೆ ಪೋಸ್ಟ್ ಮಾಡಿದ್ದು, ಜೆಡಿಎಸ್ ನಾಯಕರ ಜೊತೆ ಇರುವ ಫೋಟೊ ಹಂಚಿಕೊಮಡಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ಸಂತಸ ತಂದಿದೆ. ನಾವು ಅವರನ್ನು ಹೃದಯಪೂರ್ವಕವಾಗಿ ಎನ್‌ಡಿಎಗೆ ಸ್ವಾಗತಿಸುತ್ತೇವೆ. ಇದು ಎನ್‌ಡಿಎಯನ್ನು ಮತ್ತಷ್ಟು ಬಲಪಡಿಸುತ್ತದೆ ಮತ್ತು 'ಹೊಸ ಭಾರತ, ಬಲಿಷ್ಠ ಭಾರತ'ಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಯನ್ನು ಇನ್ನಷ್ಟು ಬಲಪಡಿಸುತ್ತದೆ" ಎಂದು ನಡ್ಡಾ ಬರೆದಿದ್ದಾರೆ.
ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದೇನು?
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಹೆಚ್‌ಡಿ ಕುಮಾರಸ್ವಾಮಿ, "ಬಿಜೆಪಿಯೊಂದಿಗೆ ಕೈಜೋಡಿಸುವ ಬಗ್ಗೆ ಔಪಚಾರಿಕವಾಗಿ ಚರ್ಚೆ ಮಾಡಲಾಗಿದೆ. ಪ್ರಾಥಮಿಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಬಹಿರಂಗಪಡಿಸಲಾಗುವುದು, ನಮ್ಮ ಕಡೆಯಿಂದ ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ" ಎಂದು ಹೇಳಿದರು.
ಸ್ವಾಗತಿಸಿದ ಬಿಜೆಪಿ ಕರ್ನಾಟಕ
ಜೆಡಿಎಸ್ ಎನ್‌ಡಿಎ ಒಕ್ಕೂಟ ಸೇರಿಕೊಂಡಿರುವ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ ಜೆಡಿಎಸ್‌ಗೆ ತುಂಬು ಹೃದಯದ ಸ್ವಾಗತ ಕೋರಿದೆ. "ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವ ಹಾಗೂ ಅಭಿವೃದ್ಧಿ ಆಧಾರಿತ ರಾಜಕಾರಣವನ್ನು ಮೆಚ್ಚಿ ಎನ್‌ಡಿಎ ಮೈತ್ರಿಕೂಟದ ಭಾಗವಾಗಲಿರುವ ಜನತಾ ದಳ (ಜಾತ್ಯಾತೀತ) ಪಕ್ಷಕ್ಕೆ ತುಂಬು ಹೃದಯದ ಸ್ವಾಗತ ಮತ್ತು ಅಭಿನಂದನೆಗಳು.
ಇದರಿಂದ ಎನ್‌ಡಿಎ ಮೈತ್ರಿಕೂಟದ ಶಕ್ತಿ ಮತ್ತಷ್ಟು ವೃದ್ಧಿಸಿದೆ ಹಾಗೂ ಪ್ರಧಾನಿ ನರೇಂದ್ರ ಮೋದಿರವರ ನವ ಭಾರತದ ಕನಸನ್ನು ಸಾಕಾರಗೊಳಿಸುವಲ್ಲಿ ಮತ್ತಷ್ಟು ಶಕ್ತಿ ತುಂಬಲಿದೆ. ಎಂದು ಟ್ವೀಟ್‌ನಲ್ಲಿ ಹೇಳಿದೆ.
-
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ












Click it and Unblock the Notifications