ಕೊರೊನಾ ಸೋಂಕು: ಜೆಇಇ ಅಡ್ವಾನ್ಸ್ಡ್‌ಪರೀಕ್ಷೆ-2021 ಮುಂದೂಡಿಕೆ

ನವದೆಹಲಿ, ಮೇ 26: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಸ್ತುತ ಸಾಲಿನ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯನ್ನು ಮುಂದೂಡಲಾಗಿದೆ.

ಜುಲೈ 30ರಂದು ಪರೀಕ್ಷೆ ನಿಗದಿಯಾಗಿತ್ತು, ಕೋವಿಡ್ ಬಿಕ್ಕಟ್ಟಿನ ಕಾರಣ ಪರೀಕ್ಷೆ ಮುಂದೂಡಲಾಗಿದೆ, ಪರಿಷ್ಕೃತ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಲಾಗಿದೆ.

ಈಗಾಗಲೇ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ. ಜೆಇಇ ಪರೀಕ್ಷೆಯ ಮೊದಲ ಎರಡು ಹಂತ ಕಳೆದ ಫೆಬ್ರವರಿ ಮತ್ತು ಮಾರ್ಚ್ ನಲ್ಲಿ ಮುಗಿದಿದೆ.

JEE Advanced 2021 Postponed Due To Covid-19 Pandemic

ಈ ತಿಂಗಳು 27ರಿಂದ ಮೂರು ದಿನಗಳ ಕಾಲ ಜೆಇಇ ಮುಖ್ಯ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪರಿಷ್ಕೃತ ಪರೀಕ್ಷಾ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪರೀಕ್ಷೆಗಿಂತ 15 ದಿವಸ ಮೊದಲು ಪ್ರಕಟಿಸಲಾಗುವುದು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್ ಟಿಎ) ತಿಳಿಸಿದೆ. ದೇಶಾದ್ಯಂತ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಐಸಿಎಸ್‌ಇ 10 ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬುಧವಾರದ ಆರೋಗ್ಯ ಸಚಿವಾಲಯದ ವರದಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,08,921 ಹೊಸ ಕೋವಿಡ್-19 ಪ್ರಕರಣ ಪತ್ತೆಯಾಗಿವೆ. ಇದೇ ವೇಳೆ ಸಾವಿನ ಸಂಖ್ಯೆಯಲ್ಲಿಯೂ ಏರಿಕೆ ಕಂಡುಬಂದಿದ್ದು, 4,157 ಸೋಂಕಿತರು ಮೃತಪಟ್ಟಿದ್ದಾರೆ.

ಇನ್ನು ಮಂಗಳವಾರದಂದು ಒಂದೇ ದಿನ 2,95,955 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ಹಿಂದಿನ ಅಂಕಿ-ಅಂಶ ಗಮನಿಸಿದರೆ ಚೇತರಿಕೆ ಪ್ರಮಾಣವೂ ಕೊಂಚ ಇಳಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+