Breaking: ಜೆಇಇ ಅಡ್ವಾನ್ಸ್ಡ್ 2022 ರ ಫಲಿತಾಂಶ ಪ್ರಕಟ
ನವದೆಹಲಿ, ಸೆ. 11: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆಯ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಅಡ್ವಾನ್ಸ್ಡ್ 2022ರ ಫಲಿತಾಂಶವನ್ನು ಭಾನುವಾರ ಸೆಪ್ಟೆಂಬರ್ 11 ರಂದು ಘೋಷಿಸಿದೆ.
ಈ ವರ್ಷ ಒಟ್ಟು 40,712 ಅಭ್ಯರ್ಥಿಗಳು ಜೆಇಇ ಅಡ್ವಾನ್ಸ್ಡ್ ಪರೀಕ್ಷೆ 2022ರಲ್ಲಿ ಅರ್ಹತೆ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಸ್ಕೋರ್‌ಕಾರ್ಡ್ ಮತ್ತು ಅಂತಿಮ ಕೀ ಉತ್ತರಗಳನ್ನು ಅದರ ಅಧಿಕೃತ ವೆಬ್‌ಸೈಟ್ jeeadv. ac.in.ನಲ್ಲಿ ಡೌನ್‌ಲೋಡ್ ಮಾಡಬಹುದು.
JEE ಅಡ್ವಾನ್ಸ್ಡ್ 2022 ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಕೌನ್ಸೆಲಿಂಗ್ ಪ್ರಕ್ರಿಯೆಯ ನಂತರ ಪ್ರವೇಶಕ್ಕೆ ಅರ್ಹರಾಗಿರುತ್ತಾರೆ.

ಐಐಟಿ ಬಾಂಬೆ ಪ್ರಕಾರ, ಆರ್ ಕೆ ಶಿಶಿರ್ ಈ ವರ್ಷ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಲ್ಲಿ 314 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಮಹಿಳಾ ಟಾಪರ್ ತನಿಷ್ಕಾ ಕಾಬ್ರಾ 277 ಅಂಕಗಳೊಂದಿಗೆ, ಅವರ ಒಟ್ಟಾರೆ ರ‍್ಯಾಂಕ್ AIR 16 ಆಗಿದೆ. ಕ್ರಮವಾಗಿ ಪೋಲು ಲಕ್ಷ್ಮಿ ಸಾಯಿ ಲೋಹಿತ್ ರೆಡ್ಡಿ ಮತ್ತು ಥಾಮಸ್ ಬಿಜು ಚೀರಂವೇಲಿಲ್ ಎರಡನೇ ಮತ್ತು ಮೂರನೇ ರ‍್ಯಾಂಕ್ ಪಡೆದಿದ್ದಾರೆ. ಐಐಟಿ ಬಾಂಬೆ ವರ್ಗವಾರು ಮೆರಿಟ್ ಪಟ್ಟಿಯನ್ನು ಕೂಡ ಬಿಡುಗಡೆ ಮಾಡಿದೆ.
ಆಗಸ್ಟ್ 28 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಮಧ್ಯಾಹ್ನ 2:30 ರಿಂದ ಸಂಜೆ 5:30 ರವರೆಗೆ ಎರಡು ಕಡ್ಡಾಯ ಪತ್ರಿಕೆಗಳಿಗೆ ಪರೀಕ್ಷೆಯನ್ನು ನಡೆಸಲಾಯಿತು. ಈ ಪರೀಕ್ಷೆಯನ್ನು ಮೊದಲು ಜುಲೈ 3 ರಂದು ನಡೆಸಲು ನಿರ್ಧರಿಸಲಾಗಿತ್ತು, ಆದರೆ ನಂತರ ಅದನ್ನು ಆಗಸ್ಟ್ 28ಕ್ಕೆ ಮರು ನಿಗದಿಪಡಿಸಲಾಯಿತು.
JEE ಅಡ್ವಾನ್ಸ್ಡ್ 2022 ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ ?
1) ಸಂಸ್ಥೆಯ ಅಧಿಕೃತ ವೆಬ್‌ಸೈಟ್ jeeadv.ac.in. ಗೆ ಭೇಟಿ ನೀಡಿ
2) ಫಲಿತಾಂಶದ ಲಿಂಕ್ ಅನ್ನು ಕ್ಲಿಕ್ ಮಾಡಿ ಮತ್ತು ನೋಂದಣಿ ಸಂಖ್ಯೆ, ಮೊಬೈಲ್ ಸಂಖ್ಯೆ ಮತ್ತು ಜನ್ಮ ದಿನಾಂಕದೊಂದಿಗೆ ಲಾಗಿನ್ ಮಾಡಿ.
3) ಸ್ಕೋರ್‌ಕಾರ್ಡ್ ಪರದೆಯ ಮೇಲೆ ಕಾಣಿಸುತ್ತದೆ.
4) ಫಲಿತಾಂಶವನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ

JEE-(ಮುಖ್ಯ) ಪರೀಕ್ಷೆಯಿಂದ ಸುಮಾರು 2.62 ಲಕ್ಷ ಅಭ್ಯರ್ಥಿಗಳು JEE-(ಅಡ್ವಾನ್ಸ್ಡ್) ಗೆ ಅರ್ಹತೆ ಪಡೆದಿದ್ದಾರೆ. ಗರಿಷ್ಠ ವಿದ್ಯಾರ್ಥಿಗಳು ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ತೆಲಂಗಾಣದಿಂದ ಬರುತ್ತಾರೆ ಎಂದು ವರದಿಯಾಗಿದೆ.
JEE ಅಡ್ವಾನ್ಸ್ಡ್ 2022 ರ ತಾತ್ಕಾಲಿಕ ಕೀ ಉತ್ತರಗಳನ್ನು ಸೆಪ್ಟೆಂಬರ್ 3 ರಂದು ಅದರ ಅಧಿಕೃತ ವೆಬ್‌ಸೈಟ್-jeeadv.ac.in ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ತಿಂಗಳ ಆರಂಭದಲ್ಲಿ ತಾತ್ಕಾಲಿಕ ಕೀ ಉತ್ತರ ಬಿಡುಗಡೆ ಮಾಡಿದ ನಂತರ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 4 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಯಿತು. ಅಭ್ಯರ್ಥಿಗಳ ಆಕ್ಷೇಪಣೆಗಳ ಆಧಾರದ ಮೇಲೆ ಅಂತಿಮ ಕೀ ಉತ್ತರ ಸಿದ್ಧಪಡಿಸಲಾಗಿದೆ.
ಈ ವರ್ಷ, ಜೆಇಇ ಅಡ್ವಾನ್ಸ್ಡ್ 2022 ರಲ್ಲಿ ಶೇಕಡಾವಾರು ಉತ್ತೀರ್ಣ 26.17 % ಇದೆ. ಕಳೆದ ವರ್ಷ ಶೇಕಡಾ 30 ರಷ್ಟಿದ್ದು, ಈ ಬಾರಿ ಕೊಂಚ ಕಡಿಮೆಯಾಗಿದೆ. "ಜೆಇಇ (ಅಡ್ವಾನ್ಸ್ಡ್) 2022 ರಲ್ಲಿ ಒಟ್ಟು 1,55,538 ಅಭ್ಯರ್ಥಿಗಳು ಪೇಪರ್ 1 ಮತ್ತು 2ಕ್ಕೆ ಪರೀಕ್ಷೆ ಎದುರಿಸಿದ್ದಾರೆ. ಒಟ್ಟು 40,712 ಅಭ್ಯರ್ಥಿಗಳು ಜೆಇಇ (ಅಡ್ವಾನ್ಸ್ಡ್) 2022 ರಲ್ಲಿ ಅರ್ಹತೆ ಪಡೆದಿದ್ದಾರೆ. ಒಟ್ಟು ಅರ್ಹತೆ ಪಡೆದ ಅಭ್ಯರ್ಥಿಗಳಲ್ಲಿ 6,516 ಮಹಿಳೆಯರು" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications