JEE Advanced 2026: ನಾಳೆಯಿಂದಲೇ ರಿಜಿಸ್ಟ್ರೇಷನ್ ಶುರು, ಯಾರು ಅರ್ಹರು? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್ ಸಂಸ್ಥೆಗಳಾದ ಐಐಟಿಗಳಲ್ಲಿ (IIT) ಪ್ರವೇಶ ಪಡೆಯುವುದು ವಿಜ್ಞಾನ ವಿಭಾಗದ ಲಕ್ಷಾಂತರ ವಿದ್ಯಾರ್ಥಿಗಳ ಬಹುದೊಡ್ಡ ಕನಸಾಗಿರುತ್ತದೆ. ಇದೀಗ ಈ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT), ರೂರ್ಕಿ ನಾಳೆ ಅಂದರೆ ಏಪ್ರಿಲ್ 23, 2026 ರಂದು ಜಂಟಿ ಪ್ರವೇಶ ಪರೀಕ್ಷೆ (JEE Advanced 2026) ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಿದೆ.

ಜೆಇಇ ಮೇನ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಗೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಜೆಇಇಯ ಅಧಿಕೃತ ವೆಬ್‌ಸೈಟ್ jeeadv.ac.in ಮೂಲಕ ನೇರವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

JEE Advanced 2026

ಪ್ರಮುಖ ದಿನಾಂಕಗಳು ಮತ್ತು ಪರೀಕ್ಷಾ ವಿವರಗಳು

ನಾಳೆ, ಏಪ್ರಿಲ್ 23 ರಂದು ಬೆಳಿಗ್ಗೆ 10 ಗಂಟೆಗೆ ನೋಂದಣಿ ಲಿಂಕ್ ಅನ್ನು ಸಕ್ರಿಯಗೊಳಿಸಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 2, 2026 ರೊಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಇನ್ನು, ನೋಂದಾಯಿತ ಅಭ್ಯರ್ಥಿಗಳು ತಮ್ಮ ಅರ್ಜಿ ಶುಲ್ಕವನ್ನು ಪಾವತಿಸಲು ಮೇ 4, 2026 ರವರೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಈ ಮಹತ್ವದ ಪ್ರವೇಶ ಪರೀಕ್ಷೆಯು ಪೇಪರ್ 1 ಮತ್ತು ಪೇಪರ್ 2 ಎಂಬ ಎರಡು ಪ್ರಶ್ನೆಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಎರಡೂ ಪತ್ರಿಕೆಗಳಿಗೆ ತಲಾ 3 ಗಂಟೆಗಳ ಕಾಲಾವಕಾಶವಿರುತ್ತದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಎರಡೂ ಪತ್ರಿಕೆಗಳನ್ನು ಬರೆಯಬೇಕಾಗುತ್ತದೆ. ಪೇಪರ್-1 ಪರೀಕ್ಷೆಯು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯಲಿದ್ದು, ಪೇಪರ್-2 ಪರೀಕ್ಷೆಯು ಮಧ್ಯಾಹ್ನ 2:30 ರಿಂದ ಸಂಜೆ 5:30 ರವರೆಗೆ ನಡೆಯಲಿದೆ.

ಯಾರು ಅರ್ಜಿ ಸಲ್ಲಿಸಬಹುದು?

2026ರ ಜೆಇಇ (ಮೈನ್) ಪರೀಕ್ಷೆಯ B.E./B.Tech. ಪತ್ರಿಕೆಯಲ್ಲಿ ಎಲ್ಲಾ ವರ್ಗಗಳನ್ನು ಒಳಗೊಂಡಂತೆ ಅತ್ಯುತ್ತಮ ಸಾಧನೆ ಮಾಡಿದ 2,50,000 ಅಭ್ಯರ್ಥಿಗಳು ಮಾತ್ರ ಈ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಜೆಇಇ ಅಡ್ವಾನ್ಸ್ಡ್ 2026: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?

1. ವಜೆಇಇ ಅಡ್ವಾನ್ಸ್ಡ್ ಅಧಿಕೃತ ವೆಬ್‌ಸೈಟ್ jeeadv.ac.in ಗೆ ಭೇಟಿ ನೀಡಿ.

2. ಮುಖಪುಟದಲ್ಲಿ ಲಭ್ಯವಿರುವ 'JEE Advanced 2026 Registration' ಲಿಂಕ್ ಮೇಲೆ ಕ್ಲಿಕ್ ಮಾಡಿ.

3. ಈಗ ಹೊಸ ಪುಟವೊಂದು ತೆರೆದುಕೊಳ್ಳಲಿದ್ದು, ಅಲ್ಲಿ ಅಭ್ಯರ್ಥಿಗಳು ತಮ್ಮ ನೋಂದಣಿ ವಿವರಗಳನ್ನು ನಿಖರವಾಗಿ ನಮೂದಿಸಬೇಕು.

4. ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ನಂತರ, ನಿಮ್ಮ ಖಾತೆಗೆ ಲಾಗಿನ್ ಆಗಿ.

5. ಈಗ ಪರದೆಯ ಮೇಲೆ ಕಾಣುವ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಮತ್ತು ಆನ್‌ಲೈನ್ ಮೂಲಕ ನಿಗದಿತ ಅರ್ಜಿ ಶುಲ್ಕವನ್ನು ಪಾವತಿಸಿ.

6. ಎಲ್ಲಾ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿದ ನಂತರ 'Submit' ಬಟನ್ ಮೇಲೆ ಕ್ಲಿಕ್ ಮಾಡಿ, ನಿಮ್ಮ ಅರ್ಜಿಯನ್ನು ಸಲ್ಲಿಸಿ.

7. ಭವಿಷ್ಯದ ಉಲ್ಲೇಖಗಳಿಗಾಗಿ ದೃಢೀಕರಣ ಪುಟವನ್ನು ಡೌನ್‌ಲೋಡ್ ಮಾಡಿಕೊಳ್ಳಿ ಮತ್ತು ಅದರ ಪ್ರಿಂಟೌಟ್ ತೆಗೆದು ನಿಮ್ಮ ಬಳಿ ಭದ್ರವಾಗಿಟ್ಟುಕೊಳ್ಳಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+